ಎಲ್ಲಾ ಒಬಿಸಿ ಪ್ರಮಾಣ ಪತ್ರ ರದ್ದುಗೊಳಿಸಿದ ಕೋಲ್ಕತ್ತಾ ಹೈಕೋರ್ಟ್
ಕೋಲ್ಕತ್ತಾ, ಮೇ 22: ಕೋಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶವೊಂದರಲ್ಲಿ 2010ರ ಬಳಿಕ ನೀಡಲಾದ ಎಲ್ಲಾ ಒಬಿಸಿ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಿ ಆದೇಶಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋರ್ಟ್ ಆದೇಶ ಒಪ್ಪಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಇತರ ಹಿಂದುಳಿದ ಜಾತಿಗಳ (ಒಬಿಸಿ) ವರ್ಗಕ್ಕೆ ಪ್ರಮಾಣ ಪತ್ರ ನೀಡಿರುವುದನ್ನು ಪ್ರಶ್ನಿಸಿ ಕೋಲ್ಕತ್ತಾ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಟಿ. ಚಕ್ರಬರ್ತಿ ಮತ್ತು ರಾಜಶೇಖರ್ ಮಂಥಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಪ್ರಮಾಣ ಪತ್ರ ರದ್ದುಗೊಳಿಸಿ ಆದೇಶಿಸಿದೆ.

2010ರಲ್ಲಿ ಪಶ್ಚಿಮ ಬಂಗಾಳದ ಹಿಂದುಳಿದ ವರ್ಗಗಳ ಆಯೋಗ ತಯಾರು ಮಾಡಿರುವ ಒಬಿಸಿ ಪಟ್ಟಿ ಅಕ್ರಮ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ. ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಕಾಯ್ದೆ 1993ರ ಅನ್ವಯ ಹೊಸ ಒಬಿಸಿ ಪಟ್ಟಿಯನ್ನು ತಯಾರು ಮಾಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.
ಕೋರ್ಟ್ ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳು (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಹೊರತುಪಡಿಸಿ) (ಸೇವೆಗಳು ಮತ್ತು ಹುದ್ದೆಗಳಲ್ಲಿ ಖಾಲಿ ಹುದ್ದೆಗಳ ಮೀಸಲಾತಿ) ಕಾಯಿದೆ, 2012 ರ ಸೆಕ್ಷನ್ 2ಹೆಚ್, 5, 6 ಮತ್ತು ಸೆಕ್ಷನ್ 16, ಶೆಡ್ಯುಲ್ 1, 3 ಅಡಿಯಲ್ಲಿ ನೀಡಲಾದ ಮೀಸಲಾತಿ ಅಸಾಂವಿಧಾನಿಕ ಎಂದು ಹೇಳಿದೆ.
2011ರಲ್ಲಿ ಹೈಕೋರ್ಟ್‌ಗೆ ಸಲ್ಲಿಕೆ ಮಾಡಲಾದ ಪಿಐಎಲ್‌ನಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗ ಆಯೋಗ) ಕಾಯಿದೆಗೆ ವಿರುದ್ಧವಾಗಿದೆ. ವಾಸ್ತವವಾಗಿ ಹಿಂದುಳಿದ ವರ್ಗದವರಿಗೆ ಅವರ ಅರ್ಹ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ ಎಂದು ಆರೋಪಿಸಲಾಗಿತ್ತು.
ಕೋರ್ಟ್ ತೀರ್ಪಿನ ಬಳಿಕ ಮಾತನಾಡಿದ ವಕೀಲ ವಕೀಲ ಸುದೀಪ್ತ ದಾಸ್‌ಗುಪ್ತ, "2010 ಮತ್ತು 2024ರ ನಡುವೆ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಲಾಗಿದೆ. ಈ ಪ್ರಮಾಣಪತ್ರವನ್ನು ಹೊಂದಿರುವ ವ್ಯಕ್ತಿಗೆ ಒದಗಿಸಲಾದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆಯಬಹುದು" ಎಂದರು.
ಅಲ್ಲದೇ ಕೋರ್ಟ್ ತನ್ನ ಆದೇಶದಲ್ಲಿ ಒಬಿಸಿ ವರ್ಗದಲ್ಲಿ ಉದ್ಯೋಗ ಪಡೆದಿರುವ ಅಥವ ಆಯ್ಕೆಯಾದ ಅಭ್ಯರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಈ ತೀರ್ಪು ನಾಗರಿಕರ ಸೇವೆಗಳ ಮೇಲೆಯೂ ಪರಿಣಾಮವನ್ನು ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
2010ರ ಮೊದಲು 66 ವರ್ಗಗಳ ಒಬಿಸಿಗಳನ್ನು ವರ್ಗೀಕರಿಸುವ ರಾಜ್ಯ ಸರ್ಕಾರದ ಕಾರ್ಯನಿರ್ವಾಹಕ ಆದೇಶಗಳಿಗೆ ಸಂಬಂಧಿಸಿದಂತೆ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಪಿಐಎಲ್‌ಗಳಲ್ಲಿ ಅವುಗಳನ್ನು ಪ್ರಶ್ನಿಸಲಿಲ್ಲ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ: ಕೋಲ್ಕತ್ತಾ ಹೈಕೋರ್ಟ್‌ನ ಈ ತೀರ್ಪು ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಮತ್ತು ಬಿಜೆಪಿ ನಡುವಿನ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.
ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ಸರ್ಕಾರ ಈ ಆದೇಶವನ್ನು ಒಪ್ಪುವುದಿಲ್ಲ. ಪಶ್ಚಿಮ ಬಂಗಾಳ ಸರ್ಕಾರ ಜಾರಿಗೊಳಿಸಿರುವ ಒಬಿಸಿ ಕೋಟಾ ಮುಂದುವರೆಯಲಿದೆ" ಎಂದು ಹೇಳಿದ್ದಾರೆ.
"ಮನೆ-ಮನೆ ಸಮೀಕ್ಷೆಯನ್ನು ನಡೆಸಿ ಮಸೂದೆ ರಚನೆ ಮಾಡಿ ಅದನ್ನು ಸಚಿವ ಸಂಪುಟ, ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. ಇದು ಬಿಜೆಪಿಯ ಪಿತೂರಿಯಾಗಿದ್ದು, ಮಮತಾ ಸರ್ಕಾರದ ಅಡಿಯಲ್ಲಿ ನೀಡಲಾದ ಎಲ್ಲಾ ಒಬಿಸಿ ಪ್ರಮಾಣ ಪತ್ರಗಳು ಪರಿಣಾಕಾರಿಯಾಗಿಯೇ ಮುಂದುವರೆಯುತ್ತವೆ" ಎಂದು ತಿಳಿಸಿದ್ದದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications