ರಾಜ್ಯಾಧ್ಯಕ್ಷ ಸ್ಥಾನಕ್ಕೆ ಜಟಾಪಟಿ: ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಬಿ ವೈ ವಿಜಯೇಂದ್ರ, ರಮೇಶ್ ಜಾರಕಿಹೊಳಿ
ಬೆಂಗಳೂರು, ಫೆಬ್ರವರಿ 13: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಚರ್ಚೆ ಜೋರಾಗಿದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಣ ತಿರುಗಿ ಬಿದಿದ್ದು, ರಾಜ್ಯಾಧ್ಯಕ್ಷ ಬದಲಾಗಬೇಕು ಎಂದು ಹೈಕಮಾಂಡ್ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ ಯತ್ನಾಳ್ ಬಣ ಹಾಗೂ ಬಿವೈ ವಿಜಯೇಂದ್ರ ಅವರು ಹೈಕಮಾಂಡ್ ನಾಯಕ ಭೇಟಿದ್ದು, ಇದೀಗ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳಕ್ಕೆ ತೆರಳಿರುವಂತ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಅವರು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಇಬ್ಬರು ನಾಯಕರು ಪ್ರತ್ಯೇಕವಾಗಿ ಕುಂಭಮೇಳದಲ್ಲಿ ಪುಣ್ಯಸ್ನಾನವನ್ನ ಮಾಡಿದ್ದಾರೆ.

ಇನ್ನೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಇಂದು ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಪುನೀತ ಭಾವ ಮೂಡಿಸಿತು ಎಂದಿದ್ದಾರೆ.
ಜಾಗತಿಕ ಶಾಂತಿಗಾಗಿ, ದೇಶದ ಕಲ್ಯಾಣಕ್ಕಾಗಿ ಕರುನಾಡ ಜನರ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಈ ಕುಂಭಮೇಳ ಫೆಬ್ರವರಿ 28ರ ಕೊನೆಯ ದಿನದವರೆಗೂ ಹರಿದು ಬರುವ ಭಕ್ತ ಸಾಗರಕ್ಕೆ ಪುಣ್ಯ ಲಭಿಸಲಿ, ಯಾವುದೇ ಅವಘಡಗಳು ಸಂಭವಿಸದಿರಲೆಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು. ಪರಮಪೂಜ್ಯ ಋಷಿ ಮುನಿಗಳ ಆಶೀರ್ವಾದ ನವ ಚೈತನ್ಯ ಮೂಡಿಸಿತು ಎಂದು ಹೇಳಿದ್ದಾರೆ.
ಗೋಕಾಕ ಬಿಜೆಪಿ ಶಾಸಕ ಹಾಗೂ ರಾಜ್ಯ ಬಿಜೆಪಿ ಘಟಕದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿಯವರು ಸಹ ಪ್ರಯಾಗ್ರಾಜ್ ತೆರಳಿ ಪುಣ್ಯಸ್ನಾನ ಮಾಡಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಲ ಸ್ನೇಹಿತರು ಸಹ ಇದ್ದರು.
ಈಗಾಗಲೇ ರಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಗಣ್ಯರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು. ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ರಾಜಕೀಯ ನಾಯಕರು ಮಾತ್ರವಲ್ಲದೇ ದೊಡ್ಡ ದೊಡ್ಡ ಸೆಲೆಬ್ರೆಟಿ, ಉದ್ಯಮಿಗಳು ಸಹ ಪುಣ್ಯಸ್ನಾನವನ್ನ ಮಾಡಿದ್ದಾರೆ.
144 ವರ್ಷಗಳ ಬಳಿಕ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಜನವರಿ 13 ರಿಂದ ಮಹಾ ಕುಂಭಮೇಳ ಆರಂಭವಾಗಿದ್ದು, ಈ ಮಹಾ ಕುಂಭಮೇಳವು ಫೆಬ್ರವರಿ 26ರವರೆಗೂ ನಡೆಯಲಿದೆ. ಈಗಾಗಲೇ ಕೋಟ್ಯಂತರ ಭಕ್ತರು ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ದೇಶ-ವಿದೇಶದಿಂದ ಆಗಮಿಸುತ್ತಿರುವ ಭಕ್ತರು ಜಗತ್ಪ್ರಸಿದ್ಧ ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.












Click it and Unblock the Notifications