ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ: ಬಿಜೆಪಿಗೆ 6 ರಾಜ್ಯಗಳಲ್ಲಿ ಆರಂಭಿಕ ಮುನ್ನಡೆ

|
Google Oneindia Kannada News

ಪಾಟ್ನಾ, ನವೆಂಬರ್ 10: ಬಿಹಾರದಲ್ಲಿ ಎನ್‌ಡಿಎ ಹಾಗೂ ಮಹಾಘಟಬಂಧನ್ ಮೈತ್ರಿ ನಡುವೆ ಬಿರುಸಿನ ಸ್ಪರ್ಧೆ ನಡೆಯುತ್ತಿದೆ.

Recommended Video

ಎಲ್ಲಾಕಡೆ ಅರಳಿದ ಕಮಲ!! | BJP | Oneindia Kannada

ವಿವಿಧ ರಾಜ್ಯಗಳ ಉಪ ಚುನಾವಣೆಗಳಲ್ಲಿ ಮಾತ್ರ ಬಿಜೆಪಿ ಭಾರಿ ಮುನ್ನಡೆ ಸಾಧಿಸುತ್ತಿದೆ. ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶ, ತೆಲಂಗಾಣ, ಮಣಿಪುರ, ಕರ್ನಾಟಕ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

Live Updates: ಬಿಹಾರದ ರಾಘೋಪುರ್ ಕ್ಷೇತ್ರದಲ್ಲಿ ತೇಜಸ್ವಿ ಯಾದವ್ ಮುನ್ನಡೆLive Updates: ಬಿಹಾರದ ರಾಘೋಪುರ್ ಕ್ಷೇತ್ರದಲ್ಲಿ ತೇಜಸ್ವಿ ಯಾದವ್ ಮುನ್ನಡೆ

ಗುಜರಾತ್‌ನ 8 ಕ್ಷೇತ್ರಗಳ ಪೈಕಿ ಬಿಜೆಪಿ 7ರಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮುಂದಿದೆ.

By Polls: BJP Leading In 6 States

ಛತ್ತೀಸ್‌ಗಢದಲ್ಲಿ ಒಂದು ವಿಧಾನಸಭಾ ಕ್ಷೇತ್ರ ಮತ ಎಣಿಕೆ ನಡೆಯುತ್ತಿದ್ದು, ಅಲ್ಲಿ ಕಾಂಗ್ರೆಸ್ ಮುಂದಿದೆ, ಹರ್ಯಾಣದಲ್ಲೂ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜಾರ್ಖಂಡ್‌ನಲ್ಲಿ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದೊಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕರ್ನಾಟಕದಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ, ಮಧ್ಯಪ್ರದೇಶದಲ್ಲಿ 28 ಕ್ಷೇತ್ರಗಳ ಪೈಕಿ 19ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಣಿಪುರ ಐದು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳ ಮತ ಎಣಿಕೆ ವಿವರ ತಿಳಿದದಿದ್ದು ಇದರಲ್ಲಿ ಬಿಜೆಪಿ ಎರಡರಲ್ಲಿ ಮುನ್ನಡೆ ಸಾಧಿಸಿದೆ. ಒಡಿಶಾದಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಡಿ ಮುನ್ನಡೆ ಸಾಧಿಸಿದೆ.

ತೆಲಂಗಾಣದಲ್ಲಿ ಒಂದು ಕ್ಷೇತ್ರದಲ್ಲಿ ಬಿಜೆಪಿ ಮುಂದಿದೆ, ಉತ್ತರ ಪ್ರದೇಶದಲ್ಲಿ ಏಳು ಕ್ಷೇತ್ರಗಳ ಪೈಕಿ ಐದರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು ಕಾಂಗ್ರೆಸ್ ಇಲ್ಲಿ ಶೂನ್ಯ.

English summary
By Polls 2020: In Bihar NDA and Mahaghathbandhan fighting closely for the asssembly but in 6 States BJP leading Comfortably in By Polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X