ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಲಸಿಕೆ ಕಳಿಸಿಕೊಡಿ: ಮೋದಿಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಮನವಿ

|
Google Oneindia Kannada News

ನವದೆಹಲಿ, ಫೆಬ್ರವರಿ 10: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಕರೆ ಮಾಡಿ ಮಾತನಾಡಿದರು. ಈ ಮೂಲಕ ಕಳೆದ ಕೆಲವು ವಾರಗಳಿಂದ ರೈತರ ಪ್ರತಿಭಟನೆ ವಿಚಾರವಾಗಿ ಉಭಯ ದೇಶಗಳ ನಡುವಿನ ಸಂಬಂಧ ಹಳಸುತ್ತಿದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಟ್ರುಡೋ ಅವರು ಭಾರತದಿಂದ ಕೋವಿಡ್-19 ಲಸಿಕೆಗಳ ಅಗತ್ಯದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದರು ಎಂದು ಪ್ರಧಾನಿ ಕಚೇರಿ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ ತಿಳಿಸಿದೆ.

'ಈಗಾಗಲೇ ಇತರೆ ದೇಶಗಳಿಗೆ ಮಾಡಿರುವಂತೆಯೇ ಕೆನಡಾದ ಲಸಿಕೆ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಶಕ್ತಿಮೀರಿ ಪ್ರಯತ್ನಿಸಲಿದೆ ಎಂದು ಪ್ರಧಾನ ಮಂತ್ರಿಯವರು ಕೆನಡಾದ ಪ್ರಧಾನಿಗೆ ಭರವಸೆ ನೀಡಿದ್ದಾರೆ' ಎಂದು ಹೇಳಿಕೆ ವಿವರಿಸಿದೆ.

ಕೆನಡಾ ಪ್ರಧಾನಿಗೆ ಧನ್ಯವಾದ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, 'ನನ್ನ ಸ್ನೇಹಿತ ಜಸ್ಟಿನ್ ಟ್ರುಡೋ ಅವರಿಂದ ಕರೆ ಸ್ವೀಕರಿಸಲು ಸಂತೋಷವಾಗಿದೆ. ಕೆನಡಾ ಕೇಳಿರುವಷ್ಟು ಕೋವಿಡ್ ಲಸಿಕೆಗಳನ್ನು ಪೂರೈಸಲು ಭಾರತ ತನ್ನ ಕೈಲಾದ ಪ್ರಯತ್ನ ಮಾಡಲಿದೆ ಎಂದು ಭರವಸೆ ನೀಡಿದ್ದೇನೆ' ಎಂದಿದ್ದಾರೆ.

Canada PM Justin Trudeau Calls PM Narendra Modi For Supply Of Covid Vaccines

'ಜತೆಗೆ ಹವಾಮಾನ ಬದಲಾವಣೆ ಮತ್ತು ಜಾಗತಿಕ ಆರ್ಥಿಕ ಚೇತರಿಕೆಯಂತಹ ಇತರೆ ಪ್ರಮುಖ ವಿಚಾರಗಳಲ್ಲಿ ಸಹಭಾಗಿತ್ವ ಮುಂದುವರಿಸಲು ನಾವು ಒಪ್ಪಿಕೊಂಡಿದ್ದೇವೆ' ಎಂದು ಮೋದಿ ತಿಳಿಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಜಸ್ಟಿನ್ ಟ್ರುಡೋ ಟ್ವೀಟ್ ಮಾಡಿದ್ದು, ವಿವಾದ ಸೃಷ್ಟಿಸಿತ್ತು. ಕೆನಡಾದ ಕೆಲವು ಸಂಸದರು ಕೂಡ ಪ್ರತಿಭಟನೆಯನ್ನು ಬೆಂಬಲಿಸಿದ್ದರು. ಇದರಿಂದ ಉಭಯ ದೇಶಗಳ ಸಂಬಂಧ ಹದಗೆಡಲಿದೆ ಎಂಬ ಚರ್ಚೆ ನಡೆದಿತ್ತು.

English summary
Canada PM Justin Trudeau called PM Narendra Modi requesting for supply of Covid vaccines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X