Budget 2024: ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ,ಬೆಳ್ಳಿ ಬೆಲೆ ಇಳಿಕೆ: ನಿರ್ಮಲಾ ಸೀತಾರಾಮನ್ ಘೋಷಣೆ
ನವದೆಹಲಿ, ಜುಲೈ 23: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಕೇಂದ್ರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಆಭರಣ ಪ್ರಿಯರಿಗೆ ಶುಭ ಸುದ್ದಿಯನ್ನ ನೀಡಲಾಗಿದೆ.
ಕಳೆದ ಒಂದು ವರ್ಷದಿಂದ ಚಿನ್ನ, ಬೆಳ್ಳಿಯ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಂಗಾರದ ಬೆಲೆ ಏರಿಕೆಯಿಂದ ಆಭರಣದ ಪ್ರಿಯರಿಗೆ ಬಿಗ್ ಶಾಕ್ ನೀಡದಂತಾಗಿದ್ದು, ಇಂದು(ಜುಲೈ 23) ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಆಭರಣ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಿದೆ. ಚಿನ್ನ, ಬೆಳ್ಳಿ ಮೇಲೆ ಶೇ. 6% ರಷ್ಟು ಕಸ್ಟಮ್ಸ್ ಡ್ಯೂಟಿ ಕಡಿತ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

5 ವರ್ಷಗಳಲ್ಲಿ 20 ಲಕ್ಷ ಯುವಕರಿಗೆ ಕೌಶಲ್ಯ ನೀಡಲು ಹೊಸ ಕೇಂದ್ರ ಪ್ರಾಯೋಜಿತ ಯೋಜನೆ. ಸುಮಾರು 1,000 ಐಟಿಐಗಳನ್ನು ಹಬ್ ಮತ್ತು ಸ್ಪೋಕ್ ವ್ಯವಸ್ಥೆಯೊಂದಿಗೆ ಮೇಲ್ದರ್ಜೆಗೇರಿಸಲಾಗುವುದು - ಕೋರ್ಸ್ ವಿಷಯವು ಉದ್ಯಮದ, ವಿಶೇಷವಾಗಿ ಉದಯೋನ್ಮುಖ ಕ್ಷೇತ್ರಗಳ ಅಗತ್ಯಗಳಿಗೆ ಅನುಗುಣವಾಗಿರಬೇಕು.
2024-25ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ. ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ. ಬಜೆಟ್ನಲ್ಲಿ ಉಲ್ಲೇಖಿಸಿದಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರು ಎಂಬ ನಾಲ್ಕು ವಿಭಿನ್ನ ವಲಯಗಳ ಮೇಲೆ ಗಮನ ಹರಿಸಬೇಕಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರೈತರಿಗೆ, ನಾವು ಎಲ್ಲಾ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಗಳನ್ನು ಘೋಷಿಸಿದ್ದೇವೆ, ವೆಚ್ಚಕ್ಕಿಂತ ಕನಿಷ್ಠ 50% ಲಾಭಾಂಶದ ಭರವಸೆಯನ್ನು ಈಡೇರಿಸಿದ್ದೇವೆ. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 5 ವರ್ಷಗಳವರೆಗೆ ವಿಸ್ತರಿಸಲಾಗಿದ್ದು, 80 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಿದೆ ಎಂದರು.
ಉದ್ಯೋಗ ಮತ್ತು ಕೌಶಲ್ಯಕ್ಕೆ ಅನುಕೂಲವಾಗುವಂತೆ ಐದು ಯೋಜನೆಗಳ ಪಿಎಂ ಪ್ಯಾಕೇಜ್ ಘೋಷಿಸಿದ್ದು, ಸಚಿವರು ಮೋದಿ 3.0 ಸರ್ಕಾರವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 2 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ.
ಪ್ರಧಾನ ಮಂತ್ರಿಗಳ ಪ್ಯಾಕೇಜ್ನ ಭಾಗವಾಗಿ ಉದ್ಯೋಗ ಸಂಬಂಧಿತ ಪ್ರೋತ್ಸಾಹಕಗಳಿಗಾಗಿ ನಮ್ಮ ಸರ್ಕಾರ ಮೂರು ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇವು ಇಪಿಎಫ್ಒನಲ್ಲಿ ದಾಖಲಾತಿಯನ್ನು ಆಧರಿಸಿರುತ್ತವೆ ಮತ್ತು ಮೊದಲ ಬಾರಿಗೆ ಉದ್ಯೋಗಿಗಳನ್ನು ಗುರುತಿಸುವುದು ಮತ್ತು ಉದ್ಯೋಗಿಗಳು ಮತ್ತು ಉದ್ಯೋಗದಾತರಿಗೆ ಬೆಂಬಲವನ್ನು ಕೇಂದ್ರೀಕರಿಸುತ್ತವೆ ಎಂದು ತಿಳಿಸಿದ್ದಾರೆ.












Click it and Unblock the Notifications