Get Updates
Get notified of breaking news, exclusive insights, and must-see stories!

ಬಿಜೆಪಿಯಲ್ಲೂ ಕುರ್ಚಿ ಕಿತ್ತಾಟ: ಏಕಾಏಕಿ ಅಮಿತ್‌ ಶಾ ಭೇಟಿಯಾದ ವಿಜಯೇಂದ್ರ: ಕಾರಣವೇನು?

ದೆಹಲಿ, ನವೆಂಬರ್‌ 24: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ನಡುವೆ ಜಟಾಪಟಿ ಏರ್ಪಟ್ಟಿದ್ರೆ, ಇತ್ತ ರಾಜ್ಯ ಬಿಜೆಪಿಯಲ್ಲೂ ಪದೇ ಪದೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಏಕಾಏಕಿ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರನ್ನ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ದೆಹಲಿಯಲ್ಲಿ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನೂ ಅಮಿತ್‌ ಶಾ ಅವರ ಭೇಟಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಟ್ವೀಟ್‌ ಮಾಡಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಗೌರವಪೂರ್ವಕವಾಗಿ ಅಭಿನಂದಿಸಿದರು. ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, ಎನ್‍ಡಿಎ ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

BY Vijayendra meets Union Home Minister Amit Shah

ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು. ರಾಜ್ಯದಲ್ಲಿ ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದು ರಾಜ್ಯ ಬಿಜೆಪಿ ಪ್ರಕಟಣೆ ತಿಳಿಸಿದೆ.

ಹೆಚ್‌ ಡಿ ಕುಮಾರಸ್ವಾಮಿ ಭೇಟಿಯಾದ ವಿಜಯೇಂದ್ರ

ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಹಾಗು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ರಾಜ್ಯದಲ್ಲಿ NDA ಮೈತ್ರಿಯನ್ನು ಮತ್ತಷ್ಟು ಬಲಪಡಿಸಿ, ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟದ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+