ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ -2021-22: ಆರೋಗ್ಯ ವಲಯಕ್ಕೆ 1.2 ಲಕ್ಷ ಕೋಟಿ ನೀಡುತ್ತಾ ಕೇಂದ್ರ ಸರ್ಕಾರ?

|
Google Oneindia Kannada News

ನವದೆಹಲಿ, ಜನವರಿ.26: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ದೇಶವನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮುಂದಿನ ಆಯವ್ಯಯವನ್ನು ರೂಪಿಸುವ ಲಕ್ಷಣ ಗೋಚರಿಸುತ್ತಿವೆ. ಆರೋಗ್ಯ ಮತ್ತು ವೈದ್ಯಕೀಯ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವುದಕ್ಕೆ 2021-22ನೇ ಸಾಲಿನ ಕೇಂದ್ರ ಬಜೆಟ್ ಸಾಕ್ಷಿಯಾಗಲಿದೆ ಎಂಬ ನಿರೀಕ್ಷೆಗಳಿವೆ.

2022ರ ಏಪ್ರಿಲ್ ತಿಂಗಳಿನಿಂದ ಹೊಸ ಆರ್ಥಿಕ ವರ್ಷ ಆರಂಭಗೊಳ್ಳಲಿದೆ. ಮುಂದಿನ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಫೆಬ್ರವರಿ.01ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ.

ಪ್ರತಿಯೊಬ್ಬರಿಗೂ ಉಚಿತ ಕೊರೊನಾ ಲಸಿಕೆ; ಇದು ಪ್ರಧಾನಿ ಮೋದಿ ಘೋಷಣೆಯಲ್ಲ! ಪ್ರತಿಯೊಬ್ಬರಿಗೂ ಉಚಿತ ಕೊರೊನಾ ಲಸಿಕೆ; ಇದು ಪ್ರಧಾನಿ ಮೋದಿ ಘೋಷಣೆಯಲ್ಲ!

ಭಾರತದಲ್ಲಿ ಮುಂದಿನ ನಾಲ್ಕು ವರ್ಷಗಳಲ್ಲಿ ಒಟ್ಟು ದೇಶೀಯ ಉತ್ಪನ್ನದ ಶೇ.4ರಷ್ಟು ವೆಚ್ಚವನ್ನು ಹೆಚ್ಚಿಸುವುದು ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಕೊವಿಡ್-19 ಆರಂಭಿಕ ಹಂತದಲ್ಲಿ ವೈದ್ಯಕೀಯ ವಲಯದಲ್ಲಿ ಎದುರಾದ ಸಮಸ್ಯೆಗಳಿಂದ ಸರ್ಕಾರವು ಎಚ್ಚೆತ್ತುಕೊಂಡಿದೆ. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಆರೋಗ್ಯ ವಲಯವನ್ನು ಸದೃಢಗೊಳಿಸಲು ನಿರ್ಧರಿಸಲಾಗಿದೆ.

1.2 ಲಕ್ಷ ಕೋಟಿ ರೂ. ಆರೋಗ್ಯ ವಲಯಕ್ಕೆ ಮೀಸಲು

1.2 ಲಕ್ಷ ಕೋಟಿ ರೂ. ಆರೋಗ್ಯ ವಲಯಕ್ಕೆ ಮೀಸಲು

ಕೇಂದ್ರದ 2021-22ನೇ ಸಾಲಿನ ಬಜೆಟ್ ನಲ್ಲಿ ಯಾವ ರೀತಿ ಸುಧಾರಣಾ ನೀತಿಗಳನ್ನು ರೂಪಿಸುತ್ತದೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ. ಇದರ ಮಧ್ಯೆ ಕೇಂದ್ರ ಸರ್ಕಾರವು ಆರೋಗ್ಯ ವಲಯಕ್ಕಾಗಿ 1.2 ಲಕ್ಷ ಕೋಟಿ ರೂಪಾಯಿಯನ್ನು ಘೋಷಿಸುವ ನಿರೀಕ್ಷೆಗಳಿವೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ವರ್ಷ ಇದೇ ವಲಯಕ್ಕೆ ಕೇಂದ್ರ ಬಜೆಟ್ ನಲ್ಲಿ 69,000 ಕೋಟಿ ರೂಪಾಯಿ ಘೋಷಿಸಲಾಗಿತ್ತು.

ಕೇಂದ್ರ ಸರ್ಕಾರದಿಂದ ಹೊಸ ಆರೋಗ್ಯ ಯೋಜನೆ

ಕೇಂದ್ರ ಸರ್ಕಾರದಿಂದ ಹೊಸ ಆರೋಗ್ಯ ಯೋಜನೆ

ಫೆಬ್ರವರಿ.01ರಂದು ನಡೆಯಲಿರುವ ಕೇಂದ್ರ ಬಜೆಟ್ ಮಂಡನೆ ಸಂದರ್ಭದಲ್ಲಿಯೇ ಆರೋಗ್ಯ ವಲಯಕ್ಕಾಗಿಯೇ ಹೊಸ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಯಾವ ರೀತಿ ಯೋಜನೆ ರೂಪಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬಜೆಟ್ ಮಂಡನೆ ದಿನವೇ ಕೇಂದ್ರ ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆಗಳಿವೆ.

ಸಾಂಕ್ರಾಮಿಕ ಪಿಡುಗು ಕಲಿಸಿದ ಪಾಠ ದೊಡ್ಡದು

ಸಾಂಕ್ರಾಮಿಕ ಪಿಡುಗು ಕಲಿಸಿದ ಪಾಠ ದೊಡ್ಡದು

* ಆಯುಷ್ಮಾನ್ ಭಾರತ್ ಕಾರ್ಯಕ್ರಮದ ತ್ವರಿತ ಅನುಷ್ಠಾನದ ಜೊತೆಗೆ ಅಭಿವೃದ್ಧಿಪಡಿಸುವುದಕ್ಕೆ ಹೆಚ್ಚಿನ ಒತ್ತು ನೀಡುವುದು

* ವಿಶ್ವದಾದ್ಯಂತ ಆರೋಗ್ಯ ವಲಯದಲ್ಲಿನ ಬದಲಾಣೆಗಳ ಬಗ್ಗೆ ಹಲವು ರಾಷ್ಟ್ರಗಳು ಲಕ್ಷ್ಯವಿಟ್ಟು ನೋಡುತ್ತಿವೆ. ಖಾಸಗಿ ವಲಯದಲ್ಲಿ ವೈದ್ಯಕೀಯ ರಂಗವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸುವುದು

* ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ರಚನೆಯು ಡಿಜಿಟಲ್ ಆರೋಗ್ಯ ತಂತ್ರಜ್ಞಾನಗಳನ್ನು ನಿಯೋಜಿಸುವ ಮೂಲಕ ವೈಯಕ್ತಿಕ ಮತ್ತು ಸಮುದಾಯ ಆರೋಗ್ಯ ಫಲಿತಾಂಶಗಳನ್ನು ಸುಧಾರಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

* ಭಾರತದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗಿನಿಂದಾಗಿ ದೇಶದ ಇತರೆ ವಲಯಗಳಿಗಿಂತ ಅಧಿಕ ಆದ್ಯತೆಯನ್ನು ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕು ಎಂಬ ಪಾಠವನ್ನು ಕಲಿಸಿದೆ. ದೇಶದ ಜಿಡಿಪಿಯಲ್ಲಿ ಶೇ.2.5ರಷ್ಟು ಅನುಪಾತವನ್ನು ಸಾರ್ವಜನಿಕ ಆರೋಗ್ಯ ವಲಯಕ್ಕೆ ಮೀಸಲಿರಿಸಲು ಸಾರ್ವತ್ರಿಕ ಸಹಮತವಿದೆ. ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ರಂಗದ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸುಧಾರಣೆಗಳನ್ನು ಜಾರಿಗೊಳಿಸಬೇಕಿದೆ.

ವೈದ್ಯಕೀಯ ವಲಯದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ

ವೈದ್ಯಕೀಯ ವಲಯದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ

* ವೈದ್ಯಕೀಯ ರಂಗದಲ್ಲಿ ಮೂಲಭೂತ ಸೌಕರ್ಯ, ಸಾವಿನ ಪ್ರಮಾಣ ಮತ್ತು ಮೃತರ ಕುಟುಂಬಕ್ಕೆ ಅಗತ್ಯ ನೆರವು ನೀಡುವ ಕುರಿತು ನೀತಿ ರೂಪಿಸುವ ಸಾಧ್ಯತೆಗಳು ಹೆಚ್ಚಾಗಿವೆ.

* ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಮೊದಲ ಸಾಲಿನ ಯೋಧರಿಗೆ ಸುರಕ್ಷತೆ ನೀಡುವ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸುವುದು.

* ಆರೋಗ್ಯ ವಲಯವನ್ನು ಡಿಜಿಟಲೀಕರಣಗೊಳಿಸುವುದು ಹಾಗೂ ಹೊಸ ಆವಿಷ್ಕಾರಗಳಿಗೆ ಅಗತ್ಯ ಆರ್ಥಿಕ ನೆರವು ನೀಡುವುದು

* ಕೊರೊನಾವೈರಸ್ ಸೋಂಕಿನಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಕೊವಿಡ್-19 ಲಸಿಕೆಗಳ ಉತ್ಪಾದನೆ ಮತ್ತು ವಿತರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವೈದ್ಯಕೀಯ ವಲಯ, ಸಂಶೋಧನೆ ಮತ್ತು ಆರೋಗ್ಯ ರಂಗದಲ್ಲಿ 2021ನೇ ಸಾಲಿನ ಬಜೆಟ್ ಹೊಸ ಮೈಲಿಗಲ್ಲು ಸ್ಥಾಪಿಸುವ ನಿರೀಕ್ಷೆಗಳು ಹೆಚ್ಚಾಗಿವೆ.

* 2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಆರೋಗ್ಯಾಭಿವೃದ್ಧಿ ಮೇಲೆ ಬೆಳಕು ಚೆಲ್ಲುವ ನಿರೀಕ್ಷೆಗಳಿವೆ. ಕತ್ತಲಿನಲ್ಲಿರುವ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಭದ್ರತೆಯನ್ನು ನೀಡುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆಗಳನ್ನು ಅನುಷ್ಠಾನಕ್ಕೆ ತರುವ ನಿರೀಕ್ಷೆಗಳು ಹೆಚ್ಚಿವೆ.

ಕೇಂದ್ರ ಸರ್ಕಾರದಿಂದ ಕೊವಿಡ್ ಸುರಕ್ಷಾ ಮಿಷನ್

ಕೇಂದ್ರ ಸರ್ಕಾರದಿಂದ ಕೊವಿಡ್ ಸುರಕ್ಷಾ ಮಿಷನ್

* ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ನಡುವೆ ಕೇಂದ್ರ ಸರ್ಕಾರವು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದೆ. ಈ ಆರ್ಥಿಕ ಸಾಲಿನ ಬಜೆಟ್ ನಲ್ಲಿ ಆರೋಗ್ಯ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಸ್ವಚ್ಛ ಭಾರತ್, ಆಯುಷ್ಮಾನ್ ಭಾರತ್, ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಮತ್ತು ಇತ್ತೀಚಿನ "ಮಿಷನ್ ಕೊವಿಡ್ ಸುರಕ್ಷಾ" ಯೋಜನೆಗಳು ಕೇಂದ್ರ ಬಜೆಟ್ ನಲ್ಲಿರುವ ದೀರ್ಘಾವಧಿ ಹೂಡಿಕೆಯ ಭಾಗವಾಗಿರಲಿದೆ

* ಕೊರೊನಾವೈರಸ್ ಕುರಿತಾದ ಹೆಚ್ಚಿನ ಸಂಶೋಧನೆ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಅಗತ್ಯವಿರುವ ಕೇಂದ್ರಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಗಣನೀಯ ಪ್ರಮಾಣದ ಹೂಡಿಕೆ ಮಾಡುವುದು

* ಹಕ್ಕಿಜ್ವರ, ಸಾರ್ಸ್, ಮಾರ್ಸ್ ಮತ್ತು ಎಬೋಲಾದ ರೀತಿಯ ಸಾಂಕ್ರಾಮಿಕ ಪಿಡುಗುಗಳ ಬಗ್ಗೆ ಮುನ್ನೆಚ್ಚರಿಕೆ ನೀಡುವಂತೆ ವ್ಯವಸ್ಥೆ ಅಭಿವೃದ್ಧಿಪಡಿಸುವುದು

* ಬ್ಯಾಕ್ಟಿರಿಯಾಗಳು ಹೆಚ್ಚು ಅಪಾಯಕಾರಿ ಆಗುತ್ತಿದ್ದು ಮುಂದಿನ ದಿನಗಳಲ್ಲಿ ಸಾಮಾನ್ಯ ಆರೋಗ್ಯ ಸಮಸ್ಯೆಗಳಿಂದಲೇ ಸಾವು ಸಂಭವಿಸುವ ಅಪಾಯವಿರುತ್ತದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರವು ದೀರ್ಘಾವಧಿಯಲ್ಲಿ ಸಂಶೋಧನೆಗಳ ಮೇಲೆ ಗಣನೀಯ ಪ್ರಮಾಣದ ಹೂಡಿಕೆ ಮಾಡಲಿದೆ.

English summary
Budget 2021 Expectations: People Expected To Hike Healthcare Spending To Rs.1.2 Lakh Crore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X