ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್: ಮೊದಲ ಹಂತದ ಚುನಾವಣಾ ಪ್ರಚಾರ ಅಂತ್ಯ, ಮತದಾನಕ್ಕೆ ಕ್ಷಣಗಣನೆ

By Sachhidananda Acharya
|
Google Oneindia Kannada News

ಅಹಮದಾಬಾದ್, ಡಿಸೆಂಬರ್ 7: ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಡಿಸೆಂಬರ್ 9ರಂಡು ನಡೆಯಲಿದ್ದು 48 ಗಂಟೆಗಳಿಗೂ ಮೊದಲು ಅಂದರೆ ಇಂದು ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.

ಗುಜರಾತ್: 2ನೇ ಹಂತದ ಚುನಾವಣೆಯಲ್ಲಿ 101 ಕ್ರಿಮಿನಲ್ ಗಳುಗುಜರಾತ್: 2ನೇ ಹಂತದ ಚುನಾವಣೆಯಲ್ಲಿ 101 ಕ್ರಿಮಿನಲ್ ಗಳು

ನಾಳೆ ಮನೆ ಮನೆ ಪ್ರಚಾರ ಮಾತ್ರ ನಡೆಸಬಹುದಾಗಿದೆ. 182 ವಿಧಾನಸಭೆ ಸ್ಥಾನಗಳಲ್ಲಿ 89 ಸ್ಥಾನಗಳಿಗೆ ಡಿಸೆಂಬರ್ 9ರಂದು ಚುನಾವಣೆ ನಡೆಯಲಿದೆ. ಪ್ರಮುಖವಾಗಿ ರಾಜ್ ಕೋಟ್, ಜುನಾಗಢ, ಅಮ್ರೆಲಿ, ಮೊರ್ಬಿ, ಕಚ್ಛ್, ಸುರೇಂದ್ರನಗರ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

Campaigning for first phase of Gujarat polls ends today

89 ಕ್ಷೇತ್ರಗಳಲ್ಲಿ 977 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇವರಲ್ಲಿ 57 ಮಹಿಳೆಯರು ಸೇರಿದ್ದಾರೆ. ಒಟ್ಟು 50 ರಾಜಕೀಯ ಪಕ್ಷಗಳು ಅದೃಷ್ಟ ಪರೀಕ್ಷೆಗೆ ಇಳಿದಿವೆ.

ಮೊದಲ ಹಂತದ ಮತದಾನ 24,689 ಮತಗಟ್ಟೆಗಳಲ್ಲಿ ನಡೆಯಲಿದೆ. ಮತದಾನಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮುಗಿಸಿ ಚುನಾವಣಾ ಆಯೋಗ ಸಜ್ಜಾಗಿದೆ.

ಮೊದಲ ಹಂತದ ಚುನಾವಣೆ ನಡೆಯಲಿರುವ ಕ್ಷೇತ್ರಗಳ್ಲಲಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭರ್ಜರಿ ಪ್ರಚಾರಗಳನ್ನು ನಡೆಸಿದ್ದಾರೆ. ಹೀಗಾಗಿ ಮತದಾರರು ಈ ಬಾರಿ ಯಾರಿಗೆ ಮತ ಚಲಾಯಿಸಲಿದ್ದಾರೆ ಎಂಬುದು ಕುತೂಹಲ ಹುಟ್ಟಿಸಿದೆ.

ಡಿಸೆಂಬರ್ 14ರಂದು 93 ಸ್ಥಾನಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಇಡೀ ದೇಶವೇ ಕಾತರದಿಂದ ಕಾಯುತ್ತಿರುವ ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಡಿಸೆಂಬರ್ 18ರಂದು ಹೊರ ಬೀಳಲಿದೆ.

English summary
Campaigning for the first phase of Gujarat polls ends on Thursday. First face election in Gujarat to be held on December 9.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X