Budget 2025: ಕೇಂದ್ರ ಬಜೆಟ್, 120 ಹೊಸ ವಿಮಾನ ನಿಲ್ದಾಣ ಸ್ಥಾಪನೆ

ಬೆಂಗಳೂರು, ಫೆಬ್ರವರಿ 01: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಸಾಲಿನ ಬಜೆಟ್ ಭಾಷಣದಲ್ಲಿ ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಘೋಷಣೆ ಮಾಡಿದ್ದಾರೆ. ಮುಂದಿನ 10 ವರ್ಷಗಳಲ್ಲಿ 4 ಕೋಟಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಹೊಸ ಏರ್‌ಪೋರ್ಟ್ ನಿರ್ಮಾಣ ಮಾಡಲಿದೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ಬಜೆಟ್‌ನಲ್ಲಿ ಬಿಹಾರದಲ್ಲಿ ಗೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ.

ಶನಿವಾರ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಭಾರತ ಸರ್ಕಾರ 120 ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲಿದೆ. ಈ ವಿಮಾನ ನಿಲ್ದಾಣಗಳು ಮುಂದಿನ 10 ವರ್ಷಗಳಲ್ಲಿ 4 ಕೋಟೆ ಹೆಚ್ಚುವರಿ ಪ್ರಯಾಣಿಕರನ್ನು ನಿರ್ವಹಣೆ ಮಾಡಲಿವೆ ಎಂದು ಹೇಳಿದರು.

Budget 2025 New Udaan Scheme And 120 New Airports

ಈಗಾಗಲೇ ಕೇಂದ್ರ ಸರ್ಕಾರ ಉಡಾನ್ ಯೋಜನೆಯನ್ನು ಘೋಷಣೆ ಮಾಡಿದೆ. ನಿರ್ಮಲಾ ಸೀತಾರಾಮನ್ ಹೊಸ ಉಡಾನ್ ಯೋಜನೆಯನ್ನು ಸಹ ಜಾರಿಗೆ ತರಲಾಗುತ್ತದೆ ಎಂದು ಹೇಳಿದರು, ಈ ಮೂಲಕ ಎರಡು ಮತ್ತು 3ನೇ ಹಂತದ ನಗರಗಳಿಗೆ ಸಹ ವಿಮಾನ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಘೋಷಣೆ ಮಾಡಿದರು.

ಕೇಂದ್ರ ಸರ್ಕಾರ ಜನ ಸಾಮಾನ್ಯರು ಸಹ ವಿಮಾನದಲ್ಲಿ ಹಾರಾಡಲು ಅನುಕೂಲವಾಗಬೇಕು ಎಂದು ಅಕ್ಟೋಬರ್ 21, 2016ರಂದು ಉಡಾನ್ ಯೋಜನೆಯನ್ನು ಘೋಷಣೆ ಮಾಡಿತು. 'ಉಡೇ ದೇಶ್ ಕಾ ಆಮ್ ನಾಗರೀಕ್' ಎನ್ನುವ ಘೋಷಣೆಯೊಂದಿಗೆ ಈ ಯೋಜನೆ ಆರಂಭಿಸಲಾಯಿತು.

ನಾಗರಿಕ ವಿಮಾನಯಾನ ಸಚಿವಾಲಯ ದೇಶಾದ್ಯಂತ ವಿಮಾನಗಳ ಮೂಲಕ ಪ್ರಾದೇಶಿಕ ವಾಯು ಸಂಪರ್ಕವವನ್ನು ಜನಸಾಮಾನ್ಯರ ಕೈಗೆಟುಕುವಂತೆ ಮಾಡಲು ಈ ಯೋಜನೆ ಜಾರಿಗೊಳಿಸಿತು. ಯೋಜನೆ ವಿಶೇಷವಾಗಿ ದೂರದ ಪ್ರದೇಶಗಳಲ್ಲಿ ಮೂಲಸೌಕರ್ಯ ಮತ್ತು ಸಂಪರ್ಕವನ್ನು ಸುಧಾರಿಸಲು ಸಹಾಯಕವಾಗಿದೆ.

ಉಡಾನ್ ಯೋಜನೆ ಮಾರುಕಟ್ಟೆ, ವಿಮಾನಯಾನ ಸಂಸ್ಥೆಗಳ ಬೇಡಿಕೆಯಂತೆ ನಿರ್ದಿಷ್ಟ ಮಾರ್ಗಗಳಲ್ಲಿ ವಿಮಾನ ಹಾರಾಟವಾಗಬೇಕು ಎಂಬ ಬೇಡಿಕೆಯನ್ನು ತೀರ್ಮಾನಿಸುತ್ತದೆ. ಯೋಜನೆಯು ವಿಮಾನ ನಿಲ್ದಾಣ ನಿರ್ವಾಹಕರು, ರಾಜ್ಯ ಸರ್ಕಾರಗಳು ಒದಗಿಸುವ ವಿವಿಧ ರಿಯಾಯಿತಿಗಳ ಮೂಲಕ ವಿಮಾನ ಸೇವೆಗೆ ಬೆಂಬಲವನ್ನು ನೀಡುತ್ತದೆ.

ಹೊಸ ಉಡಾನ್ ಯೋಜನೆಯಲ್ಲಿ ಹೆಲಿಪ್ಯಾಡ್, ಚಿಕ್ಕ ವಿಮಾನ ನಿಲ್ದಾಣಗಳ ಅಭಿವೃದ್ಧಿಗೂ ಗಮನ ನೀಡಲಾಗುತ್ತದೆ. ಅದರಲ್ಲೂ ಇದು ಈಶಾನ್ಯ ರಾಜ್ಯಗಳು, ಬೆಟ್ಟಗುಡ್ಡ ಪ್ರದೇಶದ ವಿಮಾನ ನಿಲ್ದಾಣಗಳಿಗೆ ಸಹ ಬೆಂಬಲಿಸಲಿದೆ.

ಬಿಹಾರ ರಾಜ್ಯದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಗೀನ್ ಫೀಲ್ಡ್ ವಿಮಾನ ನಿಲ್ದಾಣವನ್ನು ಪಾಟ್ನಾದಲ್ಲಿ ನಿರ್ಮಾಣ ಮಾಡಲು ಒಪ್ಪಿಗೆ ನೀಡಲಾಗಿದೆ. ಇದು ಬಿಹಾರದ ಪಾಟ್ನಾ ವಿಮಾನ ನಿಲ್ದಾಣದ ವಿಸ್ತರಣೆಗೂ ಅನುಕೂಲವಾಗಲಿದೆ ಎಂದು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ಉಡಾನ್‌ ಯೋಜನೆಯಡಿ ವಿಮಾನ ನಿಲ್ದಾಣಗಳನ್ನು ತಂದು ದೇಶದ 2 ಮತ್ತು 3ನೇ ಹಂತದ ನಗರದ ವಿಮಾನ ನಿಲ್ದಾಣಗಳನ್ನು ಇದರ ಅಡಿ ತರಲಾಗುತ್ತದೆ. ಇದು ಪ್ರಾದೇಶಿಕ ಸಂಪರ್ಕದಲ್ಲಿ ಮಹತ್ವದ ಕ್ರಾಂತಿ ಮಾಡಲಿದೆ ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+