ಲೋಕಸಭಾ ಚುನಾವಣೆ : ಅಂತಿಮ ಹಂತದ ಪ್ರಚಾರಕ್ಕೆ ತೆರೆ

ಬೆಂಗಳೂರು, ಮೇ 17 : 2019ರ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಮೇ 19ರ ಭಾನುವಾರ 59 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಮೂಲಕ 17ನೇ ಲೋಕಸಭಾ ಚುನಾವಣೆಗೆ ಮತದಾನ ಅಂತ್ಯಗೊಳ್ಳಲಿದೆ.

ಶುಕ್ರವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಅಭ್ಯರ್ಥಿಗಳು ಮನೆ-ಮನೆ ಪ್ರಚಾರವನ್ನು ಶನಿವಾರ ನಡೆಸಬಹುದಾಗಿದೆ. ಒಟ್ಟು 7 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಅಂತಿಮ ಹಂತದ ಮತದಾನ ಭಾನುವಾರ ನಡೆಯಲಿದೆ.

ಏಪ್ರಿಲ್ 11ರಂದು ದೇಶದಲ್ಲಿ ಮೊದಲ ಹಂತದ ಮತದಾನ ನಡೆದಿತ್ತು. ಮೇ 19ರಂದು ಅಂತಿಮ ಹಂತದ ಮತದಾನ ನಡೆಯುತ್ತಿದೆ. ಭಾನುವಾರ ಸಂಜೆ ವಿವಿಧ ವಾಹಿನಿಗಳು ಎಕ್ಸಿಟ್ ಪೋಲ್ ಫಲಿತಾಂಶವನ್ನು ಪ್ರಕಟಿಸಲಿದ್ದು, ಜನರು ಕುತೂಹಲದಿಂದ ಕಾಯುತ್ತಿದ್ದಾರೆ.

ಏಪ್ರಿಲ್ 11, ಏಪ್ರಿಲ್ 18, ಏಪ್ರಿಲ್ 23, ಏಪ್ರಿಲ್ 29, ಮೇ 6, ಮೇ 12 ರಂದು ಒಟ್ಟು 6 ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆದಿತ್ತು. ಮೇ 23ರಂದು ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯಲಿದೆ.

ಮೇ 19ರಂದು ಮತದಾನ

ಮೇ 19ರಂದು ಮತದಾನ

ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮೇ 19ರಂದು ನಡೆಯಲಿದೆ. 8 ರಾಜ್ಯಗಳ 59 ಕ್ಷೇತ್ರಗಳಲ್ಲಿ ಭಾನುವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಮತದಾನ ಅಂತ್ಯಗೊಳ್ಳಲಿದೆ.

ಯಾವ-ಯಾವ ರಾಜ್ಯದಲ್ಲಿ ಮತದಾನ

ಯಾವ-ಯಾವ ರಾಜ್ಯದಲ್ಲಿ ಮತದಾನ

ಭಾನುವಾರ ಬಿಹಾರದ 8, ಜಾರ್ಖಂಡ್‌ನ 3, ಮಧ್ಯಪ್ರದೇಶದ 8, ಪಂಜಾಬ್‌ನ 13, ಪಶ್ಚಿಮ ಬಂಗಾಳದ 9, ಚಂಡೀಗಢ್‌ನ 1, ಉತ್ತರ ಪ್ರದೇಶದ 13, ಹಿಮಾಚಲ ಪ್ರದೇಶದ 4 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ಬಿಗಿ ಪೊಲೀಸ್ ಭದ್ರತೆ

ಪಶ್ಚಿಮ ಬಂಗಾಳದಲ್ಲಿ ಬಿಗಿ ಪೊಲೀಸ್ ಭದ್ರತೆ

ಮೇ 14ರಂದು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಚಾರದ ಸಂದರ್ಭದಲ್ಲಿ ಹಿಂಸಾಚಾರ ನಡೆದಿತ್ತು. ಆದ್ದರಿಂದ, ಮೇ 16ರಂದೇ ಬಹಿರಂಗ ಪ್ರಚಾರವನ್ನು ಅಂತ್ಯಗೊಳಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿತ್ತು.

ಕರ್ನಾಟಕದಲ್ಲಿ ಉಪ ಚುನಾವಣೆ

ಕರ್ನಾಟಕದಲ್ಲಿ ಉಪ ಚುನಾವಣೆ

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆದಿದೆ. ಮೇ 19ರಂದು ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+