• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಯಾಪ್ಟನ್ ಅಮರಿಂದರ್ ಸಿಂಗ್ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ?

|
Google Oneindia Kannada News

ನವದೆಹಲಿ, ಜುಲೈ 03; ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಎನ್‌ಡಿಎಯಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಹಲವಾರು ನಾಯಕರ ಹೆಸರು ಅಭ್ಯರ್ಥಿ ರೇಸ್‌ನಲ್ಲಿ ಕೇಳಿ ಬರುತ್ತಿದೆ.

ಎರಡು ಬಾರಿ ಪಂಬಾಜ್ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷ ತೊರೆದು ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್‌ಸಿ) ಪಕ್ಷವನ್ನು ಸ್ಥಾಪನೆ ಮಾಡಿದ್ದರು. 2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರು.

ಆಗಸ್ಟ್ 6ಕ್ಕೆ ಉಪ ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ಆಗಸ್ಟ್ 6ಕ್ಕೆ ಉಪ ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ

80 ವರ್ಷದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಅವರ ಕಚೇರಿ ಹೇಳಿದೆ. ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗಾಗಿ ಅವರು ಸದ್ಯ ಲಂಡನ್‌ನಲ್ಲಿದ್ದಾರೆ.

Amarinder Singh: ಪಟಿಯಾಲದಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಹೀನಾಯ ಸೋಲುAmarinder Singh: ಪಟಿಯಾಲದಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಹೀನಾಯ ಸೋಲು

ಭಾನುವಾರ ಕ್ಯಾಪ್ಟನ್ ಅಮರಿಂದರ್ ಸಿಂಗ್‌ಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ಉಪರಾಷ್ಟ್ರಪತಿ ಚುನಾವಣೆ ಬಗ್ಗೆ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಜುಲೈ 19 ಕೊನೆಯ ದಿನವಾಗಿದೆ.

ಪಂಜಾಬ್ ಸಿಎಂ ಸ್ಥಾನದಿಂದ ಅಮರಿಂದರ್ ಸಿಂಗ್ ರನ್ನು ತೆಗೆದಿದ್ದು ಏಕೆ?: ರಾಹುಲ್ ಗಾಂಧಿ ಬಿಚ್ಚಿಟ್ಟ ಗುಟ್ಟುಪಂಜಾಬ್ ಸಿಎಂ ಸ್ಥಾನದಿಂದ ಅಮರಿಂದರ್ ಸಿಂಗ್ ರನ್ನು ತೆಗೆದಿದ್ದು ಏಕೆ?: ರಾಹುಲ್ ಗಾಂಧಿ ಬಿಚ್ಚಿಟ್ಟ ಗುಟ್ಟು

ಎನ್‌ಡಿಎ ಪ್ರಸ್ತುತ ಉಪರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅವರಿಗೆ ಮತ್ತೊಂದು ಅವಧಿಗೆ ಅವಕಾಶ ನೀಡಲಿದೆ ಎಂಬ ಸುದ್ದಿಯೂ ಇದೆ. ಆದರೆ ವೆಂಕಯ್ಯ ನಾಯ್ಡು ಅವರೇ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂಬ ಸುದ್ದಿಗಳೂ ಇವೆ.

ಬಿಜೆಪಿಯೊಂದಿಗೆ ಪಕ್ಷ ವಿಲೀನ

ಬಿಜೆಪಿಯೊಂದಿಗೆ ಪಕ್ಷ ವಿಲೀನ

ಪಂಬಾಜ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಪಂಜಾಬ್ ಲೋಕ ಕಾಂಗ್ರೆಸ್ (ಪಿಎಲ್‌ಸಿ) ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸುವ ಸಾಧ್ಯತೆ ಇದೆ. ಪಕ್ಷವನ್ನು ವಿಲೀನಗೊಳಿಸುವ ಕುರಿತು ಅವರು ಪಕ್ಷದ ನಾಯಕರ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಲಂಡನ್‌ನಿಂದ ವಾಪಸ್ ಆದ ಬಳಿಕ ಈ ಕುರಿತ ಪ್ರಕ್ರಿಯೆಗಳಿಗೆ ಅವರು ಚಾಲನೆ ನೀಡಲಿದ್ದಾರೆ ಎಂಬ ಮಾಹಿತಿ ಇದೆ.

ಸಿಎಂಸ್ಥಾನಕ್ಕೆ ರಾಜೀನಾಮೆ

ಸಿಎಂಸ್ಥಾನಕ್ಕೆ ರಾಜೀನಾಮೆ

ಪಂಬಾಜ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ಗೆ ಸೂಚನೆ ನೀಡಿತ್ತು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದರು, ಪಕ್ಷ ತೊರೆದಿದ್ದರು. ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷ ಸ್ಥಾಪನೆ ಮಾಡಿ 2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ (ಸಂಯುಕ್) ಜೊತೆ ಮೈತ್ರಿ ಮಾಡಿಕೊಂಡಿದ್ದರು. ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿತ್ತು.

ಆಗಸ್ಟ್ 6ರಂದು ಚುನಾವಣೆ

ಆಗಸ್ಟ್ 6ರಂದು ಚುನಾವಣೆ

ಪ್ರಸ್ತುತ ಉಪರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅವಧಿ ಆಗಸ್ಟ್ 10ರಂದು ಮುಕ್ತಾಯಗೊಳ್ಳಲಿದೆ. ಆದ್ದರಿಂದ ನೂತನ ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದೆ. ಆಗಸ್ಟ್ 6ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಜುಲೈ 19 ಕೊನೆಯ ದಿನವಾಗಿದೆ. ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ ಜುಲೈ 12ರಂದು ಭಾರತಕ್ಕೆ ವಾಪಸ್ ಆಗಲಿದ್ದಾರೆ.

ಗೆಲುವು ಅತ್ಯಂತ ಸುಲಭ

ಗೆಲುವು ಅತ್ಯಂತ ಸುಲಭ

ಉಪರಾಷ್ಟ್ರಪತಿಯಾಗುವವರು ರಾಜ್ಯಸಭೆ ಸಭಾಪತಿಯಾಗಿಯೂ ಕೆಲಸ ಮಾಡಲಿದ್ದಾರೆ. ಉಪರಾಷ್ಟ್ರಪತಿ ಆಯ್ಕೆಗೆ ಲೋಕಸಭೆ, ರಾಜ್ಯಸಭೆ ಸದಸ್ಯರು ಮಾತ್ರ ಮತದಾನ ಮಾಡಲಿದ್ದಾರೆ. ಲೋಕಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿದೆ. ಆದ್ದರಿಂದ ಎನ್‌ಡಿಎ ಅಭ್ಯರ್ಥಿಯಾಗಿ ಯಾರನ್ನೇ ಆಯ್ಕೆ ಮಾಡಿದರೂ ಗೆಲುವು ಸಾಧಿಸುವುದು ಸುಲಭವಾಗಿದೆ. ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ ಉಪರಾಷ್ಟ್ರಪತಿಯಾಗಲಿದ್ದಾರೆಯೇ? ಕಾದು ನೋಡಬೇಕಿದೆ.

Recommended Video

  Jasprit Bumrah ಮಾಡಿದ ವಿಶ್ವ ದಾಖಲೆಗೆ Sachin Tendulkar ಶಾಕ್!! | *Cricket | OneIndia Kannada
  ಹಲವು ಹೆಸರು ಕೇಳಿ ಬರುತ್ತಿದೆ

  ಹಲವು ಹೆಸರು ಕೇಳಿ ಬರುತ್ತಿದೆ

  ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ ಮಾತ್ರವಲ್ಲ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ಮುಖ್ತಾರ್ ಅಬ್ಬಾಸ್ ನಕ್ವಿ ಹೆಸರು ಸಹ ಕೇಳಿ ಬರುತ್ತಿದೆ. ಬಿಜೆಪಿ ಯಾರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಿದೆ ಎನ್ನುವುದು ನಿಗೂಢವಾಗಿದೆ.

  English summary
  NDA may name former Punjab Chief Minister Capt Amarinder Singh as its candidate for the Vice President's post. Election will be held on August 6th.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X