ಕೇಂದ್ರ ಬಜೆಟ್ 2021; 11 ಸಾವಿರ ಕಿ. ಮೀ. ರಾಷ್ಟ್ರೀಯ ಹೆದ್ದಾರಿ

ನವದೆಹಲಿ, ಫೆಬ್ರವರಿ 01; "2022ರ ಮಾರ್ಚ್ ವೇಳೆಗೆ ದೇಶದಲ್ಲಿ 11 ಸಾವಿರ ಕಿ. ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಪೂರ್ಣಗೊಳಿಸುವುದಾಗಿ" ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

ಸೋಮವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್ ಭಾಷಣದಲ್ಲಿ ಅವರು ರಾಷ್ಟ್ರೀಯ ಹೆದ್ದಾರಿ ಯೋಜನೆ, ಭಾರತ್ ಮಾಲಾ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

"13 ಸಾವಿರ ಕಿ. ಮೀ. ಉದ್ದದ ರಸ್ತೆಗಳನ್ನು ಈಗಾಗಲೇ 3.3 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ನಿರ್ಮಾಣ ಮಾಡಲಾಗಿದೆ. ರೂ. 5.35 ಲಕ್ಷ ಕೋಟಿಯನ್ನು ಭಾರತ್ ಮಾಲಾ ಯೋಜನೆಗಾಗಿ ಖರ್ಚು ಮಾಡಲಾಗಿದೆ. ಇದರ ಅಡಿ 3,800 ಕಿ. ಮೀ. ರಸ್ತೆ ನಿರ್ಮಾಣ ಮಾಡಲಾಗಿದೆ" ಎಂದರು.

Budget 11,000 KMs Of National Highway Corridor By 2022 March

"2022ರ ಮಾರ್ಚ್ ವೇಳೆಗೆ 8,500 ಕಿ. ಮೀ. ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದ್ದು, 11 ಸಾವಿರ ಕಿ. ಮೀ.ಗಳ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್ ನಿರ್ಮಾಣವಾಗಲಿದೆ" ಎಂದರು.

"ತಮಿಳುನಾಡು ರಾಜ್ಯದಲ್ಲಿ 3,500 ಕಿ. ಮೀ. ಕಾರಿಡಾರ್. ಕೇರಳದಲ್ಲಿ 1,100 ಕಿ. ಮೀ. ರಸ್ತೆ ನಿರ್ಮಾಣಕ್ಕಾಗಿ 65,000 ಕೋಟಿ ವೆಚ್ಚ ಮಾಡಲಾಗುತ್ತದೆ" ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

"ಪಶ್ಚಿಮ ಬಂಗಾಳದಲ್ಲಿ 675 ಕಿ. ಮೀ. ರಸ್ತೆ ನಿರ್ಮಾಣಕ್ಕಾಗಿ 95,000 ಕೋಟಿ, ಅಸ್ಸಾಂ ರಾಜ್ಯದಲ್ಲಿ 1,300 ಕಿ. ಮೀ. ರಸ್ತೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುತ್ತದೆ" ಎಂದು ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+