ಕೇಂದ್ರ ಬಜೆಟ್-2021ರಲ್ಲಿ ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ
ನವದೆಹಲಿ, ಫೆಬ್ರವರಿ.01: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಎದುರಾದ ಸವಾಲುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ 2021-22ನೇ ಸಾಲಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂಪಾಯಿ ಮೀಸಲು ಇರಿಸಲಾಗಿದೆ.
ಸಂಸತ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಈ ಬಗ್ಗೆ ಘೋಷಿಸಿದ್ದಾರೆ. ದೇಶದಲ್ಲಿ ಆರೋಗ್ಯ ವಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಂಡಿಸುತ್ತಿರುವ 9ನೇ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರವನ್ನು ಸದೃಢಗೊಳಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಿದಂತೆ ತೋರುತ್ತಿದೆ. ಆರೋಗ್ಯ ವಲಯದ ಜೊತೆಗೆ ಕೊವಿಡ್-19 ಲಸಿಕೆ, ಗಾಳಿ ಶುದ್ದೀಕರಣ, ಆರೋಗ್ಯ ಯೋಜನೆಗಳು, ದೇಶೀಯ ಸಂಶೋಧನಾ ಕೇಂದ್ರಗಳು ಮತ್ತು ಸೂಕ್ಷ್ಮಾಣುಗಳ ವೈಜ್ಞಾನಿಕ ಅಧ್ಯಯನ ಘಟಕಕ್ಕೆ ಹಣಕಾಸು ಒದಗಿಸಲಾಗಿದೆ. ಯಾವುದಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎನ್ನುವುದರ ಮಾಹಿತಿ ಇಲ್ಲಿದೆ.

ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ:
- ವಾಯು ಶುದ್ಧೀಕರಣಕ್ಕೆ 22,000 ಕೋಟಿ ರೂಪಾಯಿ
- ಕೊರೊನಾವೈರಸ್ ಲಸಿಕೆ ಉತ್ಪಾದನೆಗೆ 35000 ಕೋಟಿ
- ಆರೋಗ್ಯ ಯೋಜನೆಗಳಿಗಾಗಿ 64,000 ಕೋಟಿ ರೂಪಾಯಿ
- ವಿಶ್ವ ಆರೋಗ್ಯ ಸಂಸ್ಥೆಯ ಒಂದು ಪ್ರಾದೇಶಿಕ ಸಂಶೋಧನಾ ಕೇಂದ್ರ
- ನಾಲ್ಕು ಸೂಕ್ಷ್ಮಾಣುಗಳ ವೈಜ್ಞಾನಿಕ ಅಧ್ಯಯನ ಘಟಕ ಸ್ಥಾಪನೆ












Click it and Unblock the Notifications