ಉಪಚುನಾವಣೆ: ಮಣಿಪುರದಲ್ಲಿ ಮೊದಲ ಗೆಲುವು ದಾಖಲಿಸಿದ ಬಿಜೆಪಿ
ನವದೆಹಲಿ,ನವೆಂಬರ್ 10: ಮಣಿಪುರದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಮೊದಲ ಜಯ ಗಳಿಸಿದೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಸಿಂಘಟ್ ಕ್ಷೇತ್ರದಿಂದ ಗಿನ್ಸುವಾನ್ಹಾ ಗೆಲುವು ಸಾಧಿಸಿದ್ದಾರೆ. ಮಣಿಪುರದಲ್ಲಿ ಒಟ್ಟು ಐದು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಇನ್ನುಳಿದ ಎರಡಲ್ಲಿ ಮುನ್ನಡೆಯಲ್ಲಿದೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ ವಾಂಗಾಯ್ ಕ್ಷೇತ್ರದಲ್ಲಿ ಬಿಜೆಪಿ ಓಯ್ನಮ್ ಲುಖಾಯ್‌ಸಿಂಗ್ 268 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಎನ್‌ಪಿಪಿಯ ಖುರೈಜಾಮ್ ಲೋಕೆನ್ ಸಿಂಗ್ ಅವರ ವಿರುದ್ಧ ಮುನ್ನಡೆಯಲ್ಲಿದ್ದಾರೆ.

ಕಾಂಗ್ರೆಸ್‌ನ ಮೋಯ್‌ರಂಗ್ಥೆಮ್ ಹೇಮಂತಾ ಸಿಂಗ್ 675 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ನವೆಂಬರ್ 7 ರಂದು ಲಿಲಾಂಗ್, ವಾಂಗ್‌ಜಿಂಗ್, ತೆಂಥಾ, ಸೈತು ಈ ಐದು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.
ಬಿಹಾರದಲ್ಲಿ ಎನ್‌ಡಿಎ ಹಾಗೂ ಮಹಾಘಟಬಂಧನ್ ಮೈತ್ರಿ ನಡುವೆ ಬಿರುಸಿನ ಸ್ಪರ್ಧೆ ನಡೆಯುತ್ತಿದೆ. ವಿವಿಧ ರಾಜ್ಯಗಳ ಉಪ ಚುನಾವಣೆಗಳಲ್ಲಿ ಮಾತ್ರ ಬಿಜೆಪಿ ಭಾರಿ ಮುನ್ನಡೆ ಸಾಧಿಸುತ್ತಿದೆ. ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶ, ತೆಲಂಗಾಣ, ಮಣಿಪುರ, ಕರ್ನಾಟಕ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಗುಜರಾತ್‌ನ 8 ಕ್ಷೇತ್ರಗಳ ಪೈಕಿ ಬಿಜೆಪಿ 7ರಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮುಂದಿದೆ.












Click it and Unblock the Notifications