ಜೂನ್ 23ಕ್ಕೆ ಮೂರು ಲೋಕಸಭೆ, 7 ವಿಧಾನಸಭೆ ಸ್ಥಾನಕ್ಕೆ ಚುನಾವಣೆ
ನವದೆಹಲಿ, ಮೇ 25: ವಿವಿಧ ರಾಜ್ಯಗಳ ಮೂರು ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಏಳು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯೋಗವು ಬುಧವಾರ (ಮೇ 25)ದಂದು ಪ್ರಕಟಣೆ ಹೊರಡಿಸಿ ಜೂನ್ 23ರಂದು ಚುನಾವಣಾ ದಿನಾಂಕ ನಿಗದಪಡಿಸಿದೆ.
ಉತ್ತರ ಪ್ರದೇಶದ ಅಜಂಗಢ ಮತ್ತು ರಾಂಪುರದ ಮೂರು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ಸಮಾಜವಾದಿ ಪಕ್ಷದ ನಾಯಕರಾದ ಅಖಿಲೇಶ್ ಯಾದವ್ ಮತ್ತು ಮೊಹಮ್ಮದ್ ಅಜಮ್ ಖಾನ್ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಕ್ಷೇತ್ರಗಳನ್ನು ತೆರವು ಮಾಡಿದರು- ಮತ್ತು ಪಂಜಾಬ್‌ನ ರಾಜ್ಯದ ಮುಖ್ಯಮಂತ್ರಿಯಾದ ಭಗವಂತ್ ಮಾನ್ ಅವರಿಂದ ತೆರವಾದ ಸಂಗ್ರೂರ್ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿ, ಮೊದಲ ಬಾರಿಗೆ ಪಂಜಾಬ್ ರಾಜ್ಯದಲ್ಲಿ ಅಧಿಕಾರ ಸ್ಥಾಪಿಸಿದೆ.

ಉಪಚುನಾವಣೆ ನಡೆಯುವ ಏಳು ವಿಧಾನಸಭಾ ಸ್ಥಾನಗಳ ಪೈಕಿ ಒಂದು ದೆಹಲಿಯ ರಾಜಿಂದರ್ ನಗರ, ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿದ್ದ ಎಎಪಿಯ ರಾಘವ್ ಚಡ್ಡಾ ಅವರಿಂದ ತೆರವಾಗಿದೆ.
ಜಾರ್ಖಂಡ್‌ನ ಮಂದರ್, ಆಂಧ್ರಪ್ರದೇಶದ ಆತ್ಮಕೂರ್ ಮತ್ತು ತ್ರಿಪುರಾದ ಅಗರ್ತಲಾ, ಟೌನ್ ಬೋರ್ಡೋವಾಲಿ, ಸುರ್ಮಾ ಮತ್ತು ಜುಬಾರಾಜ್‌ನಗರದಲ್ಲಿ ಉಪಚುನಾವಣೆ ನಡೆಯಲಿರುವ ಉಳಿದ ವಿಧಾನಸಭಾ ಕ್ಷೇತ್ರಗಳಾಗಿವೆ.
ಜೂನ್ 26 ರಂದು ಮತ ಎಣಿಕೆ ನಡೆಯಲಿದ್ದು, ಮೇ 30 ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ. ಉಪಚುನಾವಣೆಗಳು ಭಾರತದ ರಾಷ್ಟ್ರಪತಿಯನ್ನು ಆಯ್ಕೆ ಮಾಡುವ ಚುನಾವಣಾ ಕೊಲಾಜ್‌ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಚುನಾವಣಾ ಸಮಿತಿಗೆ ನೆರವಾಗಲಿದೆ ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಬಹುದು. ಹೀಗಾಗಿ, ಈ ಉಪ ಚುನಾವಣೆಗಳು ಮಹತ್ವ ಪಡೆದುಕೊಂಡಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications