ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ 2021: ಡಿಜಿಟಲ್ ಪಾವತಿ ಉತ್ತೇಜನಕ್ಕೆ 1,500 ಕೋಟಿ ರೂ

|
Google Oneindia Kannada News

ನವದೆಹಲಿ, ಫೆಬ್ರವರಿ 1: ದೇಶದಲ್ಲಿ ಡಿಜಿಟಲ್ ಪಾವತಿಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ 1,500 ಕೋಟಿ ರೂ ಯೋಜನೆಯ ಪ್ರಸ್ತಾವನೆ ಮುಂದಿಟ್ಟಿದೆ. ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಪಾವತಿಯಲ್ಲಿ ಭಾರಿ ಏರಿಕೆ ಉಂಟಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

'ಡಿಜಿಟಲ್ ವಹಿವಾಟಿಗೆ ಮತ್ತಷ್ಟು ಉತ್ತೇಜನ ನೀಡಲು ಡಿಜಿಟಲ್ ಮಾದರಿ ಪಾವತಿಗೆ ಪ್ರಚಾರ ನೀಡುವ ಸಲುವಾಗಿ ಹಣಕಾಸಿನ ನೆರವು ಒದಗಿಸುವ ಪ್ರಸ್ತಾವಿತ ಯೋಜನೆಗೆ 1,500 ಕೋಟಿ ರೂ ನೀಡಲಾಗುವುದು' ಎಂದು ನಿರ್ಮಲಾ ಸೀತಾರಾಮನ್ ಅವರು ಸೋಮವಾರ 2021-22ನೇ ಸಾಲಿನ ಬಜೆಟ್ ಮಂಡನೆ ವೇಳೆ ತಿಳಿಸಿದರು.

ಬಜೆಟ್ 2021: ಕೇಂದ್ರ ಬಜೆಟ್‌ನ ಪ್ರಮುಖ ಅಂಶಗಳುಬಜೆಟ್ 2021: ಕೇಂದ್ರ ಬಜೆಟ್‌ನ ಪ್ರಮುಖ ಅಂಶಗಳು

2019ರಲ್ಲಿ ಬಜೆಟ್ ಮಂಡಿಸಿದ್ದ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನವನ್ನು (ಎನ್‌ಆರ್‌ಎಫ್) ಪ್ರಕಟಿಸಿದ್ದರು. 'ನಾವು ವಿವಿಧ ಮಾದರಿಗಳ ಮೇಲೆ ಕೆಲಸ ಮಾಡಿದ್ದು, ಕಳೆದ ಐದು ವರ್ಷಗಳಲ್ಲಿ ಎನ್‌ಆರ್‌ಎಫ್ 50,000 ಕೋಟಿ ಬಂಡವಾಳ ಹೂಡಿಕೆ ಕಾಣಲಿದೆ. ಇದು ರಾಷ್ಟ್ರೀಯ ಆದ್ಯತೆಯ ವಲಯಗಳನ್ನು ಗುರುತಿಸುವ ಗುರಿಯೊಂದಿಗೆ ದೇಶದಲ್ಲಿ ಒಟ್ಟಾರೆ ಸಂಶೋಧನಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಗಮನ ಹರಿಸಲಿದೆ' ಎಂದು ಹೇಳಿದರು.

Budget 2021 : FM Announces Rs 1,500 Crore Scheme To Promote Digital Payments

Budget 2021: ಯಾವ ಉತ್ಪನ್ನಗಳ ಮೇಲೆ ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್? Budget 2021: ಯಾವ ಉತ್ಪನ್ನಗಳ ಮೇಲೆ ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್?

ರಾಷ್ಟ್ರೀಯ ಭಾಷಾ ಅನುವಾದ ಯೋಜನೆ ಎಂಬ ಹೊಸ ಕಾರ್ಯಕ್ರಮವನ್ನು ಕೂಡ ಆರಂಭಿಸಲಾಗುವುದು. ಇದು ಪ್ರಾದೇಶಿಕ ಭಾಷಾ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ತಿಳಿಸಿದರು.

English summary
Budget 2021 : Finance Minister Nirmala Sitharaman announces Rs 1,500 crore scheme to promote digital payments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X