ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಡಿ ದಾಟಿ ದಾಳಿ ನಡೆಸಲು ಹಿಂಜರಿಯಲ್ಲ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಜನವರಿ 22: ಗಡಿ ನಿಯಂತ್ರಣ ರೇಖೆಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತ ತೀಕ್ಷ್ಣ ಎಚ್ಚರಿಕೆ ನೀಡಿದೆ.

ಅಗತ್ಯ ಬಿದ್ದರೆ ಭಾರತ ವೈರಿಗಳ ವಿರುದ್ಧ ತನ್ನ ನೆಲದಲ್ಲಿ ಮಾತ್ರವಲ್ಲ ವಿದೇಶದ ನೆಲದಲ್ಲೂ ದಾಳಿ ನಡೆಸಲು ಹಿಂಜರಿಯುವುದಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಸೇನೆ ಪ್ರತಿದಾಳಿಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ, ಸೇನೆ ಪ್ರತಿದಾಳಿ

"ಪಾಕಿಸ್ತಾನದ ಜತೆ ಸ್ನೇಹ ಇಟ್ಟುಕೊಳ್ಳಲು ಭಾರತ ಇಚ್ಛಿಸಿದೆ. ಆದರೆ ಪಾಕಿಸ್ತಾನಕ್ಕೆ ಅದು ಬೇಕಾಗಿಲ್ಲ," ಎಂದು ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Can attack enemies on foreign soil, Rajnath Singh warns

"ಇದೇ ವೇಳೆ ಅವರು ನಮ್ಮ ಸರಕಾರ ಭಾರತ ತಲೆ ಬಾಗಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯನ್ನು ನೀಡುತ್ತೇನೆ," ಎಂದಿದ್ದಾರೆ.

ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕತೆ ವೇಗವಾಗಿ ಅಭಿವೃದ್ಧಿ ಸಾಧಿಸುತ್ತಿದೆ. "ಇದನ್ನು ಈಗ ಜಾಗತಿಕ ಆರ್ಥಿಕ ತಜ್ಞರು ಕೂಡ ಒಪ್ಪಿಕೊಂಡಿದ್ದಾರೆ," ಎಂದು ಅಭಿಪ್ರಾಯಪಟ್ಟಿದ್ದಾರೆ.

ಏತನ್ಮಧ್ಯೆ ದೇಶದ ಪ್ರತಿಷ್ಠೆಯೂ ವಿಶ್ವಮಟ್ಟದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.

English summary
India can attack enemies not only on its soil, but also on foreign territory if the need be, Union Home Minister, Rajnath Singh said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X