ವೀರಪ್ಪನ್ ಕಾರ್ಯಾಚರಣೆಯಲ್ಲಿದ್ದ ಅಧಿಕಾರಿ ಈಗ ಜಮ್ಮು ರಾಜ್ಯಪಾಲರ ಸಲಹೆಗಾರ
ನವದೆಹಲಿ, ಜೂನ್ 21: ಕರ್ನಾಟಕ-ತಮಿಳುನಾಡು ಗಡಿಭಾಗದಲ್ಲಿ ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಐಪಿಎಲ್ ಅಧಿಕಾರಿ ಕೆ. ವಿಜಯ್ ಕುಮಾರ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಎನ್.ಎನ್. ವೋಹ್ರಾ ಅವರ ಸಲಹೆಗಾರರಾಗಿ ನೇಮಿಸಲಾಗಿದೆ.
ವಿಜಯ್ ಕುಮಾರ್ ಅವರು ಕೇಂದ್ರ ಗೃಹ ಸಚಿವಾಲಯದಲ್ಲಿ ಹಿರಿಯ ಭದ್ರತಾ ಸಲಹೆಗಾರರಾಗಿ ಕಳೆದ ವಾರವಷ್ಟೇ ನಿವೃತ್ತರಾಗಿದ್ದರು.
ವೀರಪ್ಪನ್‌ನನ್ನು ಹಿಡಿಯಲು ತಮಿಳುನಾಡಿನಲ್ಲಿ ರಚಿಸಲಾಗಿದ್ದ ವಿಶೇಷ ಕಾರ್ಯಪಡೆಯ ಮುಖ್ಯಸ್ಥರಾಗಿದ್ದ ವಿಜಯ್ ಕುಮಾರ್ ಅವರು 'ಆಪರೇಷನ್ ಕಕೂನ್ ಅನ್ನು ಆರಂಭಿಸಿದ್ದರು.

ವೀರಪ್ಪನ್ ಹತ್ಯೆಯೊಂದಿಗೆ ಯಶಸ್ವಿ ಕಾರ್ಯಾಚರಣೆ ಪೂರ್ಣಗೊಳಿಸಿದ್ದ ವಿಜಯ್‌ಕುಮಾರ್ಬ ಅವರು ಜನಪ್ರಿಯತೆ ಪಡೆದುಕೊಂಡಿದ್ದರು.
ಛತ್ತೀಸಗಡದಲ್ಲಿ ಹೆಚ್ಚುವರಿ ಗೃಹ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಮಣ್ಯಂ ಅವರನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
ಕಾರ್ಯಾವಧಿ ವಿಸ್ತರಣೆಯಲ್ಲಿ ಒಂದು ವರ್ಷ ಪೂರೈಸಿರುವ ಬಿ.ಬಿ.ವ್ಯಾಸ್ ಅವರ ಸ್ಥಾನವನ್ನು ಸುಬ್ರಮಣ್ಯಂ ಅವರು ತುಂಬಲಿದ್ದಾರೆ.
ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂದಕ್ಕೆ ಪಡೆದುಕೊಂಡಿದ್ದರಿಂದ ಸರ್ಕಾರ ಪತನವಾಗಿದ್ದು, ರಾಜ್ಯಪಾಲರ ಆಳ್ವಿಕೆಯನ್ನು ಹೇರಲಾಗಿದೆ. ಈ ಸಂಬಂಧ ಅಲ್ಲಿ ಸುಬ್ರಮಣ್ಯಂ ಅವರನ್ನು ಸಲಹೆಗಾರರನ್ನಾಗಿ ನೇಮಿಸಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಸುಬ್ರಮಣ್ಯಂ ಅವರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ವ್ಯಕ್ತಿ. ಆಂತರಿಕ ಭದ್ರತೆ ವಿಚಾರದಲ್ಲಿ ಅವರು ಪರಿಣತರಾಗಿದ್ದಾರೆ. ಸರ್ಕಾರ ನಿಶ್ಚಿತ ಉದ್ದೇಶಗಳೊಂದಿಗೆ ಅವರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸುತ್ತಿದೆ.
ರಾಜ್ಯದಲ್ಲಿನ ತನ್ನ ಕಠಿಣ ಮತ್ತು ಬಿಗಿಯಾದ ನೀತಿಗಳನ್ನು ಜಾರಿಗೊಳಿಸುವ ಸಲುವಾಗಿ ಸುಬ್ರಮಣ್ಯಂ ಅವರನ್ನು ನೇಮಿಸಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications