ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲ್ವೆ ಹಾಗೂ ಕೇಂದ್ರ ಬಜೆಟ್ ಮಂಡನೆ ದಿನಾಂಕ ನಿಗದಿ

By Mahesh
|
Google Oneindia Kannada News

ನವದೆಹಲಿ, ಫೆ.04: ಸಂಸತ್ತಿನ ಬಜೆಟ್ ಅಧಿವೇಶನ ಫೆಬ್ರವರಿ 23ರಿಂದ ಆರಂಭವಾಗಲಿದ್ದು ಮಾರ್ಚ್ 16 ರ ತನಕ ನಡೆಯಲಿದೆ. ಫೆ.25ರಂದು ರೈಲ್ವೆ ಬಜೆಟ್ ಹಾಗೂ ಫೆ. 29ರಂದು ಕೇಂದ್ರ ಮುಂಗಡಪತ್ರ ಮಂಡನೆಯಾಗಲಿದೆ. ಮತ್ತೊಮ್ಮೆ ಏಪ್ರಿಲ್ 25ರಿಂದ ಮೇ 13ರ ತನಕ ಅಧಿವೇಶನ ನಿಗದಿಯಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರ ಸಮಿತಿ ಸಭೆಯಲ್ಲಿ ಬಜೆಟ್ ಅಧಿವೇಶನದ ದಿನಾಂಕ ನಿಗದಿ ಪಡಿಸಲಾಯಿತು. ಆದರೆ, ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಅಧಿವೇಶನ ಎಷ್ಟು ದಿನಗಳ ಕಾಲ ಮುಂದುವರಿಯಲಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.

ಫೆಬ್ರವರಿ 26ರಂದು ಬಜೆಟ್ ಪೂರ್ವ ಆರ್ಥಿಕ ಸಮೀಕ್ಷೆ ನಡೆಯಲಿದ್ದು, ಫೆ.29ರಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸಾಮಾನ್ಯ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರು ಗುರುವಾರ ತಿಳಿಸಿದರು. [ಅರುಣ್ ಜೇಟ್ಲಿರಿಂದ ಪೂರ್ಣ ಪ್ರಮಾಣದ ಬಜೆಟ್ ]

Budget Session from Feb 23 to May 13, Union Budget on Feb 29

ಸರಕು ವಾಹನ ತೆರಿಗೆ ಮಸೂದೆ ಮಂಡನೆ, ದಲಿತ ವಿದ್ಯಾರ್ಥಿ ರೋಹಿತ್ ವೆಮುಲಾ ಸಾವಿನ ಪ್ರಕರಣದ ಗಲಾಟೆ ನಡುವೆ ಬಜೆಟ್ ಅಧಿವೇಶನವನ್ನು ಯಶಸ್ವಿಗೊಳಿಸಲು ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಸಿದ್ಧವಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಫೆಬ್ರವರಿ 29ಕ್ಕೆ 2016-17ನೇ ಸಾಲಿನ ಬಜೆಟ್ ಮಂಡಿಸಲಿದೆ. ಇದಕ್ಕಾಗಿ ಜಯಂತ್ ಸಿನ್ಹಾ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣ್ಯಯನ್, ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನೊಳಗೊಂಡ ಜೇಟ್ಲಿ ನೇತೃತ್ವದ ತಂಡ 2016ನೇ ಸಾಲಿನ ಬಜೆಟ್ ಸಿದ್ಧಪಡಿಸುತ್ತಿದೆ.

ಕೇಂದ್ರ ಬಜೆಟ್ ನಲ್ಲಿ ವಿತ್ತೀಯ ಕೊರತೆ ಮತ್ತು ಚಾಲ್ತಿ ಖಾತೆ ಕೊರತೆ ಇರುವುದರಿಂದ ಜನೋಪಯೋಗಿ ಯೋಜನೆಗಳಿಗೆ ಅನುದಾನ ಒದಗಿಸಲು ರಕ್ಷಣೆ, ಮೂಲಭೂತ ಸೌಲಭ್ಯ ಕ್ಷೇತ್ರಗಳಿಗೆ ನೀಡುತ್ತಿರುವ ಅನುದಾನ ಕಡಿತ ಮಾಡಬಹುದು. ರೈಲ್ವೆ ಬಜೆಟ್ ನಲ್ಲಿ ಸುರಕ್ಷತೆ ಹಾಗೂ ಹಾಲಿ ಇರುವ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಮಹತ್ವ ನೀಡುವ ಸಾಧ್ಯತೆ ಕಂಡು ಬಂದಿದೆ.(ಒನ್ ಇಂಡಿಯಾ ಸುದ್ದಿ)

English summary
The Budget Session of Parliament is set to commence on February 23. While the first part of the session will be held from February 23 to March 16, the second will be from April 25 to May 13. Railway Budget is on Feb 25 and Union Budget on Feb 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X