Budget Session 2025: ಯುವಕರಿಗೆ ಬಂಪರ್, ಐತಿಹಾಸಿಕ ಬಜೆಟ್: ಪ್ರಧಾನಿ ನರೇಂದ್ರ ಮೋದಿ!
Budget Session 2025: ಕೇಂದ್ರ ಬಿಜೆಪಿ ಸರ್ಕಾರವು 2025-26ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆ ಮಾಡುವುದಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯ ಬಜೆಟ್ ಮಂಡನೆಯ ಬಗ್ಗೆ ಮಾತನಾಡಿದ್ದು. ಈ ಬಾರಿ ಐತಿಹಾಸಿಕ ಬಜೆಟ್ ಮಂಡನೆ ಮಾಡಲಿದ್ದೇವೆ. ಅಲ್ಲದೆ ದೇಶದ ಯುವಕರಿಗೆ ಭರ್ಜರಿ ಗುಡ್‌ನ್ಯೂಸ್ ಕೊಡಲಿದ್ದೇವೆ ಎಂದು ಅವರು ಹೇಳಿದ್ದಾರೆ. ದೇಶದ ಅಭಿವೃದ್ಧಿಗೆ ಈ ಬಾರಿಯ ಬಜೆಟ್ ಸಹಕಾರಿಯಾಗಲಿದೆ. ಬಜೆಟ್ ಹೊಸ ಇತಿಹಾಸವನ್ನೇ ಸೃಷ್ಟಿ ಮಾಡಲಿದೆ. ಆದರೆ, ಈ ನಾವು ಯಾವುದೇ ಕಾರಣಕ್ಕೂ ವಿದೇಶಿ ಹಸ್ತಕ್ಷೇಪಕ್ಕೆ ಅವಕಾಶ ಕೊಡುವುದಿಲ್ಲ ಎಂದೂ ಮೋದಿ ಅವರು ಹೇಳಿದ್ದಾರೆ. ಬಜೆಟ್‌ನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ಏನು ಎನ್ನುವ ವಿವರ ಇಲ್ಲಿದೆ.
ಫೆಬ್ರವರಿ 1ರಂದು ಕೇಂದ್ರ ಬಿಜೆಪಿ ಸರ್ಕಾರವು ಈ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದೆ. ಈ ಬಾರಿಯ ಬಜೆಟ್ ಹಲವು ಕಾರಣಕ್ಕೆ ಪ್ರಾಮುಖ್ಯತೆ ಪಡೆದುಕೊಂಡಿದೆ. ದೇಶದಲ್ಲಿನ ಆರ್ಥಿಕ ಪರಿಸ್ಥಿತಿ, ನಿರುದ್ಯೋಗ, ಹಣದುಬ್ಬರ ಹಾಗೂ ಆರ್ಥಿಕ ಸಂಕಷ್ಟ ಸೇರಿದಂತೆ ಹಲವು ಕಾರಣಕ್ಕೆ ಈ ಬಾರಿಯ ಬಜೆಟ್ ಯಾವ ರೀತಿ ಇರಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ. ದೇಶದಲ್ಲಿ ತೆರಿಗೆಗಳು ಹೆಚ್ಚಾಗುತ್ತಿವೆ. ನಿರಂತರ ಬೆಲೆ ಏರಿಕೆ ಹಾಗೂ ಹಣದುಬ್ಬರದ ಪರಿಸ್ಥಿತಿಯಿಂದಾಗಿ ಮಧ್ಯಮ ವರ್ಗದವರು ಜೀವನ ನಡೆಸುವುದು ಸವಾಲಾಗಿದೆ ಎನ್ನುವ ಕೂಗು ಇದೆ. ಹೀಗಾಗಿ ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಾವ ರೀತಿಯ ಬಜೆಟ್ ಮಂಡನೆ ಮಾಡಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ.

ಭಾರತದ ಸರ್ವತೋಮುಖ ಅಭಿವೃದ್ಧಿಯ ಮೇಲೆ ಕೇಂದ್ರ ಸರ್ಕಾರದ ಗಮನ ಇದೆ. ಭೌಗೋಳಿಕ, ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಗೆ ಆದ್ಯತೆ ಕೊಡುತ್ತಿದ್ದೇವೆ. ಹೊಸ ಹಾಗೂ ಹೂಡಿಕೆಗೆ ಆದ್ಯತೆ ಕೊಟ್ಟಿದ್ದೇವೆ. ಈ ಬಾರಿಯ ಬಜೆಟ್‌ನಲ್ಲಿ ನಾವು ಯುವಕರಿಗೆ ಒಳ್ಳೆಯ ಅವಕಾಶ ಹಾಗೂ ಮಹಿಳೆಯರಿಗೆ ರಕ್ಷಣೆ ಕೊಡುವುದಕ್ಕೆ ಆದ್ಯತೆ ಕೊಡಲಿದ್ದೇವೆ ಎಂದಿದ್ದಾರೆ. ದೇಶದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸುವ ಮತ್ತು ಸಮಾಜದಲ್ಲಿ ಅವರಿಗೆ ರಕ್ಷಣೆ ಹಾಗೂ ಗೌರವವನ್ನು ಹೆಚ್ಚಿಸುವ ಐತಿಹಾಸಿಕ ಮಸೂದೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಯುವಕರಿಗೆ ವಿಕಸಿತ ಭಾರತ: ಈ ಬಾರಿಯ ಬಜೆಟ್‌ನಲ್ಲಿ ವಿಕಸಿತ ಭಾರತಕ್ಕೆ ಆದ್ಯತೆ ನೀಡುತ್ತಿದ್ದೇವೆ. ಇಂದಿನ ಯುವಕ / ಯವತಿಯರು 50 ವರ್ಷಕ್ಕೆ ಬರುವ ಸಂದರ್ಭದಲ್ಲಿ ವಿಕಸಿತ ಭಾರತ ನಿರ್ಮಾಣವಾಗಲಿದೆ. ಭಾರತದ ವಿಕಸಿತ ಭಾರತ ಪರಿಕಲ್ಪನೆಯ ಲಾಭ ಯುವಕರಿಗೆ ಸಿಗಲಿದೆ. 20ರಿಂದ 25 ವರ್ಷ ವಯಸ್ಸಿನಲ್ಲಿರುವವರಿಗೆ ಉಜ್ವಲ ಭವಿಷ್ಯ ನಿರ್ಮಾಣವಾಗಲಿದೆ ಎಂದು ಅವರು ಹೇಳಿದ್ದಾರೆ.
ಬಜೆಟ್‌ನ ಕುತೂಹಲ ಹಾಗೂ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. 2014ರ ನಂತರ ಭಾರತದ ವ್ಯವಹಾರಗಳಲ್ಲಿ ಯಾವುದೇ ವಿದೇಶಿ ಹಸ್ತಕ್ಷೇಪಕ್ಕೆ ಅವಕಾಶ ಕೊಟ್ಟಿಲ್ಲ. ಇನ್ನು ಇದು ಮೊದಲ ಸಂಸತ್ ಅಧಿವೇಶನವಾಗಿದೆ. ಈ ಸಂದರ್ಭದಲ್ಲಿ ಕೆಲವರು ಅಶಾಂತಿ ಸೃಷ್ಟಿ ಮಾಡುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ನಾವು ಯಾವುದೇ ವಿದೇಶಿ ಹಸ್ತಕ್ಷೇಪಕ್ಕೆ ಅವಕಾಶ ಕೊಡುವುದಿಲ್ಲ. 2014 ರಿಂದ ಪ್ರತಿ ಬಜೆಟ್ ಅಧಿವೇಶನದ ಸಂದರ್ಭದಲ್ಲೂ ವಿದೇಶಿ ಶಕ್ತಿಗಳು ಮಧ್ಯಪ್ರವೇಶಿಸುವುದಕ್ಕೆ ಪ್ರಯತ್ನಿಸುತ್ತಿವೆ ಎನ್ನುವುದನ್ನು ನಾನು ಗಮನಿಸಿದ್ದೇನೆ. ಆದರೆ ಈ ಬಾರಿ ನಾವು ಯಾವುದೇ ಪ್ರಭಾವಕ್ಕೂ ಮಣಿಯುವುದಿಲ್ಲ ಎಂದಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications