Breaking: ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಭಾರೀ ಸ್ಫೋಟ, ಹಲವರಿಗೆ ಗಾಯ
ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಕಾರೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಇದರಿಂದ ಸ್ಥಳೀಯರು ಮತ್ತು ಪ್ರಯಾಣಿಕರಲ್ಲಿ ಭೀತಿಯನ್ನುಂಟುಮಾಡಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸ್ಫೋಟ ಸಂಭವಿಸಿದೆ ಎಂದು ಕರೆ ಬಂದಿದ್ದು, ನಂತರ ಹತ್ತಿರದ ಮೂರರಿಂದ ನಾಲ್ಕು ವಾಹನಗಳು ಬೆಂಕಿಗೆ ಆಹುತಿಯಾಗಿ ಹಾನಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಇಲಾಖೆ ತಿಳಿಸಿದೆ.
ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯವಾಗಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಈ ಸ್ಫೋಟದ ನಿಖರ ಕಾರಣ ಪತ್ತೆ ಹಚ್ಚಲು ವಿಧಿವಿಜ್ಞಾನ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಇಲ್ಲಿ ಅಸಲಿಗೆ ಯಾವುದೇ ಅಕ್ರಮ ನಡೆದಿದೆಯೇ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಒಟ್ಟು 7 ಅಗ್ನಿಶಾಮಕ ದಳಗಳು ಸ್ಥಳಕ್ಕೆ ತಲುಪಿವೆ. ದೆಹಲಿ ಪೊಲೀಸ್ ವಿಶೇಷ ಘಟಕದ ತಂಡವೂ ಸ್ಥಳಕ್ಕೆ ತಲುಪಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. "ನಾವು ಹತ್ತಿರ ಬಂದಾಗ, ದೇಹದ ಭಾಗಗಳು ರಸ್ತೆಯಲ್ಲಿ ಹರಡಿಕೊಂಡಿರುವುದನ್ನು ನಾವು ನೋಡಿದ್ದೇವೆ. ಏನಾಯಿತು ಎಂದು ಯಾರಿಗೂ ಊಹಿಸಲು ಸಾಧ್ಯವಾಗಲಿಲ್ಲ. ಹಲವಾರು ಕಾರುಗಳು ಹಾನಿಗೊಳಗಾಗಿವೆ" ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ನನ್ನ ಜೀವನದಲ್ಲಿ ಇಷ್ಟೊಂದು ದೊಡ್ಡ ಸ್ಫೋಟವನ್ನು ನಾನು ಎಂದಿಗೂ ಕೇಳಿಲ್ಲ. ಸ್ಫೋಟದಿಂದಾಗಿ ನಾನು ಮೂರು ಬಾರಿ ಬಿದ್ದೆ. ನಾವೆಲ್ಲರೂ ಸಾಯುತ್ತೇವೆ ಎಂಬಂತೆ ಭಾಸವಾಯಿತು ಎಂದು ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುವ ವ್ಯಕ್ತಿ ಘಟನೆಯನ್ನು ವಿವರಿಸಿದ್ದಾರೆ.
ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ಬಂದ ನಂತರ ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮೂರರಿಂದ ನಾಲ್ಕು ವಾಹನಗಳು ಬೆಂಕಿಗೆ ಆಹುತಿಯಾಗಿ ಹಾನಿಯಾಗಿವೆ. ಭಾರೀ ಸ್ಫೋಟದಿಂದ ಕಾರಿನ ಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಸಾವುನೋವುಗಳಾಗಿದ್ದು, ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಚಾಂದನಿ ಚೌಕ್ ಮೆಟ್ರೋ ನಿಲ್ದಾಣದ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ನಮಗೆ ಮಾಹಿತಿ ಸಿಕ್ಕಿತು. ನಾವು ತಕ್ಷಣ ಪ್ರತಿಕ್ರಿಯಿಸಿದೆವು ಮತ್ತು ಏಳು ಘಟಕಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಸಂಜೆ 7:29ಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಇದರಲ್ಲಿ ಸಾವುನೋವುಗಳಿರುವ ಸಾಧ್ಯತೆಯಿದೆ. ನಮ್ಮ ಎಲ್ಲಾ ತಂಡಗಳು ಸ್ಥಳದಲ್ಲಿವೆ ಎಂದು ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎ.ಕೆ.ಮಲಿಕ್ ಹೇಳಿದ್ದಾರೆ.












Click it and Unblock the Notifications