Get Updates
Get notified of breaking news, exclusive insights, and must-see stories!

India's New Vice President: ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ

India's New Vice President: ಭಾರತದ ನೂತನ ಉಪ ರಾಷ್ಟ್ರಪತಿಯಾಗಿ 67 ವರ್ಷದ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಸೆಪ್ಟೆಂಬರ್ 12) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು. ಹಾಗಾದ್ರೆ, ಸಿ.ಪಿ.ರಾಧಾಕೃಷ್ಣನ್ ಯಾರು ಹಾಗೂ ಅವರ ಹಿನ್ನೆಲೆ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಉಪರಾಷ್ಟ್ರಪತಿ ಜಗದೀಪ್ ಧನಕರ್​ ರಾಜೀನಾಮೆ ಹಿನ್ನೆಲೆ ಸೆಪ್ಟೆಂಬರ್ 9ರಂದು ಅವರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಸಿಪಿ ರಾಧಾಕೃಷ್ಣನ್ ಅವರು ಮಾಜಿ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ವಿರುದ್ದ ಗೆದ್ದಿದ್ದರು. ಬಿ. ಸುದರ್ಶನ್ ಅವರು 300 ಮತಗಳನ್ನ ಗಳಿಸಿದ್ರೆ, ಸಿ.ಪಿ.ರಾಧಾಕೃಷ್ಣನ್ 452 ಮತಗಳು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದರು. ಇಂದು (ಸೆಪ್ಟೆಂಬರ್ 12) ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

C P Radhakrishnan Sworn In as the 15th Vice President of India

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಭೋದಿಸಿದ್ದು, ಈ ವೇಳೆ ನಿರ್ಗಮಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕೂಡ ಉಪಸ್ಥಿತರಿದ್ದರು. ಅಲ್ಲದೆ, ಪ್ರಧಾನಿ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಹ ಪಾಲ್ಗೊಂಡಿದ್ದರು.

ಸಿ.ಪಿ.ರಾಧಾಕೃಷ್ಣನ್ ಅವರ ಹಿನ್ನೆಲೆ ಏನು?: ಚಂದ್ರಾಪುರಂ ಪೊನ್ನುಸಾಮಿ ರಾಧಾಕೃಷ್ಣನ್ ಎಂಬುದು ಸಿ.ಪಿ.ರಾಧಾಕೃಷ್ಣನ್ ಅವರ ಪೂರ್ಣ ಹೆಸರು. ಇವರು ತಮಿಳುನಾಡು ಮೂಲದವಾರಾಗಿದ್ದು, ತಿರುಪುರದಲ್ಲಿ ಅಕ್ಟೋಬರ್ 20, 1957ರಲ್ಲಿ ಜನಿಸಿದರು. 16ನೇ ವಯಸ್ಸಿನಲ್ಲಿ ಆರ್‌ಎಸ್‌ಎಸ್‌ ಹಾಗೂ ಜನಸಂಘದೊಂದಿಗೆ ಗುರುತಿಸಿಕೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು. ನಂತರದ ದಿನಗಳಲ್ಲಿ ಬಿಜೆಪಿ ಸೇರ್ಪಡೆ ಆದರು.

ಇವರನ್ನು 1996ರಲ್ಲಿ ತಮಿಳುನಾಡಿನ ಬಿಜೆಪಿ ಕಾರ್ಯದರ್ಶಿ ಆಗಿ ನೇಮಕ ಮಾಡಲಾಯಿತು. 1998 ಮತ್ತು 1999ರಲ್ಲಿ ಕೊಯಮತ್ತೂರು ಲೋಕಸಭಾ ಸದಸ್ಯರಾಗಿ ಆಯ್ಕೆ ಆದರು. 2003-2006ರ ವರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕರ್ತವ್ಯ ನಿಭಾಯಿಸಿದ್ದಾರೆ. 2004ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸಂಸದೀಯ ನಿಯೋಗದ ನೇತೃತ್ವವಹಿಸಿ ಭಾಷಣ ಮಾಡಿದ್ದಾರೆ. ಮಹಾರಾಷ್ಟ್ರದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಜಾರ್ಖಂಡ್​ನ ರಾಜ್ಯಪಾಲರಿ ಆಗಿದ್ದರು.

ಫೆಬ್ರವರಿ 18, 2023ರಿಂದ ಜುಲೈ 30, 2024ರ ವರೆಗೆ ಜಾರ್ಖಂಡ್‌ನ ರಾಜ್ಯಪಾಲರು ಆಗಿದ್ದರು. ಮಾರ್ಚ್ 2024 ಜುಲೈನಿಂದ ಆಗಸ್ಟ್ 2024ರ ವರೆಗೆ ತೆಲಂಗಾಣ ಮತ್ತು ಪುದುಚೇರಿಗೆ ಹೆಚ್ಚುವರಿ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಇನ್ನು ಇದೀಗ ಭಾರತದ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರು.

ಎಷ್ಟು ಮತಗಳ ಅಂತರದಿಂದ ಗೆಲುವು?: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ಅಭ್ಯರ್ಥಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ವಿರುದ್ಧ 152 ಮತಗಳ ಅಂತರದಿಂದ ಸಿ.ಪಿ. ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+