ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Budget 2022 Highlights:ಕೇಂದ್ರ ಬಜೆಟ್ 2022: ನಿರ್ಮಲಾ ಸೀತಾರಾಮನ್ ಭಾಷಣದ ಪ್ರಮುಖಾಂಶಗಳು

|
Google Oneindia Kannada News

ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ತೆರಿಗೆ ಪದ್ಧತಿಯಲ್ಲಿ ಕೆಲ ವಿನಾಯ್ತಿ ಸಿಗಬಹುದು ಎಂಬ ನಿರೀಕ್ಷೆಗಳು ವ್ಯಕ್ತವಾಗಿದ್ದವು. ಆದರೆ ವಿತ್ತ ಸಚಿವರ ಇಂದಿನ ಭಾಷಣದಲ್ಲಿ ಇಂಥ ಯಾವುದೇ ಪ್ರಸ್ತಾವಗಳು ಮಂಡನೆಯಾಗಿಲ್ಲ. ಆದಾಯ ತೆರಿಗೆಗೆ ಈ ಬಾರಿ ಯಾವುದೇ ಹೊಸ ಸೆಸ್ ಅಥವಾ ಸರ್​ಚಾರ್ಜ್ ಸೇರಿಲ್ಲ ಎನ್ನುವುದು ಸಮಾಧಾನದ ವಿಷಯ.

Budget 2022: Highlights, Key Takeaways and Important Points of Union Budget in Kannada

- ದೇಶದಲ್ಲಿ ಸಹಜ ಕೃಷಿಗೆ ಒತ್ತು. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಸಣ್ಣ ಉದ್ಯಮಿಗಳ ಸಹಭಾಗಿತ್ವದ ಯೋಜನೆಗಳಿಗೆ ಅವಕಾಶ.
- ಪ್ರವಾಸೋದ್ಯಮದ ಚೇತರಿಕೆಗೆ ಪ್ರೋತ್ಸಾಹಕಗಳ ಮುಂದುವರಿಕೆ.
- ಯುವಜನರಲ್ಲಿ ಕೌಶಲ ಅಭಿವೃದ್ಧಿಗೆ DESH ಇ-ಪೋರ್ಟಲ್ ಆರಂಭ.
-ಒನ್​ ಕ್ಲಾಸ್, ಒನ್ ಟಿವಿ ಚಾನೆಲ್ ಯೋಜನೆಯನ್ನು 1ರಿಂದ 12ನೇ ತರಗತಿವರೆಗೆ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಆರಂಭಿಸಲು ನಿರ್ಧಾರ.
-ವಿಶ್ವಮಟ್ಟದ ಶಿಕ್ಷಣ ದೊರಕಿಸಲು ಡಿಜಿಟಲ್ ವಿಶ್ವವಿದ್ಯಾಲಯ ಆರಂಭ.
-ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಲು ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಯೋಜನೆ ಆರಂಭ.
-ಪಿಎಂ ಗತಿಶಕ್ತಿ.
-ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ.
-ಉತ್ಪಾದಕತೆಯ ವೃದ್ಧಿ.
-ಅವಕಾಶಗಳ ಹೆಚ್ಚಳ.
- ವಿದ್ಯುತ್ ಉತ್ಪಾದನೆ, ವಿತರಣೆಯಲ್ಲಿ ಸುಧಾರಣೆ.
- ಪರಿಸರ ಸಂರಕ್ಷಣೆ.
- ವ್ಯವಸ್ಥಿತ ಹೂಡಿಕೆಗಳಿಗೆ ಒತ್ತು.

 ಆರ್ಥಿಕತೆ ಕುರಿತು ಬಜೆಟ್‌ನಲ್ಲಿ ಹೇಳಿದ್ದೇನು?

ಆರ್ಥಿಕತೆ ಕುರಿತು ಬಜೆಟ್‌ನಲ್ಲಿ ಹೇಳಿದ್ದೇನು?

ಕೇಂದ್ರ ಬಜೆಟ್-2022-23ನ್ನು ಲೋಕಸಭೆಯಲ್ಲಿ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೋವಿಡ್ ಲಾಕ್ ಡೌನ್ ಹಿಂಜರಿತದ ನಂತರ ಆರ್ಥಿಕತೆಯ ಶೀಘ್ರ ಪುನಶ್ಚೇತನ ಮತ್ತು ಆರ್ಥಿಕ ಚೇತರಿಕೆ ಭಾರತದ ಅತಿದೊಡ್ಡ ಶಕ್ತಿಯಾಗಿದೆ, ದೇಶದ ಸ್ಥಿತಿಸ್ಥಾಪಕ್ವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ತಕ್ಷಣವೇ ಶೀಘ್ರ ಆರ್ಥಿಕ ಪುನಶ್ಚೇತನ, ಆರ್ಥಿಕ ಸುಧಾರಣೆ ಭಾರತದ ಬಲವಾದ ಸ್ಥಿತಿಸ್ಥಾಪಕತ್ವ ಶಕ್ತಿಯನ್ನು ತೋರಿಸುತ್ತದೆ ಎಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕದಿಂದ ಆರ್ಥಿಕವಾಗಿ ಮತ್ತು ಆರೋಗ್ಯ ವಿಷಯದಲ್ಲಿ ಕಷ್ಟ, ನೋವು, ತೊಂದರೆಗಳನ್ನು ಕಳೆದೆರಡು ವರ್ಷಗಳಲ್ಲಿ ಅನುಭವಿಸಿದ ಜನರ ಬಗ್ಗೆ ಅನುಕಂಪ ವ್ಯಕ್ತಪಡಿಸಿದ ಅವರು, ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತ ದೇಶದ ಆರ್ಥಿಕ ಬೆಳವಣಿಗೆಯನ್ನು ಶೇಕಡಾ 9.2ರಷ್ಟು ಅಂದಾಜು ಮಾಡಲಾಗಿದೆ ಎಂದಿದ್ದಾರೆ.

ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ನಮ್ಮ ಸರ್ಕಾರ ಭಾರತ @100 ದೃಷ್ಟಿಕೋನವನ್ನು ಹೊಂದಿದ್ದು, ಅದನ್ನು ಕಳೆದ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದ್ದರು ಎಂದು ಸ್ಮರಿಸಿಕೊಂಡರು.


- ಕ್ಯಾಪೆಕ್ಸ್ ಗುರಿಯನ್ನು ಶೇಕಡಾ 35.4 ರಷ್ಟು ವಿಸ್ತರಿಸಲಾಗಿದೆ - ರೂ 5.54 ಲಕ್ಷ ಕೋಟಿಯಿಂದ ರೂ 7.50 ಲಕ್ಷ ಕೋಟಿಗೆ. FY23 ಪರಿಣಾಮಕಾರಿ ಕ್ಯಾಪೆಕ್ಸ್ 10.7 ಲಕ್ಷ ಕೋಟಿ ರೂ
- ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ಭಾರತದ ಬೆಳವಣಿಗೆ ಅತ್ಯಧಿಕ; ನಾವು ಈಗ ಸವಾಲುಗಳನ್ನು ತಡೆದುಕೊಳ್ಳುವ ಪ್ರಬಲ ಸ್ಥಾನದಲ್ಲಿದ್ದೇವೆ
- ECLGS ಕವರ್ ಅನ್ನು 50,000 ರೂ.ಗಳಿಂದ 5 ಲಕ್ಷ ಕೋಟಿಗೆ ವಿಸ್ತರಿಸಲಾಗಿದೆ
ಈ ವರ್ಷದ ಬಜೆಟ್‌ನ ಪ್ರಮುಖ ಗಮನವೆಂದರೆ: ಪ್ರಧಾನಮಂತ್ರಿ ಗತಿ ಶಕ್ತಿ, ಅಂತರ್ಗತ ಅಭಿವೃದ್ಧಿ, ಉತ್ಪಾದಕತೆ ವರ್ಧನೆ, ಸೂರ್ಯೋದಯ ಅವಕಾಶಗಳು, ಶಕ್ತಿ ಪರಿವರ್ತನೆ, ಹವಾಮಾನ ಕ್ರಮ, ಹಣಕಾಸು ಹೂಡಿಕೆ

- ಉತ್ಪಾದಕತೆ ಸಂಯೋಜಿತ ಪ್ರೋತ್ಸಾಹ ಯೋಜನೆಗಳು 14 ವಲಯಗಳಲ್ಲಿವೆ.
ಈ ವಲಯಗಳಲ್ಲಿ 30 ಲಕ್ಷ ಕೋಟಿ ಮೌಲ್ಯದ ಹೂಡಿಕೆ ಮಾಡಲು ಉದ್ದೇಶಿಸಲಾಗಿದೆ.
- ಈ ಬಜೆಟ್ ಸಾರ್ವಜನಿಕ ಹೂಡಿಕೆ ಮತ್ತು ಬಂಡವಾಳ ಹೂಡಿಕೆಗಳ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ನೀಡಲಿದೆ.

 ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

1-ದೇಶಾದ್ಯಂತ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಪ್ರಾಮುಖ್ಯತೆ

2 - ಮೊದಲ ಹಂತದಲ್ಲಿ ಗಂಗಾ ನದಿಯ 5 ಕಿ. ಮೀ. ಸುತ್ತಳತೆಯಲ್ಲಿ ಇರುವ ಕೃಷಿ ಭೂಮಿಯಲ್ಲಿ ಮೊದಲ ಹಂತದಲ್ಲಿ ಚಾಲನೆ

3 - ರೈತರಿಗೆ ಹೈ ಟೆಕ್ ಸೇವೆ ಒದಗಿಸುವ ಯೋಜನೆಗೆ ಚಾಲನೆ

4 - ರೈತರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಟ ಬೆಂಬಲ ಬೆಲೆಯ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ

5 - ಕೃಷಿ ಭೂಮಿಯ ಸಮೀಕ್ಷೆ, ಬೆಳೆ ಸಮೀಕ್ಷೆ ಹಾಗೂ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆಗೆ ಆದ್ಯತೆ

6 - ಡ್ರೋನ್ ಬಳಕೆ ಪ್ರೋತ್ಸಾಹಿಸಲು ಸ್ಟಾರ್ಟ್ ಅಪ್‌ಗಳಿಗಾಗಿ ‘ಡ್ರೋನ್ ಶಕ್ತಿ' ಯೋಜನೆ

7 - 1 ಕೋಟಿ 63 ಲಕ್ಷ ಕೃಷಿಕರಿಂದ ಭತ್ತ ಹಾಗೂ ಗೋದಿ ಖರೀದಿ, ಇದಕ್ಕಾಗಿ 2.37 ಲಕ್ಷ ಕೋಟಿ ರೂ. ವೆಚ್ಚ

8 - ದೇಶಾದ್ಯಂತ ಕೃಷಿಕರಿಂದ 1,208 ಲಕ್ಷ ಮೆಟ್ರಿಕ್ ಟನ್ ಗೋಧಿ ಹಾಗೂ ಭತ್ತ ಖರೀದಿ

9 - ಕೃಷಿ ವಿವಿಗಳಲ್ಲಿ ಸಿಲಬಸ್ ಪುನಾರಚನೆ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಪ್ರೋತ್ಸಾಹ. ನೈಸರ್ಗಿಕ ಕೃಷಿ, ರಾಸಾಯನಿಕ ಮುಕ್ತ ಸಾವಯವ ಕೃಷಿ ಹಾಗೂ ಶೂನ್ಯ ಬಜೆಟ್‌ನ ಆಧುನಿಕ ಕೃಷಿ ಪದ್ದತಿಗಳ ಕಲಿಕೆಗೆ ಆದ್ಯತೆ

10 - ಕೃಷಿ ರಂಗದ ಸ್ಟಾರ್ಟ್ ಅಪ್‌ಗಳಿಗೆ ಹಾಗೂ ಗ್ರಾಮೀಣ ಉದ್ಯಮಗಳಿಗೆ ನರವಾಗುವಂತೆ ನಬಾರ್ಡ್‌ ಸಹಯೋಗದಲ್ಲಿ ಸಹಾಯಧನ

 ತೆರಿಗೆಗಳ ಬಗ್ಗೆ ಮಾಹಿತಿ

ತೆರಿಗೆಗಳ ಬಗ್ಗೆ ಮಾಹಿತಿ

-ದೇಶದಲ್ಲಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಕೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದು, ಆದಾಯ ತೆರಿಗೆ ಸಲ್ಲಿಕೆ ವೇಳೆ ತಪ್ಪು ಸರಿಪಡಿಸಲು 2 ವರ್ಷಗಳ ಕಾಲಾವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

-ಇಂದು ಕೇಂದ್ರ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ದೇಶದಲ್ಲಿ ಹೊಸ ಐಟಿ ರಿಟರ್ನ್ಸ್ ಪರಿಚಯಿಸಲಾಗುತ್ತದೆ ಎಂದು ಹೇಳಿದರು. ಹಾಲಿ ವರ್ಷ ಆದಾಯ ತೆರಿಗೆಯಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆದಾಯ ತೆರಿಗೆ ಸಲ್ಲಿಸುವಾಗ ಆದಾಯವನ್ನು ಘೋಷಿಸಿ, ಸ್ವಯಂಪ್ರೇರಿತ ದೂರು ದಾಖಲಿಸಲು ಅವಕಾಶ ನೀಡಲಾಗುತ್ತದೆ. ದೇಶದಲ್ಲಿ ಹೊಸ ರಿಟರ್ನ್ಸ್ ಪರಿಚಯ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ತೆರಿಗೆ ಪಾವತಿ, ರಿಟರ್ನ್ಸ್ ಸಲ್ಲಿಕೆಗೆ ಹೊಸ ನೀತಿ ಜಾರಿಮಾಡಲಾಗುವುದು ಎಂದು ಹೇಳಿದರು

-ಅಂತೆಯೇ ತೆರಿಗೆ ಸಲ್ಲಿಕೆ ವೇಳೆ ಸಮಸ್ಯೆ ಕಂಡು ಬಂದರೆ 2 ವರ್ಷದೊಳಗೆ ತಪ್ಪು ಸರಿಪಡಿಸುವುದಕ್ಕೆ ಅವಕಾಶ ನೀಡಲಾಗಿದೆ. ವಿಶ್ವಾಸಾರ್ಹ ತೆರಿಗೆ, ವ್ಯಾಜ್ಯವನ್ನು ಕಡಿಮೆ ಮಾಡಿ, ದೋಷಗಳನ್ನು ಸರಿಪಡಿಸಿ, ವೇಗವರ್ಧಿತ ವಾಗಿ ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಲಾಗಿದೆ. ಅಂತ್ಯದ ನವೀಕರಿಸಿದ ರಿಟರ್ನ್ ಅನ್ನು ಫೈಲ್ ಮಾಡಲು ಅವಕಾಶ ನೀಡಲಾಗಿದೆ.

-ಪರ್ಯಾಯ ತೆರಿಗೆಯನ್ನು ಕಡಿಮೆ ಮಾಡಲಾಗಿದ್ದು. ಸಹಕಾರ ಸಂಘಗಳು ನೀಡುತ್ತಿದ್ದ 18 ಮತ್ತು 1.5 % ತೆರಿಗೆ ಹೆಚ್ಚುವರಿ ಶುಲ್ಕಕ್ಕೆ 15 % ಗೆ. ಒಂದು ಕೋಟಿಯಿಂದ 10 ಕೋಟಿ ವ್ಯವಹಾರ ಇರುವ ಸಹಕಾರ ಸಂಘಗಳ ತೆರಿಗೆ 12 ರಿಂದ 7 % ಗೆ ಇಳಿಕೆ . ಇದರಿಂದ ಗ್ರಾಮೀಣ ಮತ್ತು ಕೃಷಿ ಸಮುದಾಯಕ್ಕೆ ಲಾಭವಾಗಲಿದೆ. ಮುಂದಿನ ವರ್ಷದ ವರೆಗೆ ಸ್ಟಾರ್ಟ್ ಅಪ್ ಗಳಿಗೆ ತೆರಿಗೆ ವಿನಾಯ್ತಿ ನೀಡಲಾಗಿದ್ದು, 2023 ಮಾರ್ಚ್ ವರೆಗೆ ತೆರಿಗೆ ಕಟ್ಟಬೇಕಾಗಿಲ್ಲ

-ಸಹಕಾರ ಸಂಘಗಳ ಮೇಲಿನ ಸರ್​ಚಾರ್ಜ್ ಇಳಿಕೆ
ಸಹಕಾರ ಸಂಘಗಳ ಮೇಲಿನ ಸರ್​ಚಾರ್ಜ್ ಇಳಿಕೆ ಮಾಡಲಾಗಿದೆ. ಶೇಕಡಾ 12ರಿಂದ ಶೇಕಡಾ 7ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿದ್ದು, ಸಹಕಾರ ಸಂಘಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 10 ಕೋಟಿಯೊಳಗಿನ ಆದಾಯದ ಸಹಕಾರ ಸಂಘಗಳಿಗೆ ಇದು ಅನ್ವಯವಾಗುತ್ತದೆ. ಕೋ- ಆಪರೇಟಿವ್ ಸೊಸೈಟಿಗಳಿಗೂ ಇನ್ನು ಮುಂದೆ ಶೇ 15ರ ತೆರಿಗೆ. ತೆರಿಗೆ ಪದ್ಧತಿಯಲ್ಲಿ ಇರುವ ಹಲವು ಸಂಕೀರ್ಣ ಅಂಶಗಳನ್ನು ಸರಳಗೊಳಸಲಿ ಸರ್ಕಾರ ಮುಂದಾಗಿದೆ. ಆದಾಯ ತೆರಿಗೆ ಘೋಷಣೆ ಅಥವಾ ಆದಾಯ ತೆರಿಗೆ ಸಲ್ಲಿಕೆ ವೇಳೆ ಯಾವುದಾದರೂ ಆದಾಯ ಬಿಟ್ಟುಹೋಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಹಾಗೂ ಹೊಸದಾಗಿ ಮತ್ತೊಮ್ಮೆ ಆದಾಯ ತೆರಿಗೆ ರಿಟರ್ನ್ಸ್​ ಸಲ್ಲಿಸಲು ಎರಡು ವರ್ಷಗಳ ಅವಕಾಶ ಸಿಗಲಿದೆ. ಅಂಗ ವೈಕಲ್ಯ ಇರುವವರಿಗೆ ಹೆಚ್ಚುವರಿಯಾದ ತೆರಿಗೆ ಡಿಡಕ್ಷನ್. ಅಂಥವರ ಪೋಷಕರು, ಪಾಲಕರಿಗೆ ದೊರೆಯಲಿದೆ.

 ಉದ್ಯೋಗ ಕ್ಷೇತ್ರ

ಉದ್ಯೋಗ ಕ್ಷೇತ್ರ

-ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸಿತಾರಾಮನ್ ಕೇಂದ್ರ ಬಜೆಟ್ 2022 (Union Budget 2022) ಮಂಡಿಸಿದ್ದು, ದೇಶಾದ್ಯಂತ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದು ಸರ್ಕಾರದ ಮುಂದಿನ ಗುರಿಯಾಗಿದೆ ಎಂದು ಹೇಳಿದರು.

- ಪಿಎಂ ಗತಿ ಶಕ್ತಿಯು ಆರ್ಥಿಕತೆಯನ್ನು ಮುಂದಕ್ಕೆ ಕರೆದೊಯ್ಯುತ್ತದೆ ಮತ್ತು ಯುವಕರಿಗೆ ಹೆಚ್ಚಿನ ಉದ್ಯೋಗಗಳು ಮತ್ತು ಅವಕಾಶಗಳನ್ನು ನೀಡುತ್ತದೆ. ಪಿಎಂ ಗತಿ ಶಕ್ತಿ ಯೋಜನೆಯಡಿ ಟರ್ಮಿನಲ್ ನಿರ್ಮಾಣ ಮಾಡಲಾಗುವುದು. ಮೇಕ್ ಇನ್ ಇಂಡಿಯಾ ಮೂಲಕ 60 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

-ಭಾರತದಲ್ಲಿ ಯುವಕರು, ಮಹಿಳೆಯರು ಮತ್ತು ಬಡವರ ಸಬಲೀಕರಣಕ್ಕೆ ಸರ್ಕಾರ ಒತ್ತು ನೀಡಿದೆ. ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಆತ್ಮನಿರ್ಭರ ಭಾರತವನ್ನು ಯಶಸ್ವಿಯಾಗಿಸಲಿದೆ.
-ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ರಚಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

-ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 4ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. 2022-23ರ ಈ ಬಜೆಟ್‌ನಲ್ಲಿ 4 ಕ್ಷೇತ್ರಗಳ ಆಧಾರದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಕೇಂದ್ರದ ಈ ಬಜೆಟ್‌ನಲ್ಲಿ 4 ಹಂತಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಘೋಷಿಸಲಾಗಿದೆ. ಪಿಎಂ ಗತಿ ಶಕ್ತಿ ಮಿಷನ್, ಸರ್ವರ ಪಾಲ್ಗೊಳ್ಳುವಿಕೆಯಲ್ಲಿ ಅಭಿವೃದ್ಧಿ, ಉತ್ಪಾದನಾ ಕ್ಷೇತ್ರಕ್ಕೆ ಉತ್ತೇಜನ, ಬಂಡವಾಳ ಹಿಂತೆಗತಕ್ಕೆ ಆದ್ಯತೆ ಈ 4 ಹಂತಗಳಲ್ಲಿ ಅಭಿವೃದ್ಧಿ ಯೋಜನೆಗೆ ಈ ಬಜೆಟ್‌ನಲ್ಲಿ ಪ್ರಾಧಾನ್ಯತೆ ನೀಡಲಾಗಿದೆ.

-ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಆಧುನಿಕ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಪಿಎಂ ಗತಿ ಶಕ್ತಿ ಮೂಲಕ ಅಭಿವೃದ್ಧಿಗೆ ದಿಟ್ಟ ಕ್ರಮ ವಹಿಸಲಾಗಿದೆ. 25 ಸಾವಿರ ಕಿ.ಮೀ ಹೆದ್ದಾರಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ.
-3 ವರ್ಷದಲ್ಲಿ 100 ಕಾರ್ಗೋ ಟರ್ಮಿನಲ್ ನಿರ್ಮಾಣ ಮಾಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

-ಗ್ರಾಮ ಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ ವಿಶೇಷ ಅನುದಾನ ಘೋಷಿಸಲಾಗಿದೆ. ಗಡಿಪ್ರದೇಶಗಳ ಗ್ರಾಮಗಳ ಮೂಲಸೌಕರ್ಯಕ್ಕೆ ಆರ್ಥಿಕ ನೆರವು ನೀಡಲಾಗುವುದು. ಎಲ್ಲಾ ಪೋಸ್ಟ್‌ ಆಫಿಸ್‌ಗಳಲ್ಲೂ ಬ್ಯಾಂಕಿಂಗ್‌ ವ್ಯವಸ್ಥೆಗೆ ಯೋಜನೆ ರೂಪಿಸಲಾಗುವುದು.

-75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್‌ಗಳನ್ನು ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಹೈಡ್ರೋ ಸೋಲಾರ್ ಪ್ರಾಜೆಕ್ಟ್‌ಗೆ 1400 ಕೋಟಿ ಹಂಚಿಕೆ ಮಾಡಲಾಗುವುದು. 112 ಆಕಾಂಕ್ಷೆಯ ಜಿಲ್ಲೆಗಳಲ್ಲಿ ಶೇಕಡಾ 95ರಷ್ಟು ಪ್ರಗತಿಯಾಗಲಿದೆ. 1.5 ಲಕ್ಷ ಅಂಚೆ ಕಚೇರಿಗಳು ಕೋರ್ ಬ್ಯಾಂಕ್ ಆಗಿ ಅಭಿವೃದ್ಧಿ ಮಾಡಲಾಗುವುದು. ಅಂಚೆ ಕಚೇರಿಗಳನ್ನು ಕೋರ್ ಬ್ಯಾಂಕ್‌ಗಳಾಗಿ ಪರಿವರ್ತನೆ ಮಾಡಲಾಗುವುದು.

-75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕ್ ನಿರ್ಮಿಸಲಾಗುವುದು. 1483 ಕೇಂದ್ರದ ಅನವಶ್ಯಕ ಕಾನೂನು ರದ್ದು ಮಾಡಲಾಗುವುದು. ಗಡಿ ಗ್ರಾಮಗಳಿಗೆ ಸಂಪರ್ಕ ನೀಡಿಕೆಗೆ ಒತ್ತು ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

 ಬಜೆಟ್ ನಲ್ಲಿ ಶಿಕ್ಷಣಕ್ಕೆ ನೀಡಿರುವ ಮಹತ್ವ ಇಂತಿದೆ:

ಬಜೆಟ್ ನಲ್ಲಿ ಶಿಕ್ಷಣಕ್ಕೆ ನೀಡಿರುವ ಮಹತ್ವ ಇಂತಿದೆ:

-ಕೌಶಲ್ಯಾಭಿವೃದ್ಧಿಗೆ ಆನ್‌ಲೈನ್‌ ತರಬೇತಿ

-ಮಾತೃಭಾಷೆಯಲ್ಲಿಯೇ ಡಿಟಿಟಲ್‌ ಪಠ್ಯ-ಸರ್ಕಾರಿ ಶಾಲೆ ಮಕ್ಕಳಿಗೆ ಒಂದು ವರ್ಗ ಒಂದು ಟಿವಿ ಕಾರ್ಯಕ್ರಮ ಯೋಜನೆ-ಡಿಜಿಟಲ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಒತ್ತು-200 ಟಿವಿ ಚಾನೆಲ್‌ಗಳ ಮೂಲಕ ಪರ್ಯಾಯ ಶಿಕ್ಷಣ ಯೋಜನೆ-ಕೊರೊನಾ ಸಾಂಕ್ರಾಮಿಕದಿಂದ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಸ್ಥಳೀಯ ಭಾಷೆಯಲ್ಲಿ ಪಾಠ-1 ರಿಂದ 12 ನೇ ತರಗತಿ ವರೆಗೆ ಆನ್‌ಲೈನ್‌ ಶಿಕ್ಷಣಕ್ಕೆ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ-2 ಲಕ್ಷ ಅಂಗನವಾಡಿಗಳ ಉನ್ನತೀಕರಣಕ್ಕೆ ಒತ್ತು-ಕೃಷಿ ವಿಶ್ವವಿದ್ಯಾಲಯಗಳ ಪಠ್ಯಕ್ರಮವನ್ನು ಪರಿಷ್ಕೃತಗೊಳಿಸಿ, ನೈಸರ್ಗಿಕ, ಕಡಿಮೆ ವೆಚ್ಚ, ಜೈವಿಕ ಕೃಷಿ, ಆಧುನಿಕ ಕೃಷಿ ಸಂಸ್ಕೃತಿಗೆ ತಕ್ಕಂತೆ ಅಳವಡಿಸುವ ಯೋಜನೆ-ಯುವಜನತೆ ಕೌಶಲ ತರಬೇತಿ ನೀಡುವುದು, ರೀಸ್ಕಿಲಿಂಗ್‌ ಗಾಗಿ DESH e-portal ಸ್ಥಾಪನೆ-ಆನ್‌ಲೈನ್‌ ಶಿಕ್ಷಣಕ್ಕಾಗಿ ಉತ್ತಮ ತರಬೇತಿಯನ್ನು ಶಿಕ್ಷಕರಿಗೂ ನೀಡಲು ಗುಣಮಟ್ಟದ ಇ-ಮಾಹಿತಿ ಅಭಿವೃದ್ಧಿ.
 ಆರೋಗ್ಯ ಕ್ಷೇತ್ರ

ಆರೋಗ್ಯ ಕ್ಷೇತ್ರ

-ಕೋವಿಡ್ 19 ಸಾಂಕ್ರಾಮಿಕದಿಂದ ದೇಶದ ಜನತೆ ದೈಹಿಕವಾಗಿ ಮಾತ್ರವಲ್ಲದೆ, ಮಾನಸಿಕವಾಗಿಯೂ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಸಾಂಕ್ರಾಮಿಕ ಅವಧಿಯಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ಪ್ರಕರಣಗಳಲ್ಲಿ ಏರಿಕೆಯಾಗಿದೆ ಎಂದು ಅನೇಕ ವರದಿಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜನರ ಮಾನಸಿಕ ಆರೋಗ್ಯ ಸುಧಾರಣೆಗೆ ಯೋಜನೆಯನ್ನು ಪ್ರಕಟಿಸಿದೆ.

-ಸಂಸತ್‌ನಲ್ಲಿ 2022ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜನರ ಮಾನಸಿಕ ಆರೋಗ್ಯಕ್ಕಾಗಿ ರಾಷ್ಟ್ರ ಮಟ್ಟದ ಯೋಜನೆಯನ್ನು ಪ್ರಕಟಿಸಿದ್ದಾರೆ.

-ಜನರ ಮಾನಸಿಕ ಆರೋಗ್ಯ ಸುಧಾರಣೆ, ಚಿಕಿತ್ಸೆಯ ನೆರವಿಗಾಗಿ ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಈ ಯೋಜನೆಗೆ ಬೆಂಗಳೂರಿನಲ್ಲಿರು ನಿಮ್ಹಾನ್ಸ್ ನೋಡಲ್ ಕೇಂದ್ರವಾಗಿರಲಿದೆ. ಒಟ್ಟು 23 ಟೆಲಿ ಮಾನಸಿಕ ಆರೋಗ್ಯ ಕೇಂದ್ರಗಳು ಜನರಿಗೆ ಟೆಲಿ ಸಂವಹನದ ಮೂಲಕ ಮಾನಸಿಕ ಚಿಕಿತ್ಸೆ ನೀಡಲಿದೆ. ಇದಕ್ಕೆ ಬೆಂಗಳೂರಿನ ಅಂತಾರಾಷ್ಟ್ರೀಯ ತಾಂತ್ರಿಕ ಸಂಸ್ಥೆ ತಂತ್ರಜ್ಞಾನ ನೆರವು ಒದಗಿಸಲಿದೆ ಎಂದು ತಿಳಿಸಿದ್ದಾರೆ.

-ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಗೆ ಮುಕ್ತ ವೇದಿಕೆಯನ್ನು ಜಾರಿಗೆ ತರಲಾಗುವುದು. ಇದು ಆರೋಗ್ಯ ಪೂರೈಕೆದಾರರು ಮತ್ತು ಆರೋಗ್ಯ ಸೌಲಭ್ಯಗಳ ಡಿಜಿಟಲ್ ರಿಜಿಸ್ಟ್ರಿಗಳನ್ನು ಒಳಗೊಂಡಿರುತ್ತದೆ. ಹಾಗೆಯೇ ವಿಶಿಷ್ಟ ಆರೋಗ್ಯ ಗುರುತು ಮತ್ತು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಸಾರ್ವತ್ರಿಕ ಸೇವೆಯನ್ನು ನೀಡಲಿದೆ ಎಂದು ಹೇಳಿದ್ದಾರೆ

 ಕೇಂದ್ರ ಬಜೆಟ್

ಕೇಂದ್ರ ಬಜೆಟ್

ಭಾರತದಲ್ಲಿ 5G ತಂತ್ರಜ್ಞಾನ ತ್ವರಿತ ಗತಿಯಲ್ಲಿ ಅಳವಡಿಕೆ ಮತ್ತು ಸುರಕ್ಷಿತ ನೆಟ್ವರ್ಕ್ ಒದಗಿಸಬಲ್ಲ ವಿಶ್ವಾಸಾರ್ಹ ಪಾಲುದಾರರನ್ನು ಸರ್ಕಾರ ಎದುರು ನೋಡುತ್ತಿದೆ. ಈ ಉನ್ನತ ತಂತ್ರಜ್ಞಾನದ ಕ್ಷೇತ್ರದಲ್ಲಿ ಹೂಡಿಕೆ ಅಗತ್ಯ ಹೆಚ್ಚಿದೆ. ತರಂಗಾಂತರ ಗುಚ್ಛ ಹಂಚಿಕೆ ಬಗ್ಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ತಂತ್ರಜ್ಞಾನದ ಇತಿಮಿತಿ ಹಾಗೂ ಆರೋಗ್ಯದ ಮೇಲಿನ ಪರಿಣಾಮದ ಬಗ್ಗೆ ಬಂದಿರುವ ವರದಿಗಳನ್ನು ಪರಿಗಣಿಸಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

-ಯುಎಸ್ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಅಲ್ಲಿನ ಪ್ರಮುಖ ಸಂಸ್ಥೆಗಳ ಸಿಇಒಗಳ ಜೊತೆ ನಡೆಸಿದ ಮಾತುಕತೆಯಲ್ಲಿ ಹೆಚ್ಚಿನ ಚರ್ಚೆ ಟೆಲಿಕಾಂ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ್ದು ಎಂಬುದು ಗಮನಾರ್ಹ. ಭಾರತದಲ್ಲಿ 5 ಜಿ ತಂತ್ರಜ್ಞಾನದ ಮೇಲೆ ಹೂಡಿಕೆ ಮಾಡಲು ಪ್ರಮುಖ ಸಂಸ್ಥೆ ಕ್ವಾಲ್‌ಕಾಮ್ ಆಸಕ್ತಿ ತೋರಿದೆ.

-13 ನಗರಗಳಲ್ಲಿ 5ಜಿ ತಂತ್ರಜ್ಞಾನ
ಭಾರತದಲ್ಲಿ ಮುಂದಿನ ವರ್ಷ 5ಜಿ ಸೇವೆಯನ್ನು ಅಧಿಕೃತವಾಗಿ ಜಾರಿಗೆ ತರಲಾಗುತ್ತಿದೆ. ಮೊದಲ ಹಂತದಲ್ಲಿ ಪ್ರಮುಖ 13 ನಗರಗಳಲ್ಲಿ 5ಜಿ ತಂತ್ರಜ್ಞಾನ ಅಳವಡಿಸಲಾಗುತ್ತದೆ ಎಂದು ದೂರಸಂಪರ್ಕ ಇಲಾಖೆ ಮೂಲಗಳು ತಿಳಿಸಿವೆ. ಗುರುಗ್ರಾಮ, ಬೆಂಗಳೂರು, ಕೋಲ್ಕತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಪುಣೆ, ಚೆನ್ನೈ, ಲಕ್ನೋ, ಚಂಡೀಗಢ, ಜಾಮ್ ನಗರ್ ಹಾಗೂ ಗಾಂಧಿನಗರದಲ್ಲಿ ಮೊದಲಿಗೆ ಈ ತಂತ್ರಜ್ಞಾನದ ಪ್ರಯೋಜನ ಗ್ರಾಹಕರಿಗೆ ಲಭ್ಯವಾಗಲಿದೆ

-ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಲವು ಕ್ರಮ

ಮೊಬೈಲ್ ಟವರ್‌ಗಳು ಹೊರಹಾಕುವ ಇಎಂಎಫ್ ಕಿರಣಗಳು ಆರೋಗ್ಯದ ಮೇಲೆ ಪರಿಣಾಮ ಬೀರಲಿವೆ ಎಂಬ ಕುರಿತು ಜನಸಾಮಾನ್ಯರಲ್ಲಿರುವ ಭಯವನ್ನು ಹೋಗಲಾಡಿಸಲು ದೂರಸಂಪರ್ಕ ಇಲಾಖೆ ಇಎಂಎಫ್ ವಿಕಿರಣ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ

-5ಜಿ ಪ್ರಯೋಗ
ಪುಣೆ ನಗರದಲ್ಲಿ, ವಿ ತನ್ನ 5 ಜಿ ಪ್ರಯೋಗವನ್ನು ಕ್ಲೌಡ್ ಕೋರ್, ಹೊಸ ತಲೆಮಾರಿನ ಸಾರಿಗೆ ಮತ್ತು ರೇಡಿಯೋ ಪ್ರವೇಶ ಜಾಲದ ಎಂಡ್-ಟು-ಎಂಡ್ ಕ್ಯಾಪ್ಟಿವ್ ನೆಟ್‍ವರ್ಕ್‍ನ ಲ್ಯಾಬ್ ಸೆಟಪ್‍ನಲ್ಲಿ ನಡೆಸಿದೆ. ಈ ಪ್ರಯೋಗದಲ್ಲಿ, ಎಂಎಂ ವೇವ್ ಸ್ಪೆಕ್ಟ್ರಮ್ ಬ್ಯಾಂಡ್‍ನಲ್ಲಿ ಅತಿ ಕಡಿಮೆ ಸುಪ್ತತೆಯೊಂದಿಗೆ ವಿ 3.7 ಜಿಬಿಪಿಎಸ್‍ಗಿಂತ ಹೆಚ್ಚಿನ ವೇಗವನ್ನು ಸಾಧಿಸಿದೆ.

 ಮಹಿಳಾ ಕೇಂದ್ರಿಯ ಯೋಜನೆಗಳಿವು

ಮಹಿಳಾ ಕೇಂದ್ರಿಯ ಯೋಜನೆಗಳಿವು

- ಕೇಂದ್ರ ಹಣಕಾಸು ಸಚಿವ ನಿರ್ಮಲ್ ಸೀತಾರಾಮನ್ ಮಂಗಳವಾರ ತಮ್ಮ ನಾಲ್ಕನೇ ಬಜೆಟ್ ಭಾಷಣದಲ್ಲಿ ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿದರು. "ನಾರಿ ಶಕ್ತಿ'ಯ (Nari Shakti) ಪ್ರಾಮುಖ್ಯತೆಯನ್ನು ಗುರುತಿಸಿ, ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಯನ್ನು ಒದಗಿಸಲು 3 ಯೋಜನೆಗಳನ್ನು ಪ್ರಾರಂಭಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಮಕ್ಕಳಿಗಾಗಿ ಮಿಷನ್ ಪೋಷಣ್ 2.0, ಮಿಷನ್ ವಾತ್ಸಲ್ಯ ಮತ್ತು ಮಿಷನ್ ಶಕ್ತಿಗಳನ್ನು ಸಮಗ್ರ ಪ್ರಯೋಜನಗಳನ್ನು ಒದಗಿಸಲು ಇತ್ತೀಚೆಗೆ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

-ಸಕ್ಷಮ್ ಅಂಗನವಾಡಿಯು ಹೊಸ ಪೀಳಿಗೆಯ ಅಂಗನವಾಡಿಯಾಗಿದ್ದು, ಇದು ಉತ್ತಮ ಮೂಲಸೌಕರ್ಯ ಮತ್ತು ಉತ್ತಮ ವಾತಾವರಣದಿಂದ ಆವೃತವಾಗಿರುವ ಆಡಿಯೋ ವಿಶುವಲ್ ಸಾಧನಗಳನ್ನು ಹೊಂದಿದ್ದು, ಬಾಲ್ಯದ ಬೆಳವಣಿಗೆಗಳಿಗೆ ಸುಧಾರಿತ ಪರಿಸರವನ್ನು ಒದಗಿಸುತ್ತದೆ. ಎರಡು ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಪ್ರಕಾರ, 2011 ರ ಜನಗಣತಿಯ ಪ್ರಕಾರ ಮಹಿಳೆಯರು ಮತ್ತು ಮಕ್ಕಳು ಭಾರತದ ಜನಸಂಖ್ಯೆಯ ಶೇ 67.7 ರಷ್ಟಿದ್ದಾರೆ. ಕಳೆದ ವರ್ಷ ನಿರ್ಮಲಾ ಸೀತಾರಾಮನ್ ಅವರು ಸಕ್ಷಂ ಅಂಗನವಾಡಿ ಮತ್ತು ಪೋಷಣ್ 2.0 ಯೋಜನೆಗೆ ₹ 20,105 ಕೋಟಿ, ಮಿಷನ್ ವಾತ್ಸಲ್ಯಕ್ಕೆ 900 ಕೋಟಿ ರೂ. ಮತ್ತು ಮಿಷನ್ ಶಕ್ತಿ (ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣಕ್ಕಾಗಿ ಮಿಷನ್) 3,109 ಕೋಟಿ ರೂ.ಮೀಸಲಿಟ್ಟಿದ್ದರು.

-ಶಿಕ್ಷಣದ ವಿಚಾರದಲ್ಲಿ ಉತ್ತ ಶಿಕ್ಷಣವನ್ನು ಒದಗಿಸಲು ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಹಣಕಾಸು ಸಚಿವರು ಪ್ರಸ್ತಾಪಿಸಿದರು. ಅದನ್ನು ಹಬ್ ಮತ್ತು ಮಾದರಿಯಲ್ಲಿ ನಿರ್ಮಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ ಔಪಚಾರಿಕ ಶಿಕ್ಷಣದ ನಷ್ಟವನ್ನು ಸರಿದೂಗಿಸಲು ಮಕ್ಕಳಿಗೆ ಪೂರಕ ಶಿಕ್ಷಣವನ್ನು ಒದಗಿಸಲು 1-ವರ್ಗ-1-ಟಿವಿ ಚಾನೆಲ್ ಅನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

-ಈಶಾನ್ಯಕ್ಕೆ ಪ್ರಧಾನ ಮಂತ್ರಿಗಳ ಅಭಿವೃದ್ಧಿ ಉಪಕ್ರಮ, PM-DevINE ಎಂಬ ಹೊಸ ಯೋಜನೆ ಈಶಾನ್ಯ ಕೌನ್ಸಿಲ್ ಮೂಲಕ ಜಾರಿಗೆ ಬರಲಿದೆ. ಇದು ಪ್ರಧಾನ ಮಂತ್ರಿ ಗತಿಶಕ್ತಿಯ ಉತ್ಸಾಹದಲ್ಲಿ ಮೂಲಸೌಕರ್ಯ ಮತ್ತು ಈಶಾನ್ಯದ ಅಗತ್ಯತೆಯ ಆಧಾರದ ಮೇಲೆ ಸಾಮಾಜಿಕ ಅಭಿವೃದ್ಧಿ ಯೋಜನೆಗಳಿಗೆ ಧನಸಹಾಯವನ್ನು ನೀಡುತ್ತದೆ. ಇದು ಯುವಕರು ಮತ್ತು ಮಹಿಳೆಯರಿಗೆ ಜೀವನೋಪಾಯದ ಚಟುವಟಿಕೆಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅಂತರವನ್ನು ತುಂಬುತ್ತದೆ.

-ಅಸ್ತಿತ್ವದಲ್ಲಿರುವ ಕೇಂದ್ರ ಅಥವಾ ರಾಜ್ಯ ಯೋಜನೆಗಳಿಗೆ ಇದು ಪರ್ಯಾಯವಾಗಿರುವುದಿಲ್ಲ. ಕೇಂದ್ರ ಸಚಿವಾಲಯಗಳು ತಮ್ಮ ಅಭ್ಯರ್ಥಿ ಯೋಜನೆಗಳನ್ನು ಮುಂದಿಡಬಹುದಾದರೂ, ರಾಜ್ಯಗಳು ಒಡ್ಡಿದ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು. 1,500 ಕೋಟಿ ರೂ. ಆರಂಭಿಕ ಹಂಚಿಕೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

 ರಕ್ಷಣಾ ವಲಯ

ರಕ್ಷಣಾ ವಲಯ

-ಕೇಂದ್ರ ಬಜೆಟ್ 2022 ಮಂಡನೆಗೆ ಅಧಿಕೃತ ಚಾಲನೆ ದೊರೆತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿದ್ದಾರೆ.

-ರಕ್ಷಣಾ ವಲಯಕ್ಕೆ ಕೇಂದ್ರ ಸರ್ಕಾರ ನೀಡುತ್ತಿರುವ ಮಹತ್ವವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್, ಆತ್ಮನಿರ್ಭರ ಭಾರತ ಯೋಜನೆಯಡಿಯಲ್ಲಿ ರಕ್ಷಣಾ ವಲಯದ ಸ್ವಾವಲಂಬನೆಗೆ ಮುಂದಡಿ ಇಡಲಾಗಿದೆ ಎಂದು ಸ್ಪಷ್ಟಪಡಿಸಿದರು.
-ರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆಯನ್ನು ತ್ತೇಜಿಸಲು ಮತ್ತು ರಕ್ಷಣಾ ಉಪಕರಣಗಳ ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ದೇಶೀಯ ಉದ್ಯಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಬಂಡವಾಳ ಸಂಗ್ರಹಣೆಗಾಗಿ ಬಜೆಟ್‌ನ ಶೇ.68 ರಷ್ಟು ಮೀಸಲಿಡಲಾಗಿದೆ.
-ಕಳೆದ ಆರ್ಥಿಕ ವರ್ಷದಲ್ಲಿ ರಕ್ಷಣಾ ವಲಯದಲ್ಲಿ ಬಂಡವಾಳ ಸಂಗ್ರಹಣೆಗಾಗಿ ಶೇ.58ರಷ್ಟು ಅನುದಾನ ಮೀಸಲಿಡಲಾಗಿತ್ತು. ಈ ಬಾರಿ ಶೇ.10ರಷ್ಟು ಅನುದಾನ ಹೆಚ್ಚಿಸಲಾಗಿದೆ.
- ಆತ್ಮನಿರ್ಭರ ಭಾರತ ಯೋಜನೆಯಡಿಯಲ್ಲಿ ದೇಶೀಯವಾಗಿ ರಕ್ಷಣಾ ಉಪಕರಣಗಳ ಉತ್ಪಾದನೆಗೆ ಒತ್ತು ನೀಡಲಾಗುವುದು. ಇದಕ್ಕಾಗಿ ದೇಶೀಯ ಉದ್ಯಮ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು.

-ರಕ್ಷಣಾ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದ್ದು, ಇದನ್ನು ಹಂತ ಹಂತವಾಗಿ ಸಾಧಿಸಲಾಗುವುದು.

ಭಾರತೀಯ ರೈಲ್ವೆಗೆ ಕೇಂದ್ರ ಬಜೆಟ್‌ನಲ್ಲಿ ಸಿಕ್ಕಿದ್ದೇನು?
ಭಾರತೀಯ ರೈಲ್ವೆ
-ಕೊರೊನಾ ಸಾಂಕ್ರಾಮಿಕದ ನೆರಳಿನಿಂದ ಭಾರತವನ್ನು ಹೊರತರಲು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2022 ಅನ್ನು ಮಂಡಿಸುತ್ತಿದ್ದು, ಇದು ಮುಂದಿನ ಹಣಕಾಸು ವರ್ಷದ ಮಾರ್ಗಸೂಚಿಯಾಗಿ ಕಂಡುಬರುತ್ತಿದೆ.

-ರೈಲ್ವೇ ವಲಯದ ಪ್ರಮುಖ ಘೋಷಣೆಯಾಗಿ ಮುಂದಿನ ಮೂರು ವರ್ಷಗಳಲ್ಲಿ ಭಾರತದಲ್ಲಿ 400 ವಂದೇ ಭಾರತ್ ರೈಲುಗಳು ಇರುತ್ತವೆ ಎಂದು ಸೀತಾರಾಮನ್ ಹೇಳಿದ್ದಾರೆ. ರೈಲ್ವೆ ವಲಯವು 100 ಗತಿ ಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು ಸಹ ಹೊಂದಲಿದೆ.

-ಕಳೆದ ಏಳು ವರ್ಷಗಳಲ್ಲಿ ಭಾರತೀಯ ರೈಲ್ವೆಯ 24 ಸಾವಿರ ಕಿ.ಮೀ ಮಾರ್ಗವನ್ನು ವಿದ್ಯುದೀಕರಣಗೊಳಿಸಲಾಗಿದೆ. ಇದಲ್ಲದೆ, ಹೊಸ ರೈಲು ಮಾರ್ಗಗಳ ದ್ವಿಗುಣಗೊಳಿಸುವ ಮತ್ತು ಹಾಕುವಿಕೆಯ ಅಭಿವೃದ್ಧಿ ಕಾರ್ಯಗಳು ತ್ವರಿತ ಗತಿಯಲ್ಲಿ ನಡೆಯುತ್ತಿವೆ. ಶೇ. 100ರಷ್ಟು ವಿದ್ಯುದೀಕರಣದ ಗುರಿ ಇದ್ದು, 2030ರ ವೇಳೆಗೆ ರೈಲ್ವೇ ಜಾಲ ಗ್ರೀನ್‌ ರೈಲ್ವೆ ಆಗಿ ಪರಿವರ್ತನೆಯಾಗಲಿದೆ.

 ಪ್ರಯಾಣ

ಪ್ರಯಾಣ

-ಸಾಗರೋತ್ತರ ಪ್ರಯಾಣದ ಅನುಕೂಲಕ್ಕಾಗಿ 2022-23 ರಲ್ಲಿ ಇ-ಪಾಸ್‌ಪೋರ್ಟ್‌ಗಳನ್ನು ವಿತರಿಸಲಾಗುವುದು.
- ಎಂಬೆಡೆಡ್ ಚಿಪ್‌ನೊಂದಿಗೆ ಇ-ಪಾಸ್‌ಪೋರ್ಟ್ ನೀಡಲಾಗುವುದು

 ಹವಾಮಾನ ಬದಲಾವಣೆ

ಹವಾಮಾನ ಬದಲಾವಣೆ

-ಹವಾಮಾನ ಬದಲಾವಣೆ ಜಗತ್ತಿಗೆ ಅಪಾಯವನ್ನು ತಂದೊಡ್ಡುವಂಥದ್ದಾಗಿದೆ.
-ಇಂಗಾಲದ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುವ ಯೋಜನೆಗಳಿಗೆ ಆರ್ಥಿಕ ನ ನೆರವು
-ಸಾರ್ವಜನಿಕ ವಲಯಗಳ ಯೋಜನೆಗಳಲ್ಲಿ ನಿಯೋಜಿಸಬೇಕಾದ ಆದಾಯ
-ಕಲ್ಲಿದ್ದಲು ಅನಿಲೀಕರಣಕ್ಕಾಗಿ ನಾಲ್ಕು ಪ್ರಾಯೋಗಿಕ ಯೋಜನೆ
-ಸೋಲಾರ್ ವಿದ್ಯುತ್ ಉತ್ಪಾದನೆಗೆ 19,500 ಕೋಟಿ ರೂಪಾಯಿ. 2030ರ ವೇಳೆಗೆ 8 ಗಿಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆ.

 ಹಣಕಾಸು ವಲಯ

ಹಣಕಾಸು ವಲಯ

-50 ವರ್ಷ ಕಾಲ ರಾಜ್ಯ ಸರ್ಕಾರಗಳಿಗೆ ಬಡ್ಡಿ ರಹಿತ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ. ಡಿಜಿಟಲೈಸೇಷನ್ ಹಾಗೂ ನಗರ ಯೋಜನೆಗಳಿಗಾಗಿ 50 ವರ್ಷಗಳ ಕಾಲ ಸಾಲ ನೀಡಲು ನಿರ್ಧರಿಸಲಾಗಿದೆ.
-ತೆರಿಗೆ ಪಾವತಿಯಲ್ಲಾದ ದೋಷವನ್ನು ಸರಿಪಡಿಸಲು ಅವಕಾಶವನ್ನು ಒದಗಿಸಲಾಗುವುದು. ತೆರಿಗೆದಾರರು ಇದೀಗ ಸಂಬಂಧಿತ ಮೌಲ್ಯಮಾಪನ ವರ್ಷದಿಂದ 2 ವರ್ಷಗಳಲ್ಲಿ ನವೀಕರಿಸಿದ ರಿಟರ್ನ್ ಅನ್ನು ಸಲ್ಲಿಸಬಹುದು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
-2022-23ರಲ್ಲಿ ಬ್ಲಾಕ್ ಚೈನ್ ತಂತ್ರಜ್ಞಾನ ಬಳಸಿ ಡಿಜಿಟಲ್ ಹಣ ಬಿಡುಗಡೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಆರ್‌ಬಿಐ ತನ್ನದೇ ಆದ ವರ್ಚ್ಯುವಲ್ ಕರೆನ್ಸಿ ಆವೃತ್ತಿಯನ್ನು ಹೊರತರುವ ಪ್ರಕ್ರಿಯೆಯಲ್ಲಿದೆ ಎಂದು ಅವರು ಹೇಳಿದ್ದಾರೆ.

-ಈ ಬಾರಿಯ ಬಜೆಟ್​ನಲ್ಲಿ ಬಂಡವಾಳ ವೆಚ್ಚವನ್ನು (Capital Expenditure) ಶೇ 35.4ರಷ್ಟು ಹೆಚ್ಚಿಸಲಾಗಿದೆ. ದೇಶದ ರಾಷ್ಟ್ರೀಯ ಆಸ್ತಿ ಹೆಚ್ಚಿಸುವ ಉದ್ದೇಶಕ್ಕೆ ಈ ನಿಧಿ ಬಳಕೆಯಾಗಲಿದೆ. ಒಟ್ಟು ಜಿಡಿಪಿಯ ಶೇ 2.9ರಷ್ಟು ಮೊತ್ತವನ್ನು ಬಂಡವಾಳ ವೆಚ್ಚಕ್ಕೆ ಮೀಸಲಿಡಲಾಗಿದೆ. 2022-2023ರ ಆರ್ಥಿಕ ವರ್ಷದಲ್ಲಿ ಭಾರತ ಸರ್ಕಾರವು 10.9 ಲಕ್ಷ ಕೋಟಿ ರೂ. ಮೊತ್ತವನ್ನು ಬಂಡವಾಳ ವೆಚ್ಚಕ್ಕೆ ಬಳಸಲು ನಿರ್ಧರಿಸಿದೆ.

-ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ಜಾರಿಗೊಳಿಸಲಾಗುವುದು. ಇಂಧನ ಕ್ಷೇತ್ರದಲ್ಲಿ ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಲಾಗುವುದು. 7.5 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಕೇಂದ್ರ ನಿರ್ಧಾರ ಮಾಡಿದೆ.

-ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅಪ್​ಡೇಟೆಡ್​ ರಿಟರ್ನ್ ಫೈಲ್ ಮಾಡಬಹುದು. ಆ ಅಸೆಸ್​ಮೆಂಟ್​ನಿಂದ ಎರಡು ವರ್ಷದೊಳಗೆ ಮಾಡಬಹುದು. ದೇಶದಲ್ಲಿ ಹೊಸ ರಿಟರ್ನ್ಸ್ ಪರಿಚಯ ಮಾಡಲು ಕೇಂದ್ರ ತೀರ್ಮಾನಿಸಿದೆ. ತೆರಿಗೆ ಪಾವತಿ, ರಿಟರ್ನ್ಸ್ ಸಲ್ಲಿಕೆಗೆ ಹೊಸ ನೀತಿ ಜಾರಿಮಾಡಲಾಗುವುದು. ತೆರಿಗೆ ಸಲ್ಲಿಕೆ ವೇಳೆ ಸಮಸ್ಯೆ ಕಂಡು ಬಂದರೆ 2 ವರ್ಷದೊಳಗೆ ತಪ್ಪು ಸರಿಪಡಿಸುವುದಕ್ಕೆ ಅವಕಾಶ ನೀಡಲಾಗಿದೆ.

-ಸಹಕಾರ ಸಂಘಗಳ ಮೇಲಿನ ಸರ್​ಚಾರ್ಜ್ ಇಳಿಕೆ ಮಾಡಲಾಗಿದೆ. ಶೇಕಡಾ 12ರಿಂದ ಶೇಕಡಾ 7ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿದ್ದು, ಸಹಕಾರ ಸಂಘಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 10 ಕೋಟಿಯೊಳಗಿನ ಆದಾಯದ ಸಹಕಾರ ಸಂಘಗಳಿಗೆ ಇದು ಅನ್ವಯವಾಗುತ್ತದೆ. ಕೋ- ಆಪರೇಟಿವ್ ಸೊಸೈಟಿಗಳಿಗೂ ಇನ್ನು ಮುಂದೆ ಶೇ 15ರ ತೆರಿಗೆ. ತೆರಿಗೆ ಪದ್ಧತಿಯಲ್ಲಿ ಇರುವ ಹಲವು ಸಂಕೀರ್ಣ ಅಂಶಗಳನ್ನು ಸರಳಗೊಳಸಲಿ ಸರ್ಕಾರ ಮುಂದಾಗಿದೆ.

-ಆದಾಯ ತೆರಿಗೆ ಘೋಷಣೆ ಅಥವಾ ಆದಾಯ ತೆರಿಗೆ ಸಲ್ಲಿಕೆ ವೇಳೆ ಯಾವುದಾದರೂ ಆದಾಯ ಬಿಟ್ಟುಹೋಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಹಾಗೂ ಹೊಸದಾಗಿ ಮತ್ತೊಮ್ಮೆ ಆದಾಯ ತೆರಿಗೆ ರಿಟರ್ನ್ಸ್​ ಸಲ್ಲಿಸಲು ಎರಡು ವರ್ಷಗಳ ಅವಕಾಶ ಸಿಗಲಿದೆ. ಅಂಗ ವೈಕಲ್ಯ ಇರುವವರಿಗೆ ಹೆಚ್ಚುವರಿಯಾದ ತೆರಿಗೆ ಡಿಡಕ್ಷನ್. ಅಂಥವರ ಪೋಷಕರು, ಪಾಲಕರಿಗೆ ದೊರೆಯಲಿದೆ.

 ಎಲೆಕ್ಟ್ರಿಕ್ ವೆಹಿಕಲ್ಸ್

ಎಲೆಕ್ಟ್ರಿಕ್ ವೆಹಿಕಲ್ಸ್

-EV (ಎಲೆಕ್ಟ್ರಿಕ್ ವಾಹನ) ಚಾರ್ಜಿಂಗ್ ಕೇಂದ್ರಗಳಿಗಾಗಿ ವಿಶೇಷ ವಲಯಗಳನ್ನು ಸ್ಥಾಪಿಸಲಾಗುವುದು. ಎಲೆಕ್ಟ್ರಿಕ್ ವಾಹನಗಳಿಗಾಗಿ ವಿಶೇಷ ವಲಯಗಳ ಅಭಿವೃದ್ಧಿ ಮಾಡಲಾಗುವುದು. ಬ್ಯಾಟರಿ ವಿನಿಮಯ ನೀತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

 ಕೇಂದ್ರ ಬಜೆಟ್:ಎಂಎಸ್‌ಎಂಇ ಹಾಗೂ ಸ್ಟಾರ್ಟ್‌ ಅಪ್

ಕೇಂದ್ರ ಬಜೆಟ್:ಎಂಎಸ್‌ಎಂಇ ಹಾಗೂ ಸ್ಟಾರ್ಟ್‌ ಅಪ್

-ಸ್ಟಾರ್ಟಪ್‌ಗಳಿಗೆ ಇನ್ನೂ ಒಂದು ವರ್ಷ ತೆರಿಗೆ ವಿನಾಯಿತಿ ನೀಡಲಾಗಿದೆ. ಕೊವಿಡ್ ಸಂಕಷ್ಟ ಹಿನ್ನೆಲೆ ಸ್ಟಾರ್ಟಪ್‌ಗಳಿಗೆ ತೆರಿಗೆ ವಿನಾಯತಿ ನೀಡಲಾಗಿದೆ.
-ಸಹಕಾರ ಸಂಘಗಳ ಮೇಲಿನ ಸರ್​ಚಾರ್ಜ್ ಇಳಿಕೆ ಮಾಡಲಾಗಿದೆ. ಶೇಕಡಾ 12ರಿಂದ ಶೇಕಡಾ 7ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿದ್ದು, ಸಹಕಾರ ಸಂಘಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 10 ಕೋಟಿಯೊಳಗಿನ ಆದಾಯದ ಸಹಕಾರ ಸಂಘಗಳಿಗೆ ಇದು ಅನ್ವಯವಾಗುತ್ತದೆ. ಕೋ- ಆಪರೇಟಿವ್ ಸೊಸೈಟಿಗಳಿಗೂ ಇನ್ನು ಮುಂದೆ ಶೇ 15ರ ತೆರಿಗೆ. ತೆರಿಗೆ ಪದ್ಧತಿಯಲ್ಲಿ ಇರುವ ಹಲವು ಸಂಕೀರ್ಣ ಅಂಶಗಳನ್ನು ಸರಳಗೊಳಸಲಿ ಸರ್ಕಾರ ಮುಂದಾಗಿದೆ. ಆದಾಯ ತೆರಿಗೆ ಘೋಷಣೆ ಅಥವಾ ಆದಾಯ ತೆರಿಗೆ ಸಲ್ಲಿಕೆ ವೇಳೆ ಯಾವುದಾದರೂ ಆದಾಯ ಬಿಟ್ಟುಹೋಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಹಾಗೂ ಹೊಸದಾಗಿ ಮತ್ತೊಮ್ಮೆ ಆದಾಯ ತೆರಿಗೆ ರಿಟರ್ನ್ಸ್​ ಸಲ್ಲಿಸಲು ಎರಡು ವರ್ಷಗಳ ಅವಕಾಶ ಸಿಗಲಿದೆ. ಅಂಗ ವೈಕಲ್ಯ ಇರುವವರಿಗೆ ಹೆಚ್ಚುವರಿಯಾದ ತೆರಿಗೆ ಡಿಡಕ್ಷನ್. ಅಂಥವರ ಪೋಷಕರು, ಪಾಲಕರಿಗೆ ದೊರೆಯಲಿದೆ.
-ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅಪ್​ಡೇಟೆಡ್​ ರಿಟರ್ನ್ ಫೈಲ್ ಮಾಡಬಹುದು. ಆ ಅಸೆಸ್​ಮೆಂಟ್​ನಿಂದ ಎರಡು ವರ್ಷದೊಳಗೆ ಮಾಡಬಹುದು.
-50 ವರ್ಷ ಕಾಲ ರಾಜ್ಯ ಸರ್ಕಾರಗಳಿಗೆ ಬಡ್ಡಿ ರಹಿತ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರಗಳಿಗೆ 1 ಲಕ್ಷ ಕೋಟಿ ರೂಪಾಯಿ ಸಾಲ ನೀಡಲು ನಿರ್ಧಾರ ಮಾಡಲಾಗಿದೆ. 50 ವರ್ಷಗಳ ಕಾಲ ಸಾಲ ನೀಡಲು ನಿರ್ಧರಿಸಲಾಗಿದೆ. ಡಿಜಿಟಲೈಸೇಷನ್ ಹಾಗೂ ನಗರ ಯೋಜನೆಗಳಿಗಾಗಿ ಈ ಹಣ ನೀಡಲಾಗುತ್ತದೆ.
-ಈ ಬಾರಿಯ ಬಜೆಟ್​ನಲ್ಲಿ ಬಂಡವಾಳ ವೆಚ್ಚವನ್ನು (Capital Expenditure) ಶೇ 35.4ರಷ್ಟು ಹೆಚ್ಚಿಸಲಾಗಿದೆ. ದೇಶದ ರಾಷ್ಟ್ರೀಯ ಆಸ್ತಿ ಹೆಚ್ಚಿಸುವ ಉದ್ದೇಶಕ್ಕೆ ಈ ನಿಧಿ ಬಳಕೆಯಾಗಲಿದೆ. ಒಟ್ಟು ಜಿಡಿಪಿಯ ಶೇ 2.9ರಷ್ಟು ಮೊತ್ತವನ್ನು ಬಂಡವಾಳ ವೆಚ್ಚಕ್ಕೆ ಮೀಸಲಿಡಲಾಗಿದೆ. 2022-2023ರ ಆರ್ಥಿಕ ವರ್ಷದಲ್ಲಿ ಭಾರತ ಸರ್ಕಾರವು ₹ 10.9 ಲಕ್ಷ ಕೋಟಿ ಮೊತ್ತವನ್ನು ಬಂಡವಾಳ ವೆಚ್ಚಕ್ಕೆ ಬಳಸಲು ನಿರ್ಧರಿಸಿದೆ.
-ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ಜಾರಿಗೊಳಿಸಲಾಗುವುದು. ಇಂಧನ ಕ್ಷೇತ್ರದಲ್ಲಿ ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಲಾಗುವುದು. 7.5 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಕೇಂದ್ರ ನಿರ್ಧಾರ ಮಾಡಿದೆ.

 ಕೇಂದ್ರ ಬಜೆಟ್: ಪಿಎಂ ಆವಾಸ್ ಯೋಜನಾ

ಕೇಂದ್ರ ಬಜೆಟ್: ಪಿಎಂ ಆವಾಸ್ ಯೋಜನಾ

-ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಭಾಷಣದಲ್ಲಿ ಪಿಎಂ ಆವಾಸ್ ಯೋಜನೆಗೆ ರೂ.48,000 ಕೋಟಿ ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.

-ಎಲ್ಲರಿಗೂ ಸೂರು ಎಂಬ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಗೆ ಆದ್ಯತೆ ನೀಡಲಾಗಿದ್ದು, ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ 48,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. 2022-23ರಲ್ಲಿ 80 ಲಕ್ಷ ಮನೆಗಳನ್ನು ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

-ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 60,000 ಮನೆಗಳನ್ನು ಹಂಚಲು ಜನರನ್ನು ಗುರುತಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪರಿಣಾಮಕಾರಿಯಾಗಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಘೋಷಣೆ ತಿಳಿಸಿದರು.

-2015ರಲ್ಲಿ ಕೇಂದ್ರ ಸರ್ಕಾರ ಎಲ್ಲರಿಗೂ ವಸತಿ ಘೋಷಣೆಯಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಆರಂಭಿಸಿತು. ಏರಿಕೆಯಾಗುತ್ತಿರುವ ರಿಯಲ್ ಎಸ್ಟೇಟ್ ದರಗಳ ನಡುವೆಯೂ ಎಲ್ಲರೂ ಮನೆ ಖರೀದಿ ಮಾಡುವಂತಾಗಲು ಭಾರತ ಸರ್ಕಾರ ಈ ಯೋಜನೆ ಆರಂಭಸಿತು. 2022ರ ಮಾರ್ಚ್ 31ರೊಳಗೆ ಎಲ್ಲರಿಗೂ ವಸತಿ ಒದಗಿಸುವುದು ಯೋಜನೆ ಉದ್ದೇಶ ವಾಗಿತ್ತು.

-ದೇಶದಲ್ಲಿರುವ ಎಲ್ಲಾ ವಸತಿ ಹೀನರಿಗೆ ಮತ್ತು ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಎಲ್ಲ ಮೂಲ ಸೌಕರ್ಯಗಳನ್ನು ಒಳಗೊಂಡ ಪಕ್ಕಾ ಮನೆಯನ್ನು ಒದಗಿಸಿಕೊಡಲು ಪ್ರಧಾನ ಮಂತ್ರಿ ಆವಾಸ್ ಯೋಜನಾ (ನಗರ/ ಗ್ರಾಮೀಣ) ಯೋಜನೆಯನ್ನು ರೂಪಿಸಿದೆ. ದೇಶದ ಎಲ್ಲ ನಗರ ಪ್ರದೇಶಗಳಲ್ಲಿ ಉದ್ದೆಶಿತ ಗುರಿ ಸಾಧನೆಗೆ ಈ ಯೋಜನೆ ನೆರವಾಗಲಿದೆ.

-ಈ ಯೋಜನೆಯನ್ನು 2015ರ ಜೂನ್ 25 ರಂದು ಆರಂಭಿಸಲಾಯಿತು.ಯೋಜನೆಯನ್ನು29 ರಾಜ್ಯಗಳು ಮತ್ತು 7 ಕೇಂದ್ರಾಡಳಿತ ಪ್ರದೇಶಗಳ 4,041 ನಗರ ಮತ್ತು ಪಟ್ಟಣಗಳಲ್ಲಿ ಜಾರಿಗೆ ತರಲಾಯಿತು. ಮೊದಲು ಈ ಯೋಜನೆ ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಕಡಿಮೆ ಆದಾಯದ ಗುಂಪುಗಳಿಗೆ ಸೀಮಿತವಾಗಿತ್ತು. ನರೇಂದ್ರ ಮೋದಿ 2016ರಡಿಸೆಂಬರ್ 31ರಂದು ಯೋಜನೆಯನ್ನು ಮಧ್ಯಮ ಆದಾಯದ ಗುಂಪುಗಳಿಗೂ ವಿಸ್ತರಿಸುವ ಘೋಷಣೆ ಮಾಡಿದರು.

-ಯೋಜನೆ ಅನ್ವಯ ವಾರ್ಷಿಕ ಆದಾಯ 3 ಲಕ್ಷ ರೂಪಾಯಿವರೆಗೆ ಇರುವವರನ್ನು ಆರ್ಥಿಕವಾಗಿ ಹಿಂದುಳಿದವರು ಹಾಗು ವಾರ್ಷಿಕ ಆದಾಯ 3 ಲಕ್ಷದಿಂದ 6 ಲಕ್ಷ ರೂ. ಗಳ ವರೆಗೆ ಇರುವವರನ್ನು ಕಡಿಮೆಆದಾಯದ ಗುಂಪು ಮತ್ತು ವಾರ್ಷಿಕ ಆದಾಯ 6 ಲಕ್ಷದಿಂದ 12 ಲಕ್ಷದವರೆಗೆ ಇರುವ ಕುಟುಂಬಗಳನ್ನು ಮಧ್ಯಮ ವರ್ಗ ಗುಂಪು 1, ಮತ್ತು ವಾರ್ಷಿಕ ಆದಾಯ 12 ಲಕ್ಷದಿಂದ 18 ಲಕ್ಷದವರೆಗೆ ಇರುವ ಕುಟುಂಬಗಳನ್ನು ಮಧ್ಯಮ ವರ್ಗ2 ಎಂದು ವಿಂಗಡಿಸಿ ಅವರನ್ನು ಫಲಾನುಭವಿಗಳಾಗಿ ಈ ಯೋಜನೆ ಗುರುತಿಸಲಾಗುತ್ತದೆ ಎಂದು ತಿಳಿಸಿದರು.

 ಕೇಂದ್ರ ಬಜೆಟ್: ಮೂಲ ಸೌಕರ್ಯ

ಕೇಂದ್ರ ಬಜೆಟ್: ಮೂಲ ಸೌಕರ್ಯ

-ಪಿಎಂ ಗತಿಶಕ್ತಿ.
-ಅಂತರ್ಗತ ಅಭಿವೃದ್ಧಿ.
-ಉತ್ಪಾದಕತೆ ವರ್ಧನೆ
-ಅವಕಾಶಗಳ ಹೆಚ್ಚಳ.
-ವಿದ್ಯುತ್ ಉತ್ಪಾದನೆ, ವಿತರಣೆಯಲ್ಲಿ ಸುಧಾರಣೆ.
-ಪರಿಸರ ಸಂರಕ್ಷಣೆ.
- ವ್ಯವಸ್ಥಿತ ಹೂಡಿಕೆಗಳಿಗೆ ಒತ್ತು.
ಬಜೆಟ್​ನ ಮೊದಲ ಆಧಾರ ಸ್ತಂಭವಾಗಿರುವ ಪಿಎಂ ಗತಿಶಕ್ತಿಗೆ ಕೇಂದ್ರ ಹಣಕಾಸು ಸಚಿವರು ಹೆಚ್ಚಿನ ಒತ್ತು ನೀಡಿದ್ದು. ಬಹಳಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ.

ಪ್ರಧಾನ ಮಂತ್ರಿ ಗತಿಶಕ್ತಿ ಮಾಸ್ಟರ್​ ಪ್ಲಾನ್ ಮೂಲಕ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ರಾಷ್ಟ್ರೀಯ ಮೂಲಸೌಕರ್ಯ ಪೈಪ್​ಲೈನ್ ರೂಪುರೇಷೆ ಮೂಲಕ ದೇಶದ ಭವಿಷ್ಯ ಅವಶ್ಯಕತೆಗಳನ್ನು ಅರಿತುಕೊಳ್ಳಲು ಮತ್ತು ಅದನ್ನು ಸಾಕಾರಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

Recommended Video

ಬಜೆಟ್ ನಲ್ಲಿ ಈ 5 ಕ್ಷೇತ್ರಗಳಿಗೆ ವಿಶೇಷ ಕೊಡುಗೆ ಕೊಟ್ಟ ಕೇಂದ್ರ ಸರ್ಕಾರ | Oneindia Kannada

English summary
Budget 2022 Highlights in Kannada: Here are some highlights, key takeaways and important points of FM Nirmala Sitharaman’s Union Budget 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X