Government Employee: ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆ ಪರಿಷ್ಕರಣೆ?

ಬೆಂಗಳೂರು, ಜುಲೈ 22: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಹೊಸ ಸರ್ಕಾರದ ಬಜೆಟ್‌ ಮೇಲೆ ಅಪಾರ ನಿರೀಕ್ಷೆಗಳಿವೆ.

ಲೋಕಸಭೆ ಚುನಾವಣೆ ಮುಗಿದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಇದು. ಆದ್ದರಿಂದ ಬಜೆಟ್‌ನಲ್ಲಿ ಸರ್ಕಾರ ಜನರಿಗೆ ಯಾವ ಕೊಡುಗೆ ನೀಡಲಿದೆ? ಎಂದು ಕಾದು ನೋಡಬೇಕಿದೆ.

Budget 2024-25 May Change In House Rent Allowance Of Government Employees

ಜುಲೈ 23ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಯಾವ ಕೊಡುಗೆ ಸಿಗಲಿದೆ?, 8ನೇ ವೇತನ ಆಯೋಗ ರಚನೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಗಾಗಲೇ ನೌಕರರು ಸಲ್ಲಿಸಿದ್ದಾರೆ.

ಮನೆ ಬಾಡಿಗೆ ಭತ್ಯೆ ಪರಿಷ್ಕರಣೆ?: ಮಾಹಿತಿಗಳ ಪ್ರಕಾರ ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗುತ್ತದೆ. ಮನೆ ಬಾಡಿಗೆ ಭತ್ಯೆಯ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರಿ ನೌಕರರ ವೇತನದ ಒಂದು ಭಾಗ ಮನೆ ಬಾಡಿಗೆ ಭತ್ಯೆ. ನೌಕರರು ವಾಸಿಸುವ ನಗರಗಳಿಗೆ ಅನ್ವಯವಾಗುವಂತೆ ಮನೆ ಬಾಡಿಗೆ ಭತ್ಯೆಯಲ್ಲಿ ವ್ಯತ್ಯಾಸವಿದೆ. ಪಾವತಿ ಮಾಡಿದ ನಿಜವಾದ ಬಾಡಿಗೆ, ಅವರ ಮೂಲ ವೇತನ ಹಾಗೂ ವಾಸಸ್ಥಳದ ಅಂಶಗಳನ್ನು ಪರಿಗಣಿಸಿ ವಿನಾಯಿತಿ ನಿರ್ಧರಿಸಿ, ಹೊಸ ಘೋಷಣೆ ಮಾಡುವ ನಿರೀಕ್ಷೆ ಇದೆ.

ಬಜೆಟ್‌ ಭಾಷಣದಲ್ಲಿ ಮೆಟ್ರೋ ನಗರಗಳ ಪಟ್ಟಿಯನ್ನು ವಿಸ್ತರಣೆ ಮಾಡಲಾಗುತ್ತದೆ. ಬೆಂಗಳೂರು, ಹೈದರಾಬಾದ್, ಪುಣೆ, ನೋಯ್ಡಾ, ಗುರುಗ್ರಾಮ ಮುಂತಾದ ನಗರದಲ್ಲಿ ಮನೆ ಬಾಡಿಗೆಯು ಮೆಟ್ರೋ ನಗರಗಳಷ್ಟೇ ಇದೆ. ಮೂಲ ಸೌಕರ್ಯದ ಅಭಿವೃದ್ಧಿಯಲ್ಲಿ ಆಗಿರುವ ಬದಲಾವಣೆ ಸೇರಿ ವಿವಿಧ ಅಂಶಗಳನ್ನು ಪರಿಗಣಿಸಿ ಬಜೆಟ್‌ನಲ್ಲಿ ಹೊಸ ಘೋಷಣೆ ಮಾಡಲಾಗುತ್ತದೆ ಎಂಬ ಮಾಹಿತಿ ಇದೆ.

ಸದ್ಯ ಕೇಂದ್ರ ಸರ್ಕಾರಿ ನೌಕರರು 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವೇತನ ಪಡೆಯುತ್ತಿದ್ದಾರೆ. ಮನೆ ಬಾಡಿಗೆ ಭತ್ಯೆಯನ್ನು ಸಹ ಇದರ ಆಧಾರದ ಮೇಲೆ ನಿರ್ಧರಿಸಲಾಗಿದೆ. ಆದರೆ ಬಜೆಟ್‌ನಲ್ಲಿ ಈಗ ಇದನ್ನು ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ.

ಬಜೆಟ್ ಪೂರ್ವ ಸಭೆಯಲ್ಲಿ ಸಂಪುಟ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಸರ್ಕಾರಿ ನೌಕರರು 8ನೇ ವೇತನ ಆಯೋಗ ರಚನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದ್ದರು.

ನೌಕರರು 8ನೇ ವೇತನ ಆಯೋಗದ ವರದಿ ಜಾರಿ, ಹಳೆ ಪಿಂಚಣಿ ಯೋಜನೆ ಮರು ಜಾರಿ, ಕೋವಿಡ್ ಸಂದರ್ಭದಲ್ಲಿ ತಡೆ ಹಿಡಿದಿದ್ದ 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ ಸೇರಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಇವುಗಳಲ್ಲಿ ಯಾವ ಬೇಡಿಕೆಗೆ ಮನ್ನಣೆ ಸಿಗಲಿದೆ? ಎಂದು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+