ರಾಜ್ಯಾಧ್ಯಕ್ಷರ ಬದಲಾವಣೆ: ಮೋದಿ ಭೇಟಿ ಮಾಡಿದ ಬಿ ವೈ ವಿಜಯೇಂದ್ರ: ಚರ್ಚೆಯಾಗಿದ್ದೇನು?

ನವದೆಹಲಿ, ಡಿಸೆಂಬರ್‌ 18: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಕೇಳಿ ಬರುತ್ತಿದೆ. ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರದಲ್ಲೂ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ ಹೊರ ಹಾಕಿದ್ದಾರೆ.

ಈ ಎಲ್ಲಾ ಬೆಳವಣಿಗಳ ನಡುವೆ ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಅವರ ಹೇಳಿಕೆ ಕಮಲ ಪಾಳಯದಲ್ಲಿ ಸಂಚಲನವನ್ನ ಸೃಷ್ಟಿಸಿತ್ತು. ಈ ಚರ್ಚೆಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿರುವುದು ಹಲವು ಪ್ರಶ್ನೆಗಳು ಹುಟ್ಟುವಂತೆ ಮಾಡಿದೆ. ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷರ ಬಿ ವೈ ವಿಜಯೇಂದ್ರ ಅವರು ರಾಜ್ಯ ರಾಜಕಾರಣದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

BY Vijayendra Met PM Narendra Modi In Delhi

ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಕುರಿತು ಬಿ ವೈ ವಿಜಯೇಂದ್ರ ಅವರು ಟ್ವೀಟ್‌ ಮೂಲಕ ಸಂತಸವನ್ನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಅಪೂರ್ವ ಕ್ಷಣಗಳು ಕರ್ನಾಟಕ ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.

ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ ಎಂದು ವಿವರಿಸಿದ್ದಾರೆ.

ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು, ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದರು ಎಂದು ಬಿ ವೈ ವಿಜಯೇಂದ್ರ ಅವರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+