BREAKING: ಬೆಂಗಳೂರು ಕಟ್ಟಡ ಕುಸಿತ ದುರಂತ: ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

ನವದೆಹಲಿ, ಅಕ್ಟೋಬರ್‌ 24: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯಿಂದ ಸಾವು ನೋವುಗಳು ಸಂಭವಿಸಿವೆ. ಇತ್ತ ಬೆಂಗಳೂರಿನ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ

ಈ ಕುರಿತು ಪ್ರಧಾನಿ ಕಚೇರಿಯಿಂದ ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಮಾಹಿತಿ ತಿಳಿದು ಬಂದಿದ್ದು, ಬೆಂಗಳೂರಿನಲ್ಲಿ ಕಟ್ಟಡ ಕುಸಿತದಿಂದ ಪ್ರಾಣಹಾನಿಯಾಗಿರುವುದು ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗಾದರೂ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ.ಪರಿಹಾರ ನೀಡಲಾಗುತ್ತದೆ ಎಂದು ಬರೆದಿದ್ದಾರೆ.

Building Collapse PM Modi Announces Rs 2 Lakh Compensation For Families Of Deceased

ಕಟ್ಟಡ ಕುಸಿತ ದುರಂತದಿಂದ ಇದುವರೆಗೂ ಸಾವಿನ ಸಂಖ್ಯೆ ಆರಕ್ಕೆ ತಲುಪಿದೆ. ಈ ಪ್ರಕರಣದ ಕುರಿತು ಮೂವರನ್ನ ಅರೆಸ್ಟ್‌ ಮಾಡಲಾಗಿದೆ. ಮೃತರನ್ನು ಹರ್ಮನ್ (26), ತ್ರಿಪಾಲ್ (35), ಮೊಹಮ್ಮದ್ ಸಾಹಿಲ್ (19), ಸತ್ಯ ರಾಜು (25) ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಜಗದೇವಿ (45), ರಶೀದ್ (28), ನಾಗರಾಜು (25), ರಮೇಶ್ ಕುಮಾರ್ (28) ಮತ್ತು ಅಯಾಜ್ ಎಂದು ಗುರುತಿಸಲಾಗಿದೆ. ಗಾಯಾಳುಗಳು ಬೆಂಗಳೂರು ಉತ್ತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಒಬ್ಬರು ಹೋಸ್ಮತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದು, ಬೆಂಗಳೂರಿನ ಬಾಬುಸಾಪಾಳ್ಯದ ಕಟ್ಟಡ ಕುಸಿತ ದುರಂತ ಆಘಾತಕಾರಿ. ದೃಶ್ಯಮಾಧ್ಯಮದಲ್ಲಿ ಕಂಡ ಆ ದೃಶ್ಯ ಭಯಾನಕ. ದುರ್ಘಟನೆಯಲ್ಲಿ ಬಡ ಕೂಲಿಕಾರ್ಮಿಕರು ಜೀವ ತೆತ್ತಿರುವುದು ಬಿಬಿಎಂ ಕಮಿಷರ್‌ ನಿರ್ಲಕ್ಷ್ಯ, ಅದಕ್ಷತೆಗೆ ಹಿಡಿದ ಕನ್ನಡಿ. ಬೆಂಗಳೂರು ನಗರದಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅಂಕೆಯೇ ಇಲ್ಲ, ಅನುಮತಿ ಕೊಡುವಲ್ಲಿ ಎಸಗುವ ಭ್ರಷ್ಟಚಾರ, ರಾಜಕೀಯ ಒತ್ತಡ ಇಂಥ ಘೋರ ದುರಂತಗಳಿಗೆ ಕಾರಣ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸ್ಥಳಕ್ಕೆ ಭೇಟಿ, ಮೃತರಿಗೆ ಪರಿಹಾರ ಘೋಷಿಸಿರುವುದೇನೋ ಸರಿ. ಆದರೆ, ಇಂಥ ದೀರ್ಘಟನೆಗಳು ಭವಿಷ್ಯದಲ್ಲಿ ಘಟಿಸಬಾರದು. ಕಾಂಗ್ರೆಸ್ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+