By Election: ವಯನಾಡು ಲೋಕಸಭಾ ಕ್ಷೇತ್ರ ಹಾಗೂ 31 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ

ಬುಧವಾರ, ವಯನಾಡ್ ಲೋಕಸಭಾ ಕ್ಷೇತ್ರ ಸೇರಿದಂತೆ ದೇಶದ 10 ರಾಜ್ಯಗಳು ಸೇರಿ ಒಟ್ಟು 31 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟದ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟ ಈ ಉಪಚುನಾವಣೆಯಲ್ಲಿ ಗಂಭೀರವಾಗಿ ತೆಗೆದುಕೊಂಡಿದ್ದು ಭರ್ಜರಿ ಪ್ರಚಾರ ನಡೆಸಿವೆ. ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ಜೊತೆಗೆ ಈ ಉಪಚುನಾವಣೆ ನಡೆಯುತ್ತಿದೆ.

ಜಾರ್ಖಂಡ್ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳಂತೆ ಈ ಉಪಚುನಾವನೆ ಕೂಡ ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟಕ್ಕೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಹಲವು ಸಂಸದರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಬಹುತೇಕ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಇನ್ನು ಕೆಲವು ಕ್ಷೇತ್ರಗಳಲ್ಲಿ ಶಾಸಕರ ಸಾವಿನ ಬಳಿಕ ಉಪಚುನಾವಣೆ ನಡೆಯುತ್ತಿದೆ.

Bypolls in wayanad lok sabha 31 assembly constituencies

ಕರ್ನಾಟಕದ ಮೂರು, ಮಧ್ಯಪ್ರದೇಶದ ಎರಡು, ರಾಜಸ್ಥಾನದ ಏಳು, ಬಿಹಾರದ ನಾಲ್ಕು, ಅಸ್ಸಾಂನ ಐದು, ಪಶ್ಚಿಮ ಬಂಗಾಳದ ಆರು ಮತ್ತು ಛತ್ತೀಸ್‌ಗಢ, ಗುಜರಾತ್, ಕೇರಳ ಮತ್ತು ಮೇಘಾಲಯದಲ್ಲಿ ತಲಾ ಒಂದು ಸ್ಥಾನಗಳಿಗೆ ಮತದಾನ ನಡೆಯಲಿದೆ.

ವಯನಾಡ್ ಲೋಕಸಭಾ ಉಪಚುನಾವಣೆ

ರಾಹುಲ್ ಗಾಂಧಿ ರಾಜೀನಾಮೆ ಬಳಿಕ ತೆರವಾದ ಸ್ಥಾನಕ್ಕೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು ಭಾರಿ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾರಣ ಅವರನ್ನು ಗೆಲ್ಲಿಸಲು ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಎಲ್‌ಡಿಎಫ್‌ನ ಸತ್ಯನ್ ಮೊಕೇರಿ, ಎನ್‌ಡಿಎಯ ನವ್ಯಾ ಹರಿದಾಸ್ ಮತ್ತು ಇತರ 13 ಜನ ಕಣದಲ್ಲಿದ್ದು ಬುಧವಾರ ಮತದಾನ ನಡೆಯಲಿದೆ.

ಕರ್ನಾಟಕ ಉಪಚುನಾವಣೆ

ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಉಪಚುನಾವಣೆ ನಡೆಯುತ್ತಿದ್ದರು, ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್‌ಡಿಎ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಸ್ಪರ್ಧೆ ಮಾಡಿರುವ ಕಾರಣ ಇದು ಪ್ರತಿಷ್ಠೆಯ ಚುನಾವಣೆಯಾಗಿ ಮಾರ್ಪಟ್ಟಿದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ನಡುವೆ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಜೋರಾಗಿದೆ. ಶಿಗ್ಗಾಂವಿಯಲ್ಲಿ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದಾರೆ.

ಎಲ್ಲೆಲ್ಲಿ ಉಪಚುನಾವಣೆ

ರಾಜಸ್ಥಾನದ ಜುಂಜುನು, ದೌಸಾ, ದಿಯೋಲಿ-ಉನಿಯಾರಾ, ಖಿನ್ವಸರ್, ಚೌರಾಸಿ, ಸಾಲುಂಬರ್ ಮತ್ತು ರಾಮಗಢ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದ ತಲ್ದಂಗ್ರಾ, ಸಿತೈ-ಎಸ್‌ಸಿ, ನೈಹತಿ, ಹರೋವಾ, ಮೇದಿನಿಪುರ್ ಮತ್ತು ಮದರಿಹತ್ ಒಟ್ಟು ಆರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಅಸ್ಸಾಂನ ಧೋಲೈ, ಬೆಹಾಲಿ, ಸಮಗುರಿ, ಬೊಂಗೈಗಾಂವ್ ಮತ್ತು ಸಿದ್ಲಿ, ಬಿಹಾರದ ರಾಮಗಢ, ತರಾರಿ, ಇಮಾಮ್‌ಗಂಜ್ ಮತ್ತು ಬೆಳಗಂಜ್, ಮಧ್ಯಪ್ರದೇಶ ಬುದ್ನಿ ಮತ್ತು ವಿಜಯಪುರ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಎಲ್ಲಾ ಕ್ಷೇತ್ರಗಳ ಉಪಚುನಾವಣೆಗಳ ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+