ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು: ಐವರ ದುರ್ಮರಣ
ಹಿಸಾರ್, ನವೆಂಬರ್ 21: ಫುಟ್ಪಾತ್ ಮೇಲೆ ಮಲಗಿದ್ದ ಹಲವು ಕಾರ್ಮಿಕರ ಮೇಲೆ ಕಾರೊಂದು ಹರಿದ ಪರಿಣಾಮ ಐವರು ಮೃತಪಟ್ಟ ಘಟನೆ ಹರ್ಯಾಣದಲ್ಲಿ ನಡೆದಿದೆ.
ಹರ್ಯಾಣದ ಹಿಸಾರ್ ಎಂಬಲ್ಲಿ ಫುಟ್ಪಾತ್ ಮೇಲೆ ಮಲಗಿದ್ದ ಸುಮಾರು 15 ಕ್ಕೂ ಹೆಚ್ಚು ಜನರ ಮೇಲೆ, ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹರಿದಿತ್ತು. ಇದರಿಂದ ಐವರು ಕಾರ್ಮಿಕರು ಮೃತರಾಗಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಬೆಳಗ್ಗಿನ ಜಾವ ಸುಮಾರು 2 ಗಂಟೆಯ ಸಮಯದಲ್ಲಿ ನಡೆದಿದೆ ಎನ್ನಲಾಗಿದೆ. ಹಾನ್ಶಿ ಎಂಬಲ್ಲಿಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ, ಮಲಗಿದ್ದವರ ಮೇಲೆ ಹರಿದಿದ್ದಲ್ಲದೆ, ನಂತರ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಸೇತುವೆಯೊಂದರ ಕೆಳಗೆ ಬಿದ್ದಿದೆ. ಎರಡೂ ಕಾರಿನ ಚಾಲಕರೂ ಗಂಭೀರವಾಗಿ ಗಾಯಗೊಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications