Breaking: ಉತ್ತರ ಪ್ರದೇಶ ಬಸ್-ಟ್ರಕ್ ಡಿಕ್ಕಿಯಾಗಿ 8 ಮಂದಿ ಸಾವು, 24 ಮಂದಿ ಗಾಯ
ಲಕ್ನೋ, ಸೆಪ್ಟೆಂಬರ್ 28: ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಎಂಟು ಮಂದಿ ದುರ್ಮರಣ ಹೊಂದಿದ್ದಾರೆ. ಇದೇ ವೇಳೆ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆರೋಗ್ಯ ಅಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದು, ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.












Click it and Unblock the Notifications