India
  • search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ: 7 ವಿಧಾನಸಭೆ 3 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿವರು

|
Google Oneindia Kannada News

ನವದೆಹಲಿ, ಜೂನ್ 26: ದೆಹಲಿ ಮತ್ತು ಐದು ರಾಜ್ಯಗಳಲ್ಲಿ ಜೂನ್ 23 ರಂದು ಉಪಚುನಾವಣೆ ನಡೆದ ಮೂರು ಲೋಕಸಭೆ ಮತ್ತು ಏಳು ವಿಧಾನಸಭಾ ಸ್ಥಾನಗಳ ಮತಗಳನ್ನು ಎಣಿಕೆ ಭಾನುವಾರ ನಡೆಯುತ್ತಿದೆ. ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ವಿಧಾನಸಭಾ ಉಪಚುನಾವಣೆಯ ಪ್ರಮುಖ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ.

ತ್ರಿಪುರಾ ರಾಜ್ಯದ ಅಗರ್ತಲಾ, ಜುಬರಾಜನಗರ, ಸುರ್ಮಾ ಮತ್ತು ಟೌನ್ ಬರ್ಡೋವಾಲಿ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಿತು. ಟೌನ್ ಬರ್ಡೋವಾಲಿಯಿಂದ ಸ್ಪರ್ಧಿಸಿರುವ ರಾಜ್ಯಸಭಾ ಸಂಸದ ಮಾಣಿಕಾ ಸಹಾ ಮುಖ್ಯಮಂತ್ರಿಯಾಗಿ ಮುಂದುವರಿಯಲು ಈ ಚುನಾವಣೆಯಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

ದೆಹಲಿಯ ರಾಜಿಂದರ್ ನಗರ, ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಮಂದರ್ ಮತ್ತು ಆಂಧ್ರಪ್ರದೇಶದ ಆತ್ಮಕೂರು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿದೆ. ಉತ್ತರ ಪ್ರದೇಶದ ರಾಂಪುರ ಮತ್ತು ಅಜಂಗಢ್ ಮತ್ತು ಪಂಜಾಬ್‌ನ ಸಂಗ್ರೂರ್ ಲೋಕಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳು ನಡೆದಿವೆ.

ರಾಂಪುರದಲ್ಲಿ ಬಿಜೆಪಿ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಘನಶ್ಯಾಮ್ ಸಿಂಗ್ ಲೋಧಿ ಅವರನ್ನು ಕಣಕ್ಕಿಳಿಸಿದೆ. ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಸೀಂ ರಾಜಾ ಸ್ಪರ್ಧಿಸಿದ್ದು, ಮಾಯಾವತಿಯವರ ಬಹುಜನ ಸಮಾಜ ಪಕ್ಷವು ರಾಂಪುರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ.

ಅಜಂಗಢ್ ಕ್ಷೇತ್ರವು ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಭೋಜ್‌ಪುರಿ ನಟ-ಗಾಯಕ, ಬಿಜೆಪಿಯ ದಿನೇಶ್ ಲಾಲ್ ಯಾದವ್ ಸ್ಪರ್ಧಿಸಿದ್ದಾರೆ. ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ಮತ್ತು ಬಹುಜನ ಸಮಾಜ ಪಕ್ಷದ ಶಾ ಆಲಂ, ಸ್ಪರ್ಧಿಸಿದ್ದಾರೆ.

ಪಂಜಾಬ್‌ನ ಸಂಗ್ರೂರ್ ಲೋಕಸಭಾ ಕ್ಷೇತ್ರದಲ್ಲಿ, ಆಪ್ ಪಕ್ಷದ ಸಂಗ್ರೂರ್ ಜಿಲ್ಲಾ ಉಸ್ತುವಾರಿ ಗುರ್ಮೈಲ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ, ಕಾಂಗ್ರೆಸ್ ಧುರಿ ಶಾಸಕ ದಲ್ವಿರ್ ಸಿಂಗ್ ಗೋಲ್ಡಿ, 4 ತಿಂಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾದ ಬರ್ನಾಲಾ ಮಾಜಿ ಶಾಸಕ ಕೇವಲ್ ಧಿಲ್ಲೋನ್ ಸ್ಪರ್ಧೆ ಮಾಡಿದ್ದಾರೆ.

By-Election Results Today: Herss Candidates, Constituency Details

ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಹತ್ಯೆ ಪ್ರಕರಣದ ಅಪರಾಧಿ ಬಲ್ವಂತ್ ಸಿಂಗ್ ರಾಜೋನಾ ಅವರ ಸಹೋದರಿ ಕಮಲದೀಪ್ ಕೌರ್ ಅವರನ್ನು ಶಿರೋಮಣಿ ಅಕಾಲಿ ದಳದಿಂದ ಕಣಕ್ಕಿಳಿಸಲಾಗಿದೆ. ಅಕಾಲಿಯ ಅಮೃತಸರ ಮುಖ್ಯಸ್ಥ ಸಿಮ್ರಂಜಿತ್ ಸಿಂಗ್ ಮಾನ್ ಕೂಡ ಸ್ಪರ್ಧೆಯಲ್ಲಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಶಾಸಕ ಬಂಧು ಟಿರ್ಕಿ ಅವರನ್ನು ಅನರ್ಹಗೊಳಿಸಿದ ನಂತರ ಜಾರ್ಖಂಡ್‌ ಮಂದರ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಆಡಳಿತಾರೂಢ ಜೆಎಂಎಂ ನೇತೃತ್ವದ ಒಕ್ಕೂಟದ ಸಾಮಾನ್ಯ ಅಭ್ಯರ್ಥಿಯಾಗಿ ಅನರ್ಹ ಶಾಸಕ ಬಂಧು ಟಿರ್ಕಿ ಪುತ್ರಿ ಶಿಲ್ಪಿ ನೇಹಾ ಟಿರ್ಕಿ ಕಾಂಗ್ರೆಸ್ ಪರವಾಗಿ ಕಣಕ್ಕಿಳಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಗಂಗೋತ್ರಿ ಕುಜೂರ್ ಸ್ಫರ್ಧಿಸಿದ್ದಾರೆ. ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಬೆಂಬಲಿತ ಸ್ವತಂತ್ರ ಅಭ್ಯರ್ಥಿ ದೇವ್ ಕುಮಾರ್ ಧನ್ ಕೂಡ ಜಾರ್ಖಂಡ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ದೆಹಲಿಯ ರಾಜಿಂದರ್ ನಗರದಲ್ಲಿ ಎಎಪಿಯ ದುರ್ಗೇಶ್ ಪಾಠಕ್, ಕೌನ್ಸಿಲರ್ ಆಗಿದ್ದ ಬಿಜೆಪಿಯ ರಾಜೇಶ್ ಭಾಟಿಯಾ ನಡುವೆ ಸಮಬಲ ಹೋರಾಟ ಏರ್ಪಡುವ ಸಾಧ್ಯತೆ ಇದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರೇಮ್ ಲತಾ ಕಣಕ್ಕಿಳಿದಿದ್ದಾರೆ.

ಫೆಬ್ರವರಿಯಲ್ಲಿ ಕೈಗಾರಿಕಾ ಸಚಿವ ಮೇಕಪತಿ ಗೌತಮ್ ರೆಡ್ಡಿ ನಿಧನರಾದ ನಂತರ ತೆರವಾದ ಸ್ಥಾನಕ್ಕೆ ಆಂಧ್ರಪ್ರದೇಶದಲ್ಲಿ ಉಪಚುನಾವಣೆ ನಡೆಸಲಾಯಿತು. ಮೇಕಪತಿ ಗೌತಮ್ ರೆಡ್ಡಿ ಕಿರಿಯ ಸಹೋದರ ವಿಕ್ರಮ್ ರೆಡ್ಡಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ. ಬಿಜೆಪಿ ಅಭ್ಯರ್ಥಿ ಜಿ ಭರತ್ ಕುಮಾರ್ ಯಾದವ್ ಸ್ಪರ್ಧಿಸಿದ್ದಾರೆ.

English summary
Votes are being counted today in three Lok Sabha and seven assembly seats across five states and Delhi. Tripura Chief Minister Manik Saha is among the key candidates of the assembly by-election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X