Budget 2025: ಕೇಂದ್ರ ಬಜೆಟ್‌ PDF ಪ್ರತಿ ಡೌನ್‌ಲೋಡ್ ಮಾಡುವುದು ಹೇಗೆ?

ನವದೆಹಲಿ, ಫೆಬ್ರವರಿ 01: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ ಕೇಂದ್ರ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಇಂದು ಮಂಡನೆಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗದವರು, ರೈತರು ಹಾಗೂ ಯುವ ಜನತೆಗೆ ಗುಡ್‌ ನ್ಯೂಸ್‌ ಸಿಕ್ಕಿದೆ.

ಈ ಬಾರಿಯ ಅಂದರೆ 2025ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶದ ಮಧ್ಯಮ ವರ್ಗದ ಜನತೆ ಸಿಹಿ ಸುದ್ದಿ ನೀಡಿದೆ. ಮಧ್ಯಮ ವರ್ಗದ ಆದಾಯ ತೆರಿಗೆಯ ಹೊರೆಯನ್ನು ಇಳಿಸಿರುವ ಕೇಂದ್ರ ಸರ್ಕಾರ ₹12 ಲಕ್ಷದವರೆಗೂ ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸಿದೆ. ಇದರಿಂದ ಆದಾಯ ತೆರಿಗೆದಾರರರು ನಿಟ್ಟುಸಿರು ಬಿಡುವಂತಾಗಿದೆ.

Budget 2025 How To Download Budget PDF Document

ಕೇಂದ್ರ ಬಜೆಟ್‌ PDF ಪ್ರತಿ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 8ನೇ ಬಾರಿಗೆ ಮಂಡಿಸಿರುವ ಬಜೆಟ್‌ನ ಪಿಡಿಎಫ್ ಡಾಕ್ಯುಮೆಂಟ್ ಹಾಗೂ ನಿರ್ಮಲಾ ಸೀತಾರಾಮನ್ ಅವರ ಬಜೆಟ್‌ ಭಾಷಣವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದರ ವಿವರ ಇಲ್ಲಿದೆ.

2025ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಏನಿದೆ? ಹೇಗಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ ಇರುವವರು ಸಂಸತ್ತಿನಲ್ಲಿ ಬಜೆಟ್ ಭಾಷಣ ಮುಗಿದ ನಂತರ ಅಧಿಕೃತ ವೆಬ್‌ಸೈಟ್ indiabudget.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. indiabudget.gov.in ವೆಬ್‌ಸೈಟ್‌ನಲ್ಲಿ ಬಜೆಟ್‌ಗೆ ಸಂಬಂಧಿಸಿದ ದಾಖಲೆಗಳು ಲಭ್ಯವಿರುತ್ತವೆ. ಕೇಂದ್ರ ಬಜೆಟ್ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಲಭ್ಯವಿದೆ.

ಕೇಂದ್ರ ಬಜೆಟ್ ಮೊಬೈಲ್ ಅಪ್ಲಿಕೇಶನ್ ಅನ್ನು ಕೇಂದ್ರ ಬಜೆಟ್ ವೆಬ್ ಪೋರ್ಟಲ್‌ನಿಂದ ಡೌನ್‌ಲೋಡ್ ಮಾಡಬಹುದು. ಇದು ಎಲ್ಲಾ Android ಮತ್ತು iOS ಪ್ಲಾಟ್‌ಫಾರ್ಮ್‌ಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಲಭ್ಯವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+