ಗೋಹತ್ಯೆ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂಕೋರ್ಟ್

Posted By:
Subscribe to Oneindia Kannada

ನವದೆಹಲಿ, ಜನವರಿ 27: ಗೋಹತ್ಯೆ ಸಂಪೂರ್ಣ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟಿನಲ್ಲಿ ಶುಕ್ರವಾರ(ಜನವರಿ 27)ದಂದು ವಜಾಗೊಂಡಿದೆ.

ಎಲ್ಲಾ ರಾಜ್ಯಗಳಲ್ಲೂ ಗೋಹತ್ಯೆ ನಿಷೇಧ ಕೋರಿ ಪಿಐಎಲ್ ಸಲ್ಲಿಸಲಾಗಿತ್ತು. ಆದರೆ, ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.[ಬಿಜೆಪಿಯ ಗೋಹತ್ಯೆ ನಿಷೇಧ ವಿಧೇಯಕ ರದ್ದು]

Cant ban cow slaughter in every state:SC

ಭಾರತದ ಅನೇಕ ರಾಜ್ಯಗಳಲ್ಲಿ ಅಕ್ರಮ ಗೋವುಗಳ ಸಾಗಾಟ, ಮಾರಾಟ, ಹತ್ಯೆ ನಡೆಯುತ್ತಲೇ ಇದೆ. ಈ ಬಗ್ಗೆ ರಾಜ್ಯ ಸರ್ಕಾರಗಳು ಯಾವುದೇ ಸಮರ್ಥ ಕಾನೂನು ರೂಪಿಸಿಲ್ಲ. ಗೋ ಹತ್ಯೆ ನಿಷೇಧ ಹೇರಿಕೆಗೆ ಕಾನೂನು ರೂಪಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸುವಂತೆ ಕೋರಿ ಸುಪ್ರೀಂಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು.[ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿ]

ಒಂದು ಅರ್ಜಿಯ ವಿಚಾರಣೆ ಮೂಲಕ ತ್ವರಿತವಾಗಿ ಈ ಬಗ್ಗೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಲು ಸಾಧ್ಯವಿಲ್ಲ. ಅಂತಾರಾಜ್ಯ ಅಕ್ರಮ ದನ ಸಾಗಾಟದ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಈಗಾಗಲೇ ಎಲ್ಲಾ ರಾಜ್ಯಗಳಿಗೆ ಆದೇಶ ನೀಡಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.[ಕರ್ನಾಟಕ: ಗೋಹತ್ಯೆ ನಿಷೇಧ ವಿಧೇಯಕದಲ್ಲಿ ಏನಿದೆ]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Supreme Court on Friday rejected a petition that sought a ban on cow slaughter in every state. While rejecting the petition the court said that it cannot order states to enact laws banning cow slaughter.
Please Wait while comments are loading...