ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌; ಸಿಐಡಿಗೆ ಕೇಸ್‌ ವರ್ಗಾವಣೆ ಸಾಧ್ಯತೆ

ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತಿಲಕ್‌ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇನ್ನು ಈ ಕೇಸ್‌ ಸಂಬಂಧ ಎಫ್‌ಐಆರ್‌ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಆದೇಶ ನೀಡಿತ್ತು. ಇದೀಗ ಈ ಕೇಸ್‌ನ ವಿಚಾರಣೆಯನ್ನು ಸಿಐಡಿಗೆ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಈ ಕೇಸ್‌ನಲ್ಲಿ ದಾಖಲಾಗಿದ್ದ ಎಫ್‌ಐಆರ್​​ನಲ್ಲಿ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ನಾಯಕರಾದ ನಳಿನ್ ಕುಮಾರ್ ಕಟೀಲ್‌ ಹಾಗೂ ಬಿವೈ ವಿಜಯೇಂದ್ರ ಹೆಸರು ಕೂಡ ಇದೆ. ಸಾಮಾನ್ಯವಾಗಿ 3 ಕೋಟಿ ರೂಪಾಯಿಗೂ ಹೆಚ್ಚಿನ ಹಣದ ಕೇಸ್‌ಗಳನ್ನು ಸಿಐಡಿಗೆ ವರ್ಗಾಯಿಸಲಾಗುತ್ತದೆ. ಅದರಂತೆ ಈ ಪ್ರಕರಣವನ್ನು ಕೂಡ ಸಿಐಡಿಗೆ ವಹಿಸುವ ಸಂಬಂಧ ನ್ಯಾಯಾಲಯದ ಅನುಮತಿ ಪಡೆಯಲು ಪೊಲೀಸರು ನಿನ್ನೆಯೇ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Case Against Nirmala Sitharaman Likely To Be Transferred To CID

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಈ ಪ್ರಕರಣದಲ್ಲಿ ಎ1 ಆರೋಪಿಯಾಗಿ ಮಾಡಲಾಗಿದೆ. ಇಡಿ ಅಧಿಕಾರಿಗಳು ಎ2, ರಾಷ್ಟ್ರೀಯ ಜನತಾ ಪಕ್ಷದ ಕಚೇರಿ ಎ3, ನಳಿನ್ ಕುಮಾರ್ ಕಟೀಲ್ ಎ4 ಹಾಗೂ ಬಿ.ವೈ ವಿಜಯೇಂದ್ರ ಅವರನ್ನು ಎ5 ಎಂದು ಉಲ್ಲೇಖಿಸಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ) ಸಹ ಅಧ್ಯಕ್ಷ ಆದರ್ಶ ಅಯ್ಯರ್ ನೀಡಿದ್ದ ಖಾಸಗಿ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ್ದ ನಗರದ 42ನೇ ಎಸಿಎಂಎಂ ಕೋರ್ಟ್‌ ಎಫ್‌ಐಆರ್‌ ಹಾಗೂ ಈ ಕೇಸ್‌ನ ದಾಖಲೆಯನ್ನು ಕಳಿಸುವಂತೆ ಸೂಚನೆ ನೀಡಿ ಆದೇಶಿಸಿತ್ತು.

Case Against Nirmala Sitharaman Likely To Be Transferred To CID

ಕೋರ್ಟ್ ಆದೇಶದ ಬೆನ್ನಲ್ಲೇ ತಿಲಕ್ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಐಪಿಸಿ 120 ಬಿ, ಐಪಿಸಿ 34, ಐಪಿಸಿ 384,120 ಬಿ ಸೆಕ್ಷನ್‌ಗಳ ಆಧಾರದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಅರ್ಜಿದಾರ ಆದರ್ಶ ಅಯ್ಯರ್ ಪರವಾಗಿ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದ್ದರು. ಸದ್ಯ ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.

ಮತ್ತೊಂದೆಡೆ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲು ಸಹ ಸಿದ್ಧತೆ ನಡೆದಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ಕಂಟಕ ಎದುರಾಗುವ ಸಾಧ್ಯತೆ ಇದೆ. ರಾಜಕೀಯ ಪಕ್ಷಗಳಿಗೆ ಕಪ್ಪು ಹಣ ಹರಿದುಬರುವುದನ್ನು ತಡೆಯಲು ಹಾಗೂ ರಾಜಕೀಯ ಪಕ್ಷಗಳಿಗೆ ಬರುವ ದೇಣಿಗೆಗಳಿಗೆ ಒಂದು ಹೊಣೆಗಾರಿಕೆಯನ್ನಾಗಿಸಲು ಚುನಾವಣಾ ಬಾಂಡ್‌ಗಳನ್ನು ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೆ ತಂದಿದೆ.

ದೂರುದಾರ ಆದರ್ಶ್ ಅಯ್ಯರ್ ಅವರು ಬೆದರಿಕೆ ಮತ್ತು ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಆರೋಪಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೋರ್ಟ್‌, ಈ ದೂರಿನ ಮೇರೆಗೆ ಆರೋಪಿಗಳ ಎಫ್‌ಐಆರ್‌ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಆದೇಶಿಸಿತ್ತು. ಇದರ ಬೆನ್ನಲ್ಲೇ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಕಂಟಕ ಎದುರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+