ಹರಿಯಾಣದಲ್ಲಿ ಬುಲ್ಡೋಜರ್ ಕ್ರಮ ಖಂಡಿಸಿ ಸಿಎಂ ವಿರುದ್ಧ ಓವೈಸಿ ಆಕ್ರೋಶ!
ಹರಿಯಾಣದ ನುಹ್ ಹಿಂಸಾಚಾರದ ಬಳಿಕ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬುಲ್ಡೋಜರ್ ಕ್ರಮಕ್ಕೆ ಆದೇಶ ನೀಡುವ ಮೂಲಕ ನ್ಯಾಯಾಲಯದ ಹಕ್ಕುಗಳನ್ನು ಕಸಿದುಕೊಂಡಿದ್ದಾರೆ ಎಂದು ಲೋಕಸಭೆ ಸಂಸದ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ಅವರು ಇದನ್ನು ಮುಸ್ಲಿಮರಿಗೆ ನೀಡಿದ ಸಾಮೂಹಿಕ ಶಿಕ್ಷೆ ಎಂದು ಕರೆದಿದ್ದಾರೆ.
ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಆತ್ಮವಿಶ್ವಾಸ ಮೂಡಿಸುವ ಕ್ರಮಗಳು ನಡೆಯುತ್ತಿವೆ ಎಂಬ ನುಹ್ ಡೆಪ್ಯೂಟಿ ಕಮಿಷನರ್ ಧೀರೇಂದ್ರ ಖಡ್ಗಟಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಓವೈಸಿ, ಖಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದರು.

"ಮನೆಗಳು, ಮೆಡಿಕಲ್ ಶಾಪ್‌ಗಳು ಮತ್ತು ಒಂದು ಸಮುದಾಯದ (ಮುಸ್ಲಿಮರು) ಗುಡಿಸಲುಗಳನ್ನು ಧ್ವಂಸ ಮಾಡುವ ಮೂಲಕ ಸಾಮೂಹಿಕ ಶಿಕ್ಷೆಯನ್ನು ನೀಡಲಾಗಿದೆ. ಇದಕ್ಕೆ ಸರಿಯಾದ ನಿಯಮವನ್ನು ಅನುಸರಿಸದೆ ಕೆಡವಲಾಗಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸರ್ಕಾರ ನ್ಯಾಯಾಲಯಗಳ ಹಕ್ಕುಗಳನ್ನು ಕಸಿದುಕೊಂಡಿದೆ" ಎಂದು ಅವರು ನಿನ್ನೆ ಸಂಜೆ ಟ್ವೀಟ್ ಮಾಡಿದ್ದಾರೆ.
“Confidence Building" means buildings,homes and medical shops &shanties of one community (Muslims)should be Demolished without following due process to give collective punishment.
— Asaduddin Owaisi (@asadowaisi) August 6, 2023
The @mlkhattar government has usurped the rights of Courts of Law
“ Confidence "is being given to… https://t.co/t8WpMP1U7H
ಓವೈಸಿ ಹೇಳಿಕೆಗೆ ಪ್ರತಿಕ್ರಿಯಿಸಿದ ನುಹ್ ಡೆಪ್ಯೂಟಿ ಕಮಿಷನರ್ ಅವರು ವೀಡಿಯೊ ಕ್ಲಿಪ್‌ನಲ್ಲಿ, ಕೆಡವುವಿಕೆಯು ವಾಡಿಕೆಯ ಕಾರ್ಯವಿಧಾನವಾಗಿದೆ ಮತ್ತು ಯಾರನ್ನೂ ಗುರಿಯಾಗಿಸಲು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು.
ಬುಲ್ಡೋಜರ್ ಕ್ರಿಯೆ ಮತ್ತು ನುಹ್ ಹಿಂಸಾಚಾರ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಕೆಡವಲಾಗುತ್ತಿರುವ ಕೆಲವು ಅಂಗಡಿಗಳು ಮತ್ತು ಮನೆಗಳು ಇತ್ತೀಚಿನ ಘರ್ಷಣೆಯಲ್ಲಿ ಭಾಗಿಯಾಗಿರುವವರ ಮಾಲೀಕತ್ವದವು ಎಂದು ಅಧಿಕಾರಿಗಳು ಹೇಳುತ್ತಾರೆ.

ಘರ್ಷಣೆಯ ಸಮಯದಲ್ಲಿ ಧಾರ್ಮಿಕ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಹೇಳಲಾದ ಪ್ರದೇಶದಲ್ಲಿ "ಅಕ್ರಮ" ಕಟ್ಟಡಗಳನ್ನು ನೆಲಸಮಗೊಳಿಸಲಾಗುತ್ತಿರುವುದರಿಂದ, ಪರಿಸ್ಥಿತಿ ಸಹಜವಾಗುವವರೆಗೆ ಜಿಲ್ಲೆಯಲ್ಲಿ ಇಂಟರ್ನೆಟ್ ಮೇಲಿನ ನಿಷೇಧ ಮುಂದುವರಿಯುತ್ತದೆ ಎಂದು ಧೀರೇಂದ್ರ ಖಡ್ಗಟಾ ಹೇಳಿದರು.
ಕೆಲವು ಜನರು ಸಹಾರಾ ಹೋಟೆಲ್‌ನ ಮೇಲ್ಛಾವಣಿಯಿಂದ ಕಲ್ಲುಗಳನ್ನು ಎಸೆದ ನಂತರ ನುಹ್‌ನಲ್ಲಿ ಹಿಂಸಾಚಾರ ಪ್ರಾರಂಭವಾಯಿತು ಎಂದು ಅಧಿಕಾರಿಗಳು ನಂಬಿದ್ದಾರೆ. ಹೀಗಾಗಿ ನುಹ್ ಜಿಲ್ಲಾಡಳಿತ ಭಾನುವಾರದಂದು ಬುಲ್ಡೋಜರ್‌ಗಳನ್ನು ತಂದು ಸಹಾರಾ ಹೋಟೆಲ್ ಅನ್ನು ನೆಲಸಮಗೊಳಿಸಿದೆ.
ವಿವಿಧ ಪ್ರದೇಶಗಳಲ್ಲಿ 50 ರಿಂದ 60 ಕಟ್ಟಡಗಳನ್ನು ಇದುವರೆಗೆ ಕೆಡವಲಾಗಿದೆ. ಬಂಧನಕ್ಕೆ ಹೆದರಿ ಹಲವರು ಓಡಿ ಹೋಗಿದ್ದಾರೆ. ಕಳೆದ ಹಲವು ವರ್ಷಗಳಿಂದ ತೆರವಿಗೆ ಸಾಧ್ಯವಾಗದ ಅಕ್ರಮ ಒತ್ತುವರಿಯನ್ನು ಅಧಿಕಾರಿಗಳು ಗುರಿಯಾಗಿಸಿಕೊಂಡಿದ್ದಾರೆ ಎಂದು ಸರಕಾರಿ ಮೂಲಗಳು ಹೇಳಿವೆ.
ಸೋಮವಾರ ವಿಶ್ವ ಹಿಂದೂ ಪರಿಷತ್ ಮೆರವಣಿಗೆ ಮೇಲೆ ಗುಂಪು ದಾಳಿ ಮಾಡಿದಾಗ ನುಹ್‌ನಲ್ಲಿ ಉಂಟಾದ ಕೋಮು ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕರು ಮತ್ತು ಧರ್ಮಗುರು ಸೇರಿದಂತೆ ಆರು ಜನರು ಸಾವನ್ನಪ್ಪಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications