ತಮಿಳುನಾಡಿಗೆ ನೀರು ಬಿಡಿ: ರಾಜ್ಯಕ್ಕೆ ಕಾವೇರಿ ಪ್ರಾಧಿಕಾರ ಆದೇಶ

ಬೆಂಗಳೂರು, ಜು. 2: ಸುಪ್ರೀಂಕೋರ್ಟ್‌ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.

ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಸುಪ್ರೀಂಕೋರ್ಟ್‌ ಆದೇಶದಂತೆ ರಾಜ್ಯವು ಜುಲೈನಲ್ಲಿ 31.24 ಟಿಎಂಸಿ ನೀರನ್ನು ಬಿಡುವಂತೆ ತಿಳಿಸಿದೆ. ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್‌. ಮಸೂದ್‌ ಹುಸೇನ್‌ ನೇತೃತ್ವದಲ್ಲಿ ಸಭೆ ನಡೆದಿದೆ.

ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ನಿರ್ದೇಶನ ನೀಡಿದ್ದಾರೆ. ಬಾಕಿ ಉಳಿಸಿಕೊಂಡಿರುವ ನೀರು ಜುಲೈ ತಿಂಗಳಲ್ಲಿ ಬಿಡುಗಡೆ ಮಾಡಬೇಕು, ಜುಲೈ ಅಂತ್ಯದೊಳಗೆ ಮತ್ತೊಮ್ಮೆ ಸಭೆ ಸೇರಲು ನಿರ್ಧರಿಸಲಾಗಿದೆ. ನಾಲ್ಕು ಗಂಟೆಗಳ ಕಾಲ ಸುದೀರ್ಘ ಸಭೆ ನಡೆಯಿತು.

Cauvery management authority ordered Karnataka to release

ಬಾಕಿ ಉಳಿಸಿಕೊಂಡಿರುವ ನೀರು ಜುಲೈ ತಿಂಗಳಲ್ಲಿ ಬಿಡುಗಡೆ ಮಾಡಬೇಕು, ಜುಲೈ ತಿಂಗಳಲ್ಲಿ 34 ಟಿಎಂಸಿ ನೀರು ಬಿಡಗಡೆ ಮಾಡಬೇಕು ಎಂದು ಆದೇಶಿಸಲಾಗಿದೆ.

9 ಸದಸ್ಯರಿರುವ ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ಕೇಂದ್ರ ಸರ್ಕಾರದ ಐವರು ಪ್ರತಿನಿಧಿ, ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿಯ ಒಂದೊಂದು ಪ್ರತಿನಿಧಿ ಇದ್ದರು. ಈ ಸಭೆಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಭಾಗಿಯಾಗಿದ್ದರು.

ಕೇಂದ್ರ ಸರ್ಕಾರ ಜೂನ್ 1ರಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿತ್ತು. ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಸೂಚನೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+