ತೆಂಗು ಬೆಳೆಗಾರರಿಗೆ ಗುಡ್‌ನ್ಯೂಸ್; ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ: ಎಷ್ಟು ದರ?
ನವದೆಹಲಿ,ಡಿಸೆಂಬರ್ 13: ತೆಂಗು ಬೆಳೆಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕೊಬ್ಬರಿ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರವು ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು 2026 ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ (MSP) ಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ MSP ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸುವುದಾಗಿ ಘೋಷಿಸಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು 2026ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಅನುಮೋದನೆ ನೀಡಿದೆ. 2026 ರ ಹಂಗಾಮಿನಲ್ಲಿ ಮಿಲ್ಲಿಂಗ್(ಚಿಕ್ಕ ಚಿಕ್ಕ ತುಂಡು) ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್ ಗೆ 445 ಹೆಚ್ಚಿಸಿ 12,027 ಕ್ಕೆ ನಿಗದಿಪಡಿಸಲಾಗಿದೆ. ಉಂಡೆ ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್ ಗೆ 400 ಹೆಚ್ಚಿಸಿ 12,500 ಕ್ಕೆ ನಿಗದಿ ಮಾಡಲಾಗಿದೆ.
ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭ ಖಚಿತಪಡಿಸಲು ಮತ್ತು ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಉತ್ಪಾದನೆ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮಿಲ್ಲಿಂಗ್ ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ಹೆಚ್ಚಿಸಿ 12,027ಕ್ಕೆ ನಿಗದಿಪಡಿಸಿದ್ದು, ಉಂಡೆ ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 400 ಹೆಚ್ಚಿಸಿ 12,500ಕ್ಕೆ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.
ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸಿನ ಮೇರೆಗೆ ಕೊಬ್ಬರಿಯ ನ್ಯಾಯಯುತ ಮತ್ತು ಸರಾಸರಿ ಗುಣಮಟ್ಟಕ್ಕೆ ಎಂಎಸ್‌ಪಿ ನಿಗದಿಪಡಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟವು (ಎನ್‌ಸಿಸಿಎಫ್) ಕೇಂದ್ರ ನೋಡಲ್ ಏಜೆನ್ಸಿಗಳಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
ಇನ್ನೂ ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರ ಬೆಲೆ ಹೆಚ್ಚಳದ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು 2026ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದೆ.
ಈ ನಿರ್ಧಾರದಿಂದಾಗಿ ರಾಜ್ಯದ ತೆಂಗು ಬೆಳೆಗಾರರಿಗೆ ಹೆಚ್ಚಿನ ಲಾಭ ದೊರೆಯಲಿದ್ದು, ಹೋಳು ಕೊಬ್ಬರಿ ಮತ್ತು ಉಂಡೆ ಕೊಬ್ಬರಿ ಎರಡರ ದರದಲ್ಲೂ ಗಮನಾರ್ಹ ಏರಿಕೆ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೋಳು ಕೊಬ್ಬರಿಗೆ 445 ರೂ., ಉಂಡೆ ಕೊಬ್ಬರಿಗೆ 400 ರೂ. ಹೆಚ್ಚಳ ಮಾಡಲಾಗಿದೆ.
ಹೋಳು ಕೊಬ್ಬರಿ
2025ರ ದರ: 11,582 ರೂ.
2026ರ ಹೊಸ ದರ: 12,027 ರೂ.
ಒಟ್ಟು ಹೆಚ್ಚಳ: 445 ರೂ.
ಉಂಡೆ ಕೊಬ್ಬರಿ
2025ರ ದರ: 12,100 ರೂ.
2026ರ ಹೊಸ ದರ: 12,500 ರೂ.
ಒಟ್ಟು ಹೆಚ್ಚಳ: 400 ರೂ.
2014 ರಿಂದ ಕೇಂದ್ರ ಸರ್ಕಾರವು ಮಿಲ್ಲಿಂಗ್ ಕೊಬ್ಬರಿಯ ಎಂಎಸ್‌ಪಿಯನ್ನು ಗಣನೀಯವಾಗಿ ಹೆಚ್ಚಿಸುತ್ತಾ ಬಂದಿದ್ದು, 2014ರ ಮಾರುಕಟ್ಟೆ ಋತುವಿನಲ್ಲಿ ಕ್ವಿಂಟಲ್‌ಗೆ ಎಂಎಸ್‌ಪಿ 5,250 ರೂ ಇದ್ದಿದ್ದು ಕಳೆದ 10 ವರ್ಷಗಳಲ್ಲಿ ಶೇ.129 ರಷ್ಟು ಜಾಸ್ತಿ ಆಗಿದೆ. ಅದೇ ರೀತಿ ಉಂಡೆ ಕೊಬ್ಬರಿಯ ಬೆಲೆಯು ಕ್ವಿಂಟಲ್‌ಗೆ 5,500 ರೂ.ನಿಂದ 12,500 ರೂ.ಗೆ ಏರಿಕೆಯಾಗಿದ್ದು, ಶೇ.127 ರಷ್ಟು ಹೆಚ್ಚಳವಾಗಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications