ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ 2019: ಮುದ್ರಾ ಯೋಜನೆಯಡಿ ಮಹಿಳೆಯರಿಗೆ 1 ಲಕ್ಷ ರೂ. ಸಾಲ

|
Google Oneindia Kannada News

ನವದೆಹಲಿ, ಜುಲೈ 05: ಮುದ್ರಾ ಯೋಜನೆಯಡಿ ಮಹಿಳೆಯರಿಗೆ 1 ಲಕ್ಷ ರೂ. ಸಾಲ ನೀಡುವ ಘೋಷಣೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಡಿದರು.

ಶುಕ್ರವಾರ ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್, "ಮಹಿಳೆಯರ ಕೊಡುಗೆ ಇಲ್ಲದ ಕ್ಷೇತ್ರವೇ ಇಲ್ಲ, ಮಹಿಳೆ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ" ಎಂದರು.

ಕೇಂದ್ರ ಬಜೆಟ್ Liive Updates: ಈ ವರ್ಷದಲ್ಲಿ ದೇಶ ಬಯಲುಶೌಚ ಮುಕ್ತಕೇಂದ್ರ ಬಜೆಟ್ Liive Updates: ಈ ವರ್ಷದಲ್ಲಿ ದೇಶ ಬಯಲುಶೌಚ ಮುಕ್ತ

ಕಡಿಮೆ ಬಡ್ಡಿದರಲ್ಲಿ ಮಹಿಳೆಯರಿಗೆ ಸಾಲ ನೀಡುವ ಮೂಲಕ ಅವರು ಸ್ವಾವಲಂಬಿಗಳಾಗಲು ಉತ್ತೇಜನ ನೀಡಲಾಗುವುದು ಎಂದು ಅವರು ಹೇಳಿದರು. ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳ ಮೂಲಕ ಸ್ವಾವಲಂಬಿಯಾಗಲು ಪ್ರಯತ್ನಿಸುತ್ತಿರುವವರಿಗೆ ಉತ್ತೇಜನ ನೀಡಲುವ ಸಲುವಾಗಿ ಅತೀ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆಯೇ 'ಮುದ್ರಾ.'

Budget 2019: Woman will be given Rs. 1 lakh loan under Mudra scheme

ಮುದ್ರಾ ಯೋಜನೆಯ ಶೇ. 70 ರಷ್ಟು ಫಲಾನುಭವಿಗಳು ಮಹಿಳೆಯರೇ ಆಗಿರುವುದು ವಿಶೇಷ. ಈ ಬಾರಿ ಹಣಕಾಸು ಸಚಿವರೂ ಮಹಿಳೆಯೇ ಆಗಿರುವುದರಿಂದ ಮಹಿಳೆಯರಿಗೆ ಮತ್ತಷ್ಟು ಕೊಡುಗೆಗಳನ್ನು ನೀಡುವ ನಿರೀಕ್ಷೆ ಇದೆ. ಓ ಹಿಂದಿನ ಅವಧಿಯ ಸರ್ಕಾರ ಮಾತೃತ್ವದ ರಜೆಯನ್ನು 26 ವಾರಗಳಿಗೆ ವಿಸ್ತರಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

ಭಾರತದ ಮೊದಲ ಪೂರ್ಣಾವಧಿ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸಿದ್ದಾರೆ.

English summary
Union Budget 2019: Finance minister nirala Sitharaman said, Women will be given Rs 1,00,000 loan under the Mudra scheme..
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X