ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Budget 2023: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಖರೀದಿಸುವವರಿಗೆ ಶುಭ ಸುದ್ದಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ ನಿಧಿಯನ್ನು 66% ರಷ್ಟು ಅಂದರೆ 79,000 ಕೋಟಿ ರೂಪಾಯಿಗೆ ಹೆಚ್ಚಿಸಲು ಕೇಂದ್ರವು ನಿರ್ಧರಿಸಿದೆ.

|
Google Oneindia Kannada News

ನವದೆಹಲಿ, ಫೆಬ್ರವರಿ. 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಬುಧವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2023-24 ಅನ್ನು ಮಂಡಿಸಿದ್ದಾರೆ. ಈ ವೇಳೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಖರೀದಿಸುವವರಿಗೆ ಶುಭ ಸುದ್ದಿ ನೀಡಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಿಧಿಯನ್ನು 66% ರಷ್ಟು ಅಂದರೆ 79,000 ಕೋಟಿ ರೂಪಾಯಿಗೆ ಹೆಚ್ಚಿಸಲು ಕೇಂದ್ರವು ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ.

Budget 2023: ಮೆಡಿಕಲ್ ಕಾಲೇಜುಗಳ ಹತ್ತಿರದಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಆರಂಭBudget 2023: ಮೆಡಿಕಲ್ ಕಾಲೇಜುಗಳ ಹತ್ತಿರದಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಆರಂಭ

2022-23ರ ಬಜೆಟ್‌ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಲ್ಲರಿಗೂ ವಸತಿ ಎಂಬ ಸರ್ಕಾರದ ಯೋಜನೆಗೆ 48,000 ಕೋಟಿ ರೂಪಾಯಯಿಯನ್ನು ಘೋಷಿಸಿದ್ದಾರೆ.

Budget 2023 : Good news for home buyers under PM Awas Yojana, details

ಇದೇ ವೇಳೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗುರುತಿಸಲಾದ ಅರ್ಹ ಫಲಾನುಭವಿಗಳಿಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 80 ಲಕ್ಷ ಮನೆಗಳನ್ನು ನೀಡಲಾಗುವುದು, ಅವುಗಳನ್ನ ಆದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದರು.

ಇನ್ನು, ಸೆಪ್ಟೆಂಬರ್ 29, 2022 ರ ಹೊತ್ತಿಗೆ ಎರಡು ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಅಂಕಿಅಂಶಗಳು ಹಂಚಿಕೊಂಡಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ಹಣಕಾಸು ವರ್ಷದಲ್ಲಿ ವಿಭಿನ್ನ ಗುರಿಗಳನ್ನು ನಿಗದಿಪಡಿಸುತ್ತವೆ. ವಸತಿ ಯೋಜನೆಯಡಿ ಪಟ್ಟಿ ತಯಾರಿಸುವಾಗ ಫಲಾನುಭವಿಯ ಬಳಿ ಯಾವುದೇ ಮೋಟಾರು ಚಾಲಿತ ದ್ವಿಚಕ್ರ ವಾಹನ ಅಥವಾ ತ್ರಿಚಕ್ರ ವಾಹನ ಇಲ್ಲವೇ ಎಂಬುದರ ಜೊತೆಗೆ ಇತರ ಮಾನದಂಡಗಳನ್ನು ಪರಿಶೀಲಿಸಲಾಗುತ್ತದೆ.

ವರದಿಗಳ ಪ್ರಕಾರ, ಇದುವರೆಗೆ ದೇಶದ ಲಕ್ಷಾಂತರ ಜನರು ಈ ಯೋಜನೆಯ ಲಾಭ ಪಡೆದಿದ್ದಾರೆ. ಈ ಯೋಜನೆಯಡಿ ಗುಡ್ಡಗಾಡು ಪ್ರದೇಶದ ಫಲಾನುಭವಿಗಳಿಗೆ 1.30 ಲಕ್ಷ ರೂಪಾಯಿ ಮತ್ತು ಬಯಲು ಸೀಮೆಯವರಿಗೆ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂಪಾಯಿ ನೀಡಲಾಗುತ್ತದೆ.

English summary
Union Budget 2023: Good news for home buyers under PM Awas Yojana, check details inside. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X