ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಜೆಟ್‌ ಬಗ್ಗೆ ಭಾರೀ ಮೆಚ್ಚುಗೆ!

ಇಂದು ಬಹುನಿರೀಕ್ಷೆತ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದರು. ವಿಪಕ್ಷಗಳು ಬಜೆಟ್ ಬಗ್ಗೆ ಅಸಮಧಾನದ ಹೊರತಾಗಿಯೂ ಬಿಜೆಪಿ ಇದೊಂದು ಪರಿಪೂರ್ಣ ಬಜೆಟ್ ಎಂದು ಶ್ಲಾಘಿಸಿದೆ.

|
Google Oneindia Kannada News

ಲೋಕಸಭೆಯಲ್ಲಿ ಇಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದರು. ನರೇಂದ್ರ ಮೋದಿ ಸರ್ಕಾರದ ಕೊನೆಯ ಪೂರ್ಣಾವಧಿ ಬಜೆಟ್ ಇದಾಗಿದ್ದು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಜೆಟ್‌ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹಲವಾರು ರಾಜಕೀಯ ಗಣ್ಯರು ಬಜೆಟ್ ಅನ್ನು ಶ್ಲಾಘಿಸಿದ್ದಾರೆ.

ಇಂದು ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಜೆಟ್ ಬಗ್ಗೆ ಮೆಚ್ಚುಗೆಯ ಮಾತನಾಡಿದರು. 'ಅಮೃತ್ ಕಾಲದ ಮೊದಲ ಬಜೆಟ್ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಬಲವಾದ ಅಡಿಪಾಯವನ್ನು ಹಾಕುತ್ತದೆ. ಈ ಬಜೆಟ್ ಬಡವರು, ಮಧ್ಯಮ ವರ್ಗದ ಜನರು, ರೈತರು ಸೇರಿದಂತೆ ಸಮಾಜದ ಮಹತ್ವಾಕಾಂಕ್ಷೆಯ ಕನಸುಗಳನ್ನು ಈಡೇರಿಸಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Budget 2023; ಉದ್ಯೋಗ ಸೃಷ್ಟಿಗೆ 10 ಲಕ್ಷ ಕೋಟಿ: ಕೇಂದ್ರ ಬಜೆಟ್ ನಲ್ಲಿ ಮೀಸಲುBudget 2023; ಉದ್ಯೋಗ ಸೃಷ್ಟಿಗೆ 10 ಲಕ್ಷ ಕೋಟಿ: ಕೇಂದ್ರ ಬಜೆಟ್ ನಲ್ಲಿ ಮೀಸಲು

ಜೊತೆಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಹಿಳೆಯರಿಗೆ ಜೀವನವನ್ನು ಸುಲಭಗೊಳಿಸಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಹಿಳಾ ಸ್ವಸಹಾಯ ಸಂಘಗಳು ಇದರ ಸದುಪಯೋಗಪಡಿಸಿಕೊಳ್ಳಲಿವೆ. ಮನೆಯಲ್ಲಿರುವ ಮಹಿಳೆಯರನ್ನು ಸಬಲೀಕರಣಗೊಳಿಸಲು ವಿಶೇಷ ಉಳಿತಾಯ ಯೋಜನೆ ಆರಂಭಿಸಲಾಗುವುದು ಎಂದರು.

ಬಜೆಟ್‌ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ

'ನಾರಿ ಶಕ್ತಿ' ಹೇಗೆ ಸಶಕ್ತ ರಾಷ್ಟ್ರವನ್ನು ನಿರ್ಮಿಸುತ್ತದೆ ಎಂಬುದನ್ನು ಹೊಸ ಬಜೆಟ್ ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಮಕ್ಕಳು ಮತ್ತು ಹದಿಹರೆಯದವರಿಗಾಗಿ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯದ ಘೋಷಣೆಯನ್ನು ಅವರು ಸ್ವಾಗತಿಸಿದರು.

ಬಜೆಟ್‌ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾತನಾಡಿ, "ಅಮೃತ್ ಕಾಲದ ಮೊದಲ ಬಜೆಟ್ ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವವನ್ನು ತೋರಿಸುತ್ತದೆ. ಈ ಬಜೆಟ್ ನಮ್ಮ ಸ್ಥಿರ ಆರ್ಥಿಕತೆ, ಯುವ ಭಾರತದ ಶಕ್ತಿ ಮತ್ತು ಬಹುಸಂಸ್ಕೃತಿಯ ಕೆಲಸದ ನೀತಿಗಳನ್ನು ತೋರಿಸುತ್ತದೆ' ಎಂದರು.

ಬಜೆಟ್‌ ಬಗ್ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಪ್ರತಿಕ್ರಿಯೆ

ಕೊರೊನಾದಿಂದ ವಿಶ್ವದ ಅನೇಕ ದೇಶಗಳು ಇನ್ನೂ ತಮ್ಮ ಆರ್ಥಿಕತೆಯೊಂದಿಗೆ ಹೆಣಗಾಡುತ್ತಿರುವಾಗಲೂ ಈ ಕಷ್ಟದ ಸಮಯದಲ್ಲಿ ಭಾರತದ ಆರ್ಥಿಕ ವ್ಯವಸ್ಥೆಯನ್ನು ನಿಭಾಯಿಸಿದ ಹಣಕಾಸು ಸಚಿವರು ಮತ್ತು ಪ್ರಧಾನ ಮಂತ್ರಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ಭಾರತೀಯ ಆರ್ಥಿಕತೆಯು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.

ಕೇರಳದ ಅಭಿವೃದ್ಧಿಗೆ ಬಜೆಟ್ ಸಹಕಾರಿಯಾಗಿದೆ ಎಂದು ಸಚಿವ ವಿ ಮುರಳೀಧರನ್ ಹೇಳಿದರು. ಈ ಬಜೆಟ್ ಕೇರಳದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಕೇರಳದ ಜನರ ಪರವಾಗಿ ನಾನು ಹಣಕಾಸು ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಜೆಟ್ ದೇಶದ ಭವಿಷ್ಯದ ಅಭಿವೃದ್ಧಿ, ಕೃಷಿ ವಲಯ, ಸ್ಟಾರ್ಟ್‌ಅಪ್‌ಗಳಿಗೆ ಸಹಾಯ ಮಾಡಲು ಮತ್ತು ಸಾಮಾನ್ಯ ಜನರ ಜೀವನವನ್ನು ಸುಲಭಗೊಳಿಸುವ ದೃಷ್ಟಿ ಹೊಂದಿದೆ ಎಂದು ಸಚಿವ ವಿ ಮುರಳೀಧರನ್ ಹೇಳಿದರು.

ಕೇಂದ್ರ ಬಜೆಟ್ ಬಗ್ಗೆ ಉತ್ತರಾಖಂಡ್ ಸಿಎಂ ಪಿಎಸ್ ಧಾಮಿ ಪ್ರತಿಕ್ರಿಯೆ

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಮಾತನಾಡಿ, 'ಈ ಬಜೆಟ್ ದೇಶದ ಪ್ರತಿಯೊಂದು ಕ್ಷೇತ್ರ ಮತ್ತು ಪ್ರತಿಯೊಂದು ರಾಜ್ಯಗಳ ಕಲ್ಯಾಣಕ್ಕಾಗಿದೆ. ಇದು ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಜನರ ಅನುಕೂಲಕ್ಕಾಗಿ ಮತ್ತು ದುರ್ಬಲ ವರ್ಗಗಳು ಮತ್ತು ಯುವಕರನ್ನು ಸಬಲೀಕರಣಗೊಳಿಸುವುದು' ಎಂದರು.

ಕೇಂದ್ರ ಬಜೆಟ್‌ ಬಗ್ಗೆ ಮಾತನಾಡಿದ ಉತ್ತರಾಖಂಡ್ ಸಿಎಂ ಪಿಎಸ್ ಧಾಮಿ, "ನಾನು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ದೇಶದ ಜನರ ಮುಂದೆ ಅದ್ಭುತ ಬಜೆಟ್ ಮಂಡಿಸಿದ್ದಕ್ಕಾಗಿ ಎಫ್‌ಎಂ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸುತ್ತೇನೆ. ಈ ಬಜೆಟ್ ದೇಶದ ಜನರ ನಿರೀಕ್ಷೆಗಳನ್ನು ಪೂರೈಸುತ್ತದೆ' ಎಂದರು.

ಬಜೆಟ್ ಬಗ್ಗೆ ಸಚಿವ ಡಾ.ಕೆ.ಸುಧಾಕರ್‌ ಮೆಚ್ಚುಗೆ

ಬಜೆಟ್ ಬಗ್ಗೆ ಸಚಿವ ಡಾ.ಕೆ.ಸುಧಾಕರ್‌ ಮೆಚ್ಚುಗೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 2023 ರ ಕೇಂದ್ರ ಬಜೆಟ್ ಅನ್ನು ಶ್ಲಾಘಿಸಿದರು. "ದೇಶದಲ್ಲಿ ಧನಾತ್ಮಕ ಬದಲಾವಣೆಗಳನ್ನು ತರಲು ನಿರೀಕ್ಷಿಸಲಾಗಿದೆ. 2023ರ ಬಜೆಟ್ ಕೆಲವು ವರ್ಷಗಳಲ್ಲಿ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಹೊಂದುವ ನಮ್ಮ ಗುರಿಯನ್ನು ಸಾಧಿಸುವತ್ತ ನಮ್ಮನ್ನು ಕರೆದೊಯ್ಯುತ್ತದೆ" ಎಂದು ಹೇಳಿದರು.

2023ರ ಬಜೆಟ್ ಬಗ್ಗೆ ಸಚಿವ ಡಾ.ಕೆ.ಸುಧಾಕರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಮ ವರ್ಗದ ಜನರ ಅವಶ್ಯಕತೆಗೆ ಪೂರಕವಾದ ಹಾಗೂ ಎಲ್ಲಾ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾದ ಸರ್ವಸ್ಪರ್ಶಿ ಬಜೆಟ್‌ ನೀಡಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್‌ ಬಜೆಟ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಜೆಟ್‌ ಬಗ್ಗೆ ಭಾರತಿ ಪ್ರವೀಣ್ ಪವಾರ್ ಅಭಿಪ್ರಾಯ

ಬಜೆಟ್‌ ಬಗ್ಗೆ ಭಾರತಿ ಪ್ರವೀಣ್ ಪವಾರ್ ಅಭಿಪ್ರಾಯ

'ಇಂದಿನ ಬಜೆಟ್‌ ಬಗ್ಗೆ ಹರಿಯಾಣ ಸಿಎಂ ಎಂಎಲ್ ಖಟ್ಟರ್ ಅಭಿಪ್ರಾಯ ನೀಡಿದ್ದಾರೆ. ಇದೊಂದು ಕ್ರಾಂತಿಕಾರಿ ಬಜೆಟ್ ಆಗಿದ್ದು, ಸಮಾಜದ ಪ್ರತಿಯೊಂದು ವರ್ಗಕ್ಕೂ ಪರಿಹಾರ ನೀಡಿದೆ. ಆದಾಯ ತೆರಿಗೆಯ ಹೊಸ ದರಗಳು ಜನರಿಗೆ ಪರಿಹಾರವನ್ನು ನೀಡುತ್ತವೆ. ಈ ಬಾರಿಯ ಬಜೆಟ್‌ನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ವೆಚ್ಚವನ್ನು ಶೇ.66ರಷ್ಟು ಹೆಚ್ಚಿಸಲಾಗಿದೆ. ನಾನು ಅದನ್ನು ಸ್ವಾಗತಿಸುತ್ತೇನೆ' ಎಂದು ಹರಿಯಾಣ ಸಿಎಂ ಎಂಎಲ್ ಖಟ್ಟರ್ ಹೇಳಿದರು.

'ತಂತ್ರಜ್ಞಾನ, ಆರೋಗ್ಯ ಕ್ಷೇತ್ರ ಮತ್ತು ಚಿಕಿತ್ಸೆಯ ಅಗತ್ಯತೆಗಳ ಮೇಲೆ ಬಜೆಟ್ ಕೇಂದ್ರೀಕರಿಸಿದೆ. ಐಸಿಎಂಆರ್ ಪ್ರಯೋಗಾಲಯಗಳ ಅಭಿವೃದ್ಧಿ ಮತ್ತು ಹೊಸ ತಂತ್ರಜ್ಞಾನದ ಬಗ್ಗೆಯೂ ಗಮನಹರಿಸಲಾಗಿದೆ. 2023ರ ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ' ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಹೇಳಿದರು.

English summary
Budget 2023 Reactions: Here are all the BJP Ruling States Govts Appreciates Nirmala Sitharaman's Union Budget 2023-24 in Kannada. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X