Breaking: ದೇಶದ ಮೂರು ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಕೇಂದ್ರದ ಅನುಮೋದನೆ
ನವದೆಹಲಿ ಸೆಪ್ಟೆಂಬರ್ 28: ನವದೆಹಲಿ, ಅಹಮದಾಬಾದ್ ಮತ್ತು ಮುಂಬೈ ಮೂರು ಪ್ರಮುಖ ರೈಲು ನಿಲ್ದಾಣಗಳ ಮರು-ಅಭಿವೃದ್ಧಿಗಾಗಿ ಭಾರತೀಯ ರೈಲ್ವೆಯ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಯೋಜನೆಯು ಸುಮಾರು 10,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಒಳಗೊಂಡಿರುತ್ತದೆ.
ದೆಹಲಿ, ಮುಂಬೈ ಮತ್ತು ಅಹಮದಾಬಾದ್ ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ 10,000 ಕೋಟಿ ರೂಪಾಯಿಗಳ ಹೂಡಿಕೆಗೆ ಸಂಪುಟ ಅನುಮೋದನೆ ನೀಡಿದೆ. PMGKAY ವಿಸ್ತರಣೆಗೆ 44,462 ಕೋಟಿ ವೆಚ್ಚವಾಗಲಿದೆ ಎಂದು ಅನುರಾಗ್ ಠಾಕೂರ್ ಹೇಳಿದರು.

ಜೊತೆಗೆ ಇಂದು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) 4% ಹೆಚ್ಚಿಸಲು ಕೇಂದ್ರ ಸಂಪುಟ ನಿರ್ಧರಿಸಿದೆ. ಮಾತ್ರವಲ್ಲದೆ PMGKAY (ಉಚಿತ ಪಡಿತರ) ಯೋಜನೆಯನ್ನು ಮುಂದಿನ 3 ತಿಂಗಳವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ನಿರ್ಧರಿಸಿದೆ.












Click it and Unblock the Notifications