Maharashtra Bus Fire: ಬಸ್‌ಗೆ ಬೆಂಕಿ ತಗುಲಿ 25 ಮಂದಿ ಸಜೀವ ದಹನ

ಮುಂಬೈ, ಜುಲೈ 01: ಮಹಾರಾಷ್ಟ್ರದಲ್ಲಿ ಶನಿವಾರ ಮುಂಜಾನೆ ಭೀಕರ ದುರಂತವೊಂದು ನಡೆದು ಹೋಗಿದೆ. ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್‌ಗೆ ಬೆಂಕಿ ತಗುಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ

ಬಸ್‌ನಿಂದ 25 ಶವಗಳನ್ನು ಹೊರತೆಗೆಯಲಾಗಿದೆ. ಬಸ್‌ನಲ್ಲಿ ಒಟ್ಟು 32 ಜನರು ಪ್ರಯಾಣಿಸುತ್ತಿದ್ದರು. 6-8 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ" ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

 Bus Fire on Maharashtra Expressway Claims 25 Lives, Including 3 Children

ಪುಣೆಗೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 33 ಜನರು ಪ್ರಯಾಣಿಸುತ್ತಿದ್ದರು, ಸಮೃದ್ಧಿ-ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಕ್ಸ್ ಪ್ರೆಸ್ ವೇಯಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟೈರ್ ಸ್ಫೋಟಗೊಂಡ ನಂತರ ಬಸ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಅಪಘಾತದಲ್ಲಿ ಬದುಕುಳಿದಿರುವ ಬಸ್ ಚಾಲಕ ಹೇಳಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ 25 ಜನರು ಸುಟ್ಟು ಕರಕಲಾಗಿದ್ದು, ಬಸ್ ಚಾಲಕ ಸೇರಿದಂತೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬುಲ್ದಾನದ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಕಡಸಾನೆ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. "ಈ ಕ್ಷಣದಲ್ಲಿ ಶವಗಳನ್ನು ಗುರುತಿಸುವುದು ಮತ್ತು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವುದು ಮೊದಲ ಆದ್ಯತೆಯಾಗಿದೆ" ಎಂದು ಕಡಸಾನೆ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+