ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್ : ಪ್ರತಿ ಗ್ರಾಮ ಪಂಚಾಯಿತಿಗೂ ಇಂಟರ್‌ ನೆಟ್ ಸೌಲಭ್ಯ

|
Google Oneindia Kannada News

ಬೆಂಗಳೂರು, ಜುಲೈ 05 : ದೇಶದ ಪ್ರತಿ ಗ್ರಾಮ ಪಂಚಾಯಿತಿಗೂ ಇಂಟರ್ ನೆಟ್ ಸೌಲಭ್ಯ ಒದಗಿಸಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು. ಭಾರತ್ ನೆಟ್ ಯೋಜನೆಯ ವೇಗವನ್ನು ಹೆಚ್ಚಿಲು ಉದ್ದೇಶಿಸಲಾಗಿದೆ.

ನಿರ್ಮಲಾ ಚೊಚ್ಚಲ ಬಜೆಟ್ : ಯಾವುದು ಏರಿಕೆ ? ಯಾವುದು ಇಳಿಕೆ? ನಿರ್ಮಲಾ ಚೊಚ್ಚಲ ಬಜೆಟ್ : ಯಾವುದು ಏರಿಕೆ ? ಯಾವುದು ಇಳಿಕೆ?

2019-20ರ ಬಜೆಟ್ ಕೇಂದ್ರ ಬಜೆಟ್‌ ಅನ್ನು ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಮಂಡಿಸಿದರು. ನರೇಂದ್ರ ಮೋದಿ ಸರ್ಕಾರದ 2ನೇ ಮತ್ತು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮೊದಲ ಬಜೆಟ್‌ನಲ್ಲಿ ಹಲವು ಆಶ್ವಾಸನೆಗಳನ್ನು ನೀಡಲಾಗಿದೆ.

ಕೇಂದ್ರ ಬಜೆಟ್ Live Updates: ತೈಲ, ಚಿನ್ನ, ಮದ್ಯ ದುಬಾರಿಕೇಂದ್ರ ಬಜೆಟ್ Live Updates: ತೈಲ, ಚಿನ್ನ, ಮದ್ಯ ದುಬಾರಿ

ದೇಶದ ಪ್ರತಿ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳಲ್ಲೂ ಇಂಟರ್ ನೆಟ್ ಸೇವೆ ಒದಗಿಸಲು ಭಾರತ್ ನೆಟ್ ಯೋಜನೆಯ ವೇಗ ಹೆಚ್ಚಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದರು.

Budget 2019 : Internet connectivity to every panchayat

ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನದ ಅಡಿಯಲ್ಲಿ ಈಗಾಗಲೇ ಜಾರಿಗೆ ತರಲಾಗಿರುವ ಭಾರತ್ ನೆಟ್ ಯೋಜನೆಗೆ 'ಜಾಗತಿಕ ಸೇವಾ ಬಾಧ್ಯತಾ ಅನುದಾನ'ದ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಬಜೆಟ್ 2019: ಪ್ರತಿ ಹಳ್ಳಿಗೆ ಅಂತರ್ಜಾಲ, ಮತ್ತೊಮ್ಮೆ ಘೋಷಣೆ ಬಜೆಟ್ 2019: ಪ್ರತಿ ಹಳ್ಳಿಗೆ ಅಂತರ್ಜಾಲ, ಮತ್ತೊಮ್ಮೆ ಘೋಷಣೆ

ಡಿಜಿಟಲ್ ಸಾಕ್ಷರತಾ ಅಭಿಯಾನದಡಿ ಇದುವರೆಗೂ 2 ಕೋಟಿ ಗ್ರಾಮೀಣ ಭಾರತೀಯರನ್ನು ಡಿಜಿಟಲ್ ಸಾಕ್ಷರರನ್ನಾಗಿ ಮಾಡಿರುವುದಾಗಿಯೂ ಕೇಂದ್ರ ಬಜೆಟ್ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

English summary
Budget 2019 in Kannada : Internet connectivity to every panchayat in the country under Bharat Net project announced in union budget Budget 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X