ಬಜೆಟ್ 2021: ಅಸಂಘಟಿತ ಕಾರ್ಮಿಕ ವಲಯಕ್ಕೆ ಪಿಂಚಣಿ ವ್ಯವಸ್ಥೆ
ನವದೆಹಲಿ, ಫೆಬ್ರವರಿ 1: ಈ ಬಾರಿಯ ಬಜೆಟ್ ನಲ್ಲಿ ಅಸಂಘಟಿತ ಕಾರ್ಮಿಕ ವಲಯಕ್ಕೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ದೇಶದಲ್ಲಿ ಗಾರೆ ಕೆಲಸ, ಕೂಲಿ ಕಾರ್ಮಿಕರು ಸೇರಿದಂತೆ ಅನೇಕ ವಲಯದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ವಿತ್ತ ಸಚಿವೆ ತಿಳಿಸಿದ್ದಾರೆ.
ಅದೇ ರೀತಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಹೆಚ್ಚು ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲಿ 100 ಸೈನಿಕ ಶಾಲೆಗಳ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

2.8 ಕೋಟಿ ಮನೆಗಳಲ್ಲಿ ವರ್ಷದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಗ್ರಾಹಕರು ಯಾರಿಂದ ಬೇಕಾದರೂ ವಿದ್ಯುತ್ ಖರೀದಿಸಬಹುದು. 2022ಕ್ಕೆ ನ್ಯಾಷನಲ್ ಹೈಡ್ರೋಜನ್ ಎನರ್ಜಿ ಮಿಷನ್ ಗೆ ಚಾಲನೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.












Click it and Unblock the Notifications