ಕಾಶ್ಮೀರದ 40 ಬ್ಯಾಂಕ್ ಶಾಖೆಗಳಲ್ಲಿ ನಗದು ವ್ಯವಹಾರ ಸ್ಥಗಿತ
ಜಮ್ಮು-ಕಾಶ್ಮೀರದ ಬ್ಯಾಂಕ್ ಗಳ ಮೇಲೆ ನಿರಂತರವಾಗಿ ಉಗ್ರರ ದಾಳಿ ನಡೆಯುತ್ತಿರುವ ರಕ್ಷಣಾ ಸಂಸ್ಥೆಗಳ ಸಲಹೆ ಆಧಾರದ ಮೇಲೆ ನಲವತ್ತು ಶಾಖೆಗಳಲ್ಲಿ ನಗದು ವ್ಯವಹಾರ ನಡೆಸದಿರಲು ತೀರ್ಮಾನಿಸಲಾಗಿದೆ
ಶ್ರೀನಗರ್, ಮೇ 6: ದಕ್ಷಿಣ ಕಾಶ್ಮೀರದಲ್ಲಿ ಉಗ್ರಗಾಮಿಗಳು ಬ್ಯಾಂಕ್ ಗಳನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ತುಂಬ ಸೂಕ್ಷ್ಮ ಪ್ರದೇಶವಾದ ಪುಲ್ವಾಮ ಹಾಗೂ ಶೋಪಿಯಾನ್ ನಲ ನಲವತ್ತು ಶಾಖೆಗಳಲ್ಲಿ ನಗದು ವ್ಯವಹಾರವನ್ನೇ ಸ್ಥಗಿತಗೊಳಿಸಲಾಗಿದೆ.
ರಕ್ಷಣಾ ಸಂಸ್ಥೆಗಳ ಸಲಹೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಈ ಎರಡು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವ ಬ್ಯಾಂಕ್ ಗಳಿಗೆ ನಗದು ವ್ಯವಹಾರಗಳನ್ನು ನಿಲ್ಲಿಸುವಂತೆ ಸೂಚಿಸಲಾಗಿತ್ತು. ಜಮ್ಮುಮತ್ತು ಕಾಶ್ಮೀರ ಬ್ಯಾಂಕ್ ಹಾಗೂ ಎಲ್ಲಾಕ್ವೈ ದೆಹಾತಿ ಬ್ಯಾಂಕ್ ನ ಶಾಖೆಗಳಲ್ಲಿ ನಗದು ವ್ಯವಹಾರಗಳನ್ನು ಮಾಡದಂತೆ ನಿರ್ಧರಿಸಲಾಗಿದೆ.[ಬ್ಯಾಂಕ್ ವಾಹನದ ಮೇಲೆ ಶಂಕಿತ ಉಗ್ರರ ದಾಳಿ, ಆರು ಮಂದಿ ಸಾವು]

ಎಟಿಎಂ ಸೇವೆ ಸೇರಿದಂತೆ ಇತರ ಬ್ಯಾಂಕ್ ಕಾರ್ಯಾಚರಣೆಗಳು ಈ ಪ್ರದೇಶಗಳಲ್ಲಿ ಮುಂದುವರಿಯಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಉಗ್ರರು ದಾಳಿ ನಡೆಸುವ ಸಾಧ್ಯತೆ ಬಗ್ಗೆ ರಕ್ಷಣಾ ಸಂಸ್ಥೆಗಳು ಮಾಹಿತಿ ನೀಡಿರುವುದರಿಂದ ಈ ಶಾಖೆಗಳಲ್ಲಿ ನಗದು ವ್ಯವಹಾರ ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ" ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಾರ್ವಜನಿಕರು ಇದೇ ಪ್ರದೇಶದ ಉಳಿದ ಕಡೆ ಯಾವ ಹತ್ತಿರದ ಬ್ಯಾಂಕ್ ಶಾಖೆಯಲ್ಲಿ ನಗದು ವ್ಯವಹಾರ ನಡೆಯುತ್ತದೋ ಅಲ್ಲಿ ಹಣ ತೆಗೆದುಕೊಳ್ಳಬಹುದು. ನಗದು ವ್ಯವಹಾರ ಸ್ಥಗಿತಗೊಳಿಸುವ ನಿರ್ಧಾರ ತಾತ್ಕಾಲಿಕವಾದದ್ದು. ಬ್ಯಾಂಕ್ ನೌಕರರ ಪ್ರಾಣಿ ಹಾಗೂ ಬ್ಯಾಂಕ್ ನ ಆಸ್ತಿ ರಕ್ಷಣೆಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ.[ಭಾರತೀಯ ಸೈನಿಕರ ದೇಹ ತುಂಡರಿಸಿದ ಪಾಕ್ ಸೇನೆ]
ಹೆಚ್ಚುವರಿ ರಕ್ಷಣಾ ವ್ಯವಸ್ಥೆ, ಬುಲೆಟ್ ಪ್ರೂಫ್ ನಗದು ವ್ಯಾನ್ ಸೇರಿದಂತೆ ಇತರ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಬ್ಯಾಂಕ್ ಗಳ ಮೇಲೆ ನಿರಂತರವಾಗಿ ಉಗ್ರರಿಂದ ದಾಳಿಗಳಾಗುತ್ತಿರುವ ಹಿನ್ನೆಲೆಯಲ್ಲಿ ಇಂಥ ತೀರ್ಮಾನ ಮಾಡಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications