• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿವಿಗಳಲ್ಲಿ 200 ಪಾಯಿಂಟ್ ರೋಸ್ಟರ್ ವ್ಯವಸ್ಥೆಗೆ ಕೇಂದ್ರದ ಒಪ್ಪಿಗೆ

|

ಬೆಂಗಳೂರು, ಮಾರ್ಚ್ 07 : ವಿಶ್ವವಿದ್ಯಾಲಯಗಳಲ್ಲಿ 200 ಪಾಯಿಂಟ್ ರೋಸ್ಟರ್ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದಕ್ಕಾಗಿ ಸುಗ್ರೀವಾಜ್ಞೆಯನ್ನು ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಗೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು, ಪ್ರಾಧ್ಯಪಕರಿಂದ ಹೇಳಿಬಂದಿದ್ದ ಬೇಡಿಕೆಯನ್ನು ಈಡೇರಿಸಲು ಒಪ್ಪಿಗೆ ನೀಡಲಾಯಿತು.

ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ನಿಯಮ ತಿದ್ದುಪಡಿಗೆ ಚಿಂತನೆ

ಈ ಹಿಂದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಶಿಕ್ಷಕರ ನೇರ ನೇಮಕಾತಿಗೆ ಹೊರಡಿಸಿದ್ದ ಯುಜಿಸಿ ಆದೇಶಕ್ಕೆ ಸರ್ಕಾರದಿಂದಲೇ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿ ಸಚಿವ ತಾವರ್ ಚಂದ್ ಗೆಹ್ಲೋಟ್ ಇದನ್ನು ವಿರೋಧಿಸಿ ಯುಜಿಸಿಗೆ ಪತ್ರ ಬರೆದಿದ್ದರು.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹಿಳೆರಿಗೆ ಶೇ 25ರಷ್ಟು ಮೀಸಲಾತಿ

ಯುಜಿಸಿ ಹೊರಡಿಸಿದ್ದ ನೇಮಕಾತಿ ಆದೇಶದಿಂದಾಗಿ ಮೀಸಲಾತಿ ಆದೇಶಕ್ಕೆ ಧಕ್ಕೆ ಬಂದಿದೆ ಎಂದು ಸಚಿವರು ದೂರಿದ್ದರು. ಈ ಮೀಸಲಾತಿ ಅನ್ವಯ ನೇಮಕಾತಿ ನಡೆದರೆ ಪ.ಜಾ/ಪ.ಪಂ/ಹಿಂದುಳಿದ ವರ್ಗಗಳ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಸಂಖ್ಯೆಯಲ್ಲಿ ಇಳಿಮುಖವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

ಹಿಂಸಾಚಾರಕ್ಕೆ ತಿರುಗಿದ ಗುಜ್ಜರ್ ಸಮುದಾಯದ ಪ್ರತಿಭಟನೆ, ಪೊಲೀಸರಿಗೆ ಕಲ್ಲು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಾಗ ಮೀಸಲಾತಿ ಅಧಿಸೂಚನೆಯನ್ನು ಸುಗ್ರೀವಾಜ್ಞೆ ಮೂಲಕ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. 200 ಪಾಯಿಂಟ್ ರೋಸ್ಟರ್ ವ್ಯವಸ್ಥೆ ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ.

English summary
The Union Cabinet approved an ordinance on the reservation mechanism for university teachers. Various students and teachers organizations had urged the government to bring an ordinance to restore the 200-point roster.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X