CAA: ಸಿಎಎ ಅಲ್ಪಸಂಖ್ಯಾತರ ವಿರುದ್ಧವಾಗಿಲ್ಲ
ನವದೆಹಲಿ, ಮಾರ್ಚ್ 11: ಲೋಕಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಇರುವಾಗ ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸಿಎಎ ಜಾರಿಗೊಳಿಸಲು ಸೋಮವಾರ ಅಧಿಸೂಚನೆ ಹೊರಡಿಸುವ ಮೂಲಕ ದೇಶಾದ್ಯಂತ ಚರ್ಚೆಯನ್ನು ಹುಟ್ಟು ಹಾಕಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮೂಲಕ ಕೇಂದ್ರ ಸರ್ಕಾರ 2014ರ ಡಿಸೆಂಬರ್ 31ರ ತನಕ ಭಾರತಕ್ಕೆ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದ ಹಿಂದೂ, ಸಿಖ್, ಜೈನ, ಬುದ್ಧ, ಪಾರ್ಸಿ ಮತ್ತು ಕ್ರೈಸ್ತರಿಗೆ ದೇಶದ ಪೌರತ್ವವನ್ನು ನೀಡಲಿದೆ.

ಸಂಸತ್ ಮತ್ತು ರಾಜ್ಯಸಭೆಯಲ್ಲಿ ಪೌರತ್ವ (ತಿದ್ದುಪಡಿ) ಮಸೂದೆ 2019 ಅಂಗೀಕಾರಗೊಂಡಿತ್ತು. ಆದರೆ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಇದನ್ನು ಜಾರಿಗೊಳಿಸುವ ಅಧಿಸೂಚನೆ ಪ್ರಕಟಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಇದು ಅಲ್ಪ ಸಂಖ್ಯಾತರ ವಿರೋಧಿ ಎಂಬ ವಾದವೂ ಇದೆ.
ಅಲ್ಪಸಂಖ್ಯಾತರ ವಿರೋಧಿಯಲ್ಲ: ರಾಜ್ಯಸಭೆಯಲ್ಲಿ ಈ ಹಿಂದೆ ಪೌರತ್ವ (ತಿದ್ದುಪಡಿ) ಮಸೂದೆ 2019 ಮಂಡನೆ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, "ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಹೊಸ ಭರವಸೆಯನ್ನು ಇದು ನೀಡುತ್ತದೆ" ಎಂದು ಹೇಳಿದ್ದರು.
"ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳವನ್ನು ಎದುರಿಸಿದ ನಂತರ ಭಾರತಕ್ಕೆ ವಲಸೆ ಬಂದವರಿಗೆ ಇದು ಸಹಕಾರಿ. ಮಸೂದೆಯು ಭಾರತದಲ್ಲಿನ ಯಾವುದೇ ಅಲ್ಪಸಂಖ್ಯಾತರ ವಿರುದ್ಧವಾಗಿಲ್ಲ ಮತ್ತು ಪ್ರತಿಯೊಬ್ಬ ಭಾರತೀಯ ನಾಗರಿಕನ ಹಕ್ಕುಗಳನ್ನು ಸಮಾನವಾಗಿ ರಕ್ಷಿಸಲಾಗುವುದು" ಎಂದು ಸ್ಪಷ್ಟಪಡಿಸಿದ್ದರು.
ರಾಜ್ಯಸಭೆಯಲ್ಲಿ ಸಿಎಎ ಮಸೂದೆ ಮಂಡನೆ ಬಳಿಕ ನಡೆದ ಚರ್ಚೆಗೆ ಉತ್ತರ ನೀಡಿದ್ದ ಅಮಿತ್ ಶಾ, "ದಶಕಗಳಿಂದ ಧಾರ್ಮಿಕ ಕಿರುಕುಳ ಅನುಭವಿಸಿದ ಜನರಿಗೆ ಭಾರತೀಯ ಪೌರತ್ವವನ್ನು ನೀಡುವ ಮೂಲಕ ಅವರಿಗೆ ಗೌರವಯುತ ಜೀವನವನ್ನು ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಅವರು ಪೌರತ್ವ ನೀಡುವ ಷರತ್ತುಗಳನ್ನು ಪೂರೈಸಿದರೆ. ಭಾರತಕ್ಕೆ ಪ್ರವೇಶಿಸಿದ ದಿನಾಂಕ ಮತ್ತು ವರ್ಷದಿಂದ ಪೌರತ್ವವನ್ನು ನೀಡಲಾಗುವುದು" ಎಂದು ಹೇಳಿದ್ದರು.
"ಅವರ ವ್ಯಾಪಾರ ಮತ್ತು ವ್ಯಾಪಾರ ಹಿತಾಸಕ್ತಿಗಳನ್ನು ಸಮಾನವಾಗಿ ರಕ್ಷಿಸುವುದರ ಜೊತೆಗೆ ಅವರ ವಿರುದ್ಧದ ಎಲ್ಲಾ ಪ್ರಕರಣಗಳು ಮತ್ತು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತದೆ. ಅಲ್ಪಸಂಖ್ಯಾತರ ಪಾಸ್‌ಪೋರ್ಟ್‌ಗಳು ಮತ್ತು ವೀಸಾಗಳ ಅವಧಿ ಮುಗಿದಿದ್ದರೂ, ಅವರನ್ನು ಅಕ್ರಮ ಎಂದು ಪರಿಗಣಿಸಲಾಗುವುದಿಲ್ಲ" ಎಂದು ತಿಳಿಸಿದ್ದರು.
ಪೌರತ್ವ (ತಿದ್ದುಪಡಿ) ಕಾಯ್ದೆ ಮೂರು ದೇಶಗಳ 6 ಅಲ್ಪಸಂಖ್ಯಾತ ಸಮುದಾಯಗಳ ವಲಸಿಗರು/ ವಿದೇಶಿಯರು ತಮ್ಮ ಧರ್ಮದ ಆಧಾರದ ಮೇಲೆ ಕಿರುಕುಳದ ಕಾರಣದಿಂದ ಭಾರತಕ್ಕೆ ಬಂದವರು ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುತ್ತದೆ. ಹೀಗೆ ಭಾರತಕ್ಕೆ ಬಂದ ವಿದೇಶಿಗರು ಕೆಲವು ಕಾನೂನು ಪ್ರಕ್ರಿಯೆ ಪೂರೈಸಿದ ನಂತರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರು.
ಡಿಸೆಂಬರ್ 2014ಕ್ಕಿಂತ ಮೊದಲು ಮೂರು ದೇಶಗಳಿಂದ ಭಾರತಕ್ಕೆ ವಲಸೆ ಬಂದಿದ್ದರೆ ಅಂತಹವರು ಪೌರತ್ವಕ್ಕಾಗಿ ಷರತ್ತುಗಳು/ ಅರ್ಹತೆಗಳನ್ನು ಪೂರೈಸಿ ಭಾರತೀಯ ಪೌರತ್ವವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಭಾರತೀಯ ಪ್ರಜೆಗಳಿಗೆ ಇದು ಯಾವುದೇ ರೀತಿಯಲ್ಲಿಯೂ ಅನ್ವಯವಾಗುವುದಿಲ್ಲ.
2019ರಲ್ಲಿಯೇ ಸಿಎಎ ಉಭಯ ಸದನಗಳಲ್ಲಿ ಅಂಗೀಕಾರಗೊಂಡು ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದಿತ್ತು. ಆದರೆ ಇದರ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದವು. ಸುಮಾರು 100ಕ್ಕೂ ಅಧಿಕ ಜನರು ಸಾವನ್ನಪ್ಪಿದರು. ಆದ್ದರಿಂದ ಇದನ್ನು ಸರ್ಕಾರ ಜಾರಿಗೊಳಿಸಿರಲಿಲ್ಲ.
ಕೇಂದ್ರ ಗೃಹ ಸಚಿವಾಲಯ ಸಿಎಎ ಜಾರಿಗಾಗಿಯೇ ಪ್ರತ್ಯೇಕ ಪೋರ್ಟಲ್ ಆರಂಭಿಸಿದೆ. ಮೂರು ದೇಶಗಳಿಂದ ಭಾರತಕ್ಕೆ ವಲಸೆ ಬಂದಿದ್ದರೆ ಅವರು ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಪೌರತ್ವ ಪಡೆಯಲು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಸುವವರು ಪ್ರಯಾಣದ ದಾಖಲೆ ಮೂಲಕ ಭಾರತದಕ್ಕೆ ಬಂದ ವರ್ಷವನ್ನು ಸಾಬೀತು ಮಾಡಬೇಕು. ಬೇರೆ ಯಾವುದೇ ದಾಖಲೆಗಳ ಅಗತ್ಯವಿಲ್ಲ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications