ಖಲಿಸ್ತಾನಿ ಉಗ್ರ ನಿಜ್ಜರ್ ವಿಚಾರದಲ್ಲಿ ಮತ್ತೆ ಶುರುವಾಗುತ್ತಾ ಕಿರಿಕ್?
ಭಾರತ ಮತ್ತು ಕೆನಡಾ ಸಂಬಂಧ ಹಾಳಾಗಿ ಹೋಗಿದ್ದು, ಐತಿಹಾಸಿಕ ಮಟ್ಟಕ್ಕೆ ಹಿನ್ನಡೆಯ ಕಂಡಿದೆ. ಹರ್ದೀಪ್ ಸಿಂಗ್ ನಿಜ್ಜರ್ ವಿಚಾರಕ್ಕೆ ಶುರುವಾದ ಜಗಳ ಜಾಗತಿಕ ಮಟ್ಟದಲ್ಲಿ ಕೂಡ, ದೊಡ್ಡ ಮಟ್ಟಿಗಿನ ಸದ್ದು ಮಾಡುತ್ತಿದೆ. ಈ ವಾತಾವರಣದಲ್ಲಿ ಮತ್ತೊಮ್ಮೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರ ಮುನ್ನೆಲೆಗೆ ಬಂದಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡವಾಗಿದೆ. ಹಾಗಾದ್ರೆ ಏನಿದೆ ನಿಜ್ಜರ್ ಕೇಸ್ ಅಪ್‌ಡೇಟ್? ಬನ್ನಿ ತಿಳಿಯೋಣ.
ಸಿಖ್ ಪ್ರತ್ಯೇಕತಾವಾದಿ ಉಗ್ರ ಸಂಘಟನೆಯ ಮುಖಂಡ, ಹರ್ದೀಪ್ ನಿಜ್ಜರ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಹತ್ಯೆ ಆಗಿದ್ದ ನಿಜ್ಜರ್ ಪ್ರಕರಣ ಸಂಬಂಧ, ನಿಜ್ಜರ್ ಮೇಲೆ ಗುಂಡು ಹಾರಿಸಿದ್ದ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲು ಕೆನಡಾ ಪೊಲೀಸರು ಮುಂದಾಗಿದ್ದಾರೆ ಅಂತಾ ಹೇಳಲಾಗಿದೆ. ಈ ಶಂಕಿತರ ಮೇಲೆ ಕೆನಡಾದ ಪೊಲೀಸರು ಕಣ್ಣಿಟ್ಟಿದ್ದು ಕೆಲ ದಿನಗಳಲ್ಲಿ ಅವರನ್ನ ಅರೆಸ್ಟ್ ಮಾಡುವ ನಿರೀಕ್ಷೆ ಇದೆ ಎಂದು ಕೆನಡಾ ಮೂಲದ ಮಾಧ್ಯಮ ವರದಿ ಮಾಡಿದೆ.

ಕೆನಡಾ & ಭಾರತ ನಡುವೆ ಮತ್ತೆ ಕಿರಿಕ್?
ಹೌದು, ಕೆನಡಾದ ಪ್ರತಿಷ್ಠಿತ ಮಾಧ್ಯಮ ಪೈಕಿ ಒಂದು ಎನ್ನಲಾಗುವ 'ಗ್ಲೋಬ್ & ಮೈಲ್' ಈ ಬಗ್ಗೆ ರಿಪೋರ್ಟ್ ಮಾಡಿದೆ. ನಿಜ್ಜರ್ ಹತ್ಯೆ ಬಳಿಕ ಈ ಶಂಕಿತ ಆರೋಪಿಗಳು ಕೆನಡಾ ಬಿಟ್ಟು ಹೋಗಿಲ್ಲ. ಹಲವು ತಿಂಗಳಿನಿಂದ ಪೊಲೀಸರು ಅವರ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಶೀಘ್ರ ಅವರನ್ನು ಅರೆಸ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮತ್ತೊಂದು ಕಡೆ ಭಾರತವು 2020ರಲ್ಲಿ ನಿಜ್ಜರ್‌ನ ಉಗ್ರ ಎಂದು ಘೋಷಿಸಿದ್ದು, ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರ ಇದೆ ಎಂದು ಕೆನಡಾ ಗಂಭೀರ ಆರೋಪ ಮಾಡಿತ್ತು. ಭಾರತ ಕೂಡ ಕೆನಡಾ ಆರೋಪಕ್ಕೆ ಪಕ್ಕಾ ತಿರುಗೇಟು ನೀಡಿತ್ತು.
ಯಾವಾಗ ಕೊಲೆಯಾಗಿದ್ದ ನಿಜ್ಜರ್?
ಭಾರತದ ಮೋಸ್ಟ್ ವಾಟೆಂಡ್ ಉಗ್ರ & ಖಲಿಸ್ತಾನಿ ಗ್ಯಾಂಗ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ನ 2023ರ ಜೂನ್ 18ರಂದು ಕೆನಡಾದ ಸರ್ರೆಯಲ್ಲಿ ಗುಂಡಿಟ್ಟು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಹಿಂಸಾಚಾರ & ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಹೀಗೆ ಕೊಲೆಯಾಗಿದ್ದ ನಿಜ್ಜರ್ ವಿರುದ್ಧ ಇತ್ತು. ಆದರೆ ಈ ಕೊಲೆಯನ್ನು ಭಾರತದ ಏಜೆಂಟ್‌ಗಳು ಮಾಡಿದ್ದಾರೆ ಎನ್ನುತ್ತಿದ್ದಾರೆ ಕೆನಡಾ ಪ್ರಧಾನಿ. ಹೀಗಾಗಿ ಸೂಕ್ತ ಸಾಕ್ಷ್ಯವೇ ಇಲ್ಲದೆ ಇಂಥ ಆರೋಪ ಸರಿಯಲ್ಲ ಎಂದು ಭಾರತ ಕೂಡ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿತ್ತು. ಇಷ್ಟೆಲ್ಲದರ ಮಧ್ಯೆ ಕೆನಡಾ & ಭಾರತ ನಡುವೆ ಸಂಬಂಧ ಸಂಪೂರ್ಣ ಹಳಸಿತ್ತು. ಹೀಗಿದ್ದಾಗಲೇ ಹೊಸ ಸುದ್ದಿ ಹೊರಬಿದ್ದಿದೆ.

ಪಾಶ್ಚಿಮಾತ್ಯ ದೇಶಗಳ ಬೆಂಬಲ?
ಕೆನಡಾ ಮತ್ತು ಭಾರತದ ನಡುವೆ ನಡೆಯುತ್ತಿರುವ ತಿಕ್ಕಾಟ ಎಲ್ಲೆಲ್ಲಿಗೋ ಹೋಗಿ ಮುಟ್ಟುತ್ತಿದೆ. ಅದರಲ್ಲೂ ಅಂತಾರಾಷ್ಟ್ರೀಯ ಮಟ್ಟದಲ್ಲೂ ಈ ವಿಚಾರ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅಮೆರಿಕ, ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ದೇಶಗಳು ಪರೋಕ್ಷವಾಗಿ ಕೆನಡಾದ ಪರ ನಿಂತಿರುವುದು ಉರಿಯುವ ಬೆಂಕಿಗೆ ಪೆಟ್ರೋಲ್ ಸುರಿದಿದೆ. ಭಾರತ ಕೂಡ ಬೆಳವಣಿಗೆ ಬಗ್ಗೆ ಸೂಕ್ಷ್ಮವಾಗಿ ಅಧ್ಯಯನ ನಡೆಸುತ್ತಿದ್ದು, ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುತ್ತಿದೆ. ರಷ್ಯಾ & ಉಕ್ರೇನ್ ಸೇರಿದಂತೆ ಇಸ್ರೇಲ್ & ಹಮಾಸ್ ನಡುವೆ ಯುದ್ಧ ನಡೆಯುವಾಗ ಈ ಬೆಳವಣಿಗೆಗಳು ಸಾಕಷ್ಟು ಗಮನ ಸೆಳೆದಿವೆ.
ಒಟ್ನಲ್ಲಿ ಖಲಿಸ್ತಾನಿಗಳ ಕಾಟ ಹೆಚ್ಚಾಗುತ್ತಿರುವ ಸಮಯದಲ್ಲೇ ನಿಜ್ಜರ್ ಕೇಸ್ ಸಂಬಂಧ ಇದೀಗ ಹೊಸ ವಿಚಾರ ರಿವೀಲ್ ಆಗಿದೆ. ಅನುಮಾನ ಬಂದವರ ಮೇಲೆ ನಾವು ನಿಗಾ ಇಟ್ಟಿದ್ದೀವಿ, ಅವರನ್ನು ಶೀಘ್ರ ಬಂಧಿಸುತ್ತೇವೆ ಎಂಬ ಸೂಚನೆಯನ್ನ ಕೆನಡಾ ನೀಡಿದೆ. ಹೀಗಾಗಿ ನಿಜ್ಜರ್ ಪ್ರಕರಣ ಮುಂದೆ ಎಲ್ಲಿಗೆ ಬಂದು ನಿಲ್ಲುತ್ತೆ? ಅಂತಾ ಕಾದು ನೋಡಬೇಕಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications