Breaking News: ಬಿಜೆಪಿ ಸೇರಿದ ಕ್ಯಾಪ್ಟನ್ ಅಮರಿಂದರ್ ಸಿಂಗ್
ನವದೆಹಲಿ, ಸೆಪ್ಟೆಂಬರ್ 19: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಹಠಾತ್ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಂಡ ನಂತರ, ಕಾಂಗ್ರೆಸ್ ತೊರೆದ ಸುಮಾರು ಒಂದು ವರ್ಷದ ನಂತರ ಇಂದು ಬಿಜೆಪಿಗೆ ಸೇರಿದ್ದಾರೆ.
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಅಮರಿಂದರ್ ಸಿಂಗ್ ಅವರನ್ನು ಬಿಜೆಪಿಗೆ ಸ್ವಾಗತಿಸಿದರು. ಇದಕ್ಕೂ ಮುನ್ನ ಅವರು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. 80 ವರ್ಷದ ಅಮರಿಂದರ್ ಸಿಂಗ್ ಅವರು ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದರು. ಐದು ದಶಕಗಳ ತಮ್ಮ ಪಕ್ಷವಾದ ಕಾಂಗ್ರೆಸ್‌ನಿಂದ ಹೊರಬಂದ ಕೆಲವೇ ದಿನಗಳಲ್ಲಿ ಅವರು ಕಳೆದ ವರ್ಷ ಪಕ್ಷವನ್ನು ಸ್ಥಾಪಿಸಿದ್ದರು.

ಅಮರಿಂದರ್ ಸಿಂಗ್ ಅವರೊಂದಿಗೆ ಏಳು ಮಾಜಿ ಶಾಸಕರು ಮತ್ತು ಒಬ್ಬ ಮಾಜಿ ಸಂಸದ ಬಿಜೆಪಿ ಸೇರಿದರು.ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ ಗೆಲ್ಲಲು ವಿಫಲರಾಗಿದ್ದರು. ಅವರು ತಮ್ಮ ಮನೆಯ ಟರ್ಫ್ ಪಟಿಯಾಲ ಅರ್ಬನ್‌ನಲ್ಲಿ ಸೋತರು. ಅವರ ಯಾವೊಬ್ಬ ಅಭ್ಯರ್ಥಿಯೂ ಚುನಾವಣೆಯಲ್ಲಿ ಗೆದ್ದಿರಲಿಲ್ಲ.
"ಕ್ಯಾಪ್ಟನ್" ಎಂದು ಜನಪ್ರಿಯವಾಗಿರುವ ಅಮರಿಂದರ್ ಸಿಂಗ್ ಅವರು ಇತ್ತೀಚೆಗೆ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯ ನಂತರ ಲಂಡನ್‌ನಿಂದ ಹಿಂದಿರುಗಿದ್ದರು. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದರು.
ಸೆಪ್ಟೆಂಬರ್ 12ರಂದು ಅಮಿತ್ ಶಾ ಅವರೊಂದಿಗಿನ ಭೇಟಿಯ ನಂತರ, ಅಮರಿಂದರ್ ಸಿಂಗ್ ಅವರು "ರಾಷ್ಟ್ರೀಯ ಭದ್ರತೆ, ಪಂಜಾಬ್‌ನಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ, ಭಯೋತ್ಪಾದನೆಯ ಪ್ರಕರಣಗಳು ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ಭವಿಷ್ಯದ ಮಾರ್ಗಸೂಚಿ ಮುಂತಾದ ವಿಷಯಗಳ ಕುರಿತು ಸುದೀರ್ಘ ಚರ್ಚೆಯನ್ನು ನಡೆಸಿದ್ದರು.
ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅಮರಿಂದರ್ ಸಿಂಗ್ ಅವರು ಮಾಜಿ ಪಟಿಯಾಲ ರಾಜಮನೆತನಕ್ಕೆ ಸೇರಿದವರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಕಾಂಗ್ರೆಸ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆರವು ಮಾಡಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಆದರೆ ಕಾಂಗ್ರೆಸ್ ಪಕ್ಷವು ಫೆಬ್ರವರಿಯಲ್ಲಿ ನಡೆದ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ವಿರುದ್ಧ ಸೋತಿತ್ತು.












Click it and Unblock the Notifications