ರಾಜ್ಯಸಭೆಗೆ ಬಿಎಸ್ಪಿ ನಾಯಕಿ ಮಾಯಾವತಿ ನೀಡಿದ್ದ ರಾಜೀನಾಮೆ ಅಂಗೀಕಾರ
ನವದೆಹಲಿ, ಜುಲೈ 20: ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ನಾಯಕಿ ಮಾಯಾವತಿ ರಾಜ್ಯಸಭಾ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ.
ಜುಲೈ 18ರಂದು ರಾಜ್ಯಸಭೆಯಲ್ಲಿ ಮಾತನಾಡಲು ಸ್ಪೀಕರ್ ಅವಕಾಶ ನಿರಾಕರಿಸಿದ್ದನ್ನು ಪ್ರತಿಭಟಿಸಿ ಮಾಯಾವತಿ ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಮಾತ್ರವಲ್ಲ ಅವತ್ತೇ ಸಂಜೆ ಸಭಾಪತಿಗಳಿಗೆ ರಾಜೀನಾಮೆ ಪತ್ರ ರವಾನಿಸಿದ್ದರು.

ಆದರೆ, ಮಾಯಾವತಿ ರಾಜೀನಾಮೆ ನೀಡಿದ್ದು ನಾಟಕ; ನಿಗದಿತ ನಮೂನೆಯಲ್ಲಿ ರಾಜೀನಾಮೆ ಪತ್ರ ನೀಡದೆ, ತಮ್ಮ ರಾಜೀನಾಮೆ ಅಂಗೀಕಾರವಾಗುವುದಿಲ್ಲ ಎಂದರಿತೂ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಟೀಕೆ ಕೇಳಿ ಬಂದಿತ್ತು.
ಇದೀಗ ರಾಜೀನಾಮೆ ಅಂಗೀಕಾರವಾಗಿದ್ದು ತಮ್ಮ ಹೇಳಿಕೆ ನಾಟಕವಲ್ಲ ಎಂಬುದನ್ನು ಮಾಯಾವತಿ ನಿರೂಪಿಸಿದ್ದಾರೆ.
ಇದೀಗ ಪ್ರಹಸನ ಎಂದವರು ಏನು ಹೇಳುತ್ತಾರೋ ಗೊತ್ತಿಲ್ಲ.












Click it and Unblock the Notifications