ತಮಿಳುನಾಡಿಗೆ 15 ದಿನದಲ್ಲಿ 9,000 ಕ್ಯುಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWMA ಆದೇಶ: ಸುಪ್ರೀಂ ಕೋರ್ಟ್ ಹೇಳಿದ್ದೇನು

ಕರ್ನಾಟಕವು ತಮಿಳುನಾಡಿಗೆ ಮುಂದಿನ 15 ದಿನಗಳ ವರೆಗೆ ಪ್ರತಿ ದಿನವೂ 9,000 ಕ್ಯುಸೆಕ್ (11.66 ಟಿಎಂಸಿ) ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಆಗಸ್ಟ್‌ 24ರ ಸೋಮವಾರ ನಿರ್ದೇಶನ ನೀಡಿದೆ. ಇನ್ನು ಇದೇ ಸಂದರ್ಭದಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ಬಿಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಮಗ್ರ ದತ್ತಾಂಶದೊಂದಿಗೆ ವರದಿ ಸಲ್ಲಿಸುವಂತೆ ಕರ್ನಾಟಕ ಹಾಗೂ ತಮಿಳುನಾಡಿನ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಕಾವೇರಿ ನದಿ ನೀರು ಹಂಚಿಕೆ ವಿವಾದದ ವಿಚಾರಣೆಯನ್ನು ಆಗಸ್ಟ್‌ 31ಕ್ಕೆ ಮುಂದೂಡಲಾಗಿದೆ. ಇದರ ಸಂಪೂರ್ಣ ವಿವರ ಈ ಲೇಖನದಲ್ಲಿದೆ.

ಕರ್ನಾಟಕ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಅನ್ವಯ ತಮಿಳುನಾಡಿಗೆ ನೀರು ಹರಿಸಿದೆ. ಆದರೆ, ಕಾವೇರಿ ನಿರ್ವಹಣಾ ಪ್ರಾಧಿಕಾರದ ನ್ಯಾಯಮಂಡಳಿಯ ತೀರ್ಪಿಗೆ ಅನುಗುಣವಾಗಿ ನೀರು ನಮಗೆ ಬಂದಿಲ್ಲ ಎಂದು ತಮಿಳುನಾಡು ಸರ್ಕಾರ ಪರ ವಕೀಲರು ವಾದ ಮಂಡಿಸಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಮಾಡುವುದರಲ್ಲಿ ಸಮಸ್ಯೆ ಏನು ಎಂದು ಪ್ರಶ್ನೆ ಮಾಡಲಾಗಿದ್ದು. ಇನ್ನುಳಿದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ರಾ ಅವರ ಪೀಠವು ಹೇಳಿದೆ.

Cauvery Water

ಆಗಸ್ಟ್‌ 24 ಹಾಗೂ ಆಗಸ್ಟ್‌ 25ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರದ ಸಭೆ ನಡೆಯಲಿದೆ ಎಂದು ವಕೀಲರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದರು. ಇದಾದ ನಂತರ ನ್ಯಾಯಪೀಠವು ಈ ವಿಚಾರಣೆಯನ್ನು ಆಗಸ್ಟ್‌ 31ಕ್ಕೆ ಮುಂದೂಡಿಕೆ ಮಾಡಿ ಆದೇಶ ಮಾಡಿದೆ.

12,000 ಬದಲು 9,000 ಕ್ಯುಸೆಕ್ ನೀರು

ಇನ್ನು ಸೋಮವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ 141ನೇ ಸಭೆಯಲ್ಲಿ ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆಗಸ್ಟ್ 25ರಂದು ಬೆಳಿಗ್ಗೆ 8 ಗಂಟೆಯಿಂದ ಮುಂದಿನ 15 ದಿನಗಳ ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಒಟ್ಟು 11.66 ಟಿಎಂಸಿ ನೀರನ್ನು ಕರ್ನಾಟಕದ ಜಲಾಶಯಗಳಿಂದ ನೀರು ಬಿಡಬೇಕು ಎಂದು ಹೇಳಲಾಗಿದೆ.

ಈ ಅವಧಿಯಲ್ಲಿ ಬಿಳಿಗುಂಡ್ಲುವಿನ ಹರಿವನ್ನು 9 ಸಾವಿರ ಕ್ಯುಸೆಕ್ ಮಟ್ಟದಲ್ಲಿ ಖಚಿತಪಡಿಸುವ ಜವಾಬ್ದಾರಿ ಕರ್ನಾಟಕದ ಪ್ರತಿನಿಧಿಗಳ ಮೇಲಿರಲಿದೆ ಎಂದೂ ಆದೇಶದಲ್ಲಿ ಉಲ್ಲೇಖ ಮಾಡಕಾಗಿದೆ. ಈ ಹಿಂದೆ 12 ಸಾವಿರ ಕ್ಯುಸೆಕ್ ನೀರು ಹರಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಕರ್ನಾಟಕವು ಜಲಾಯಶಗಳಿಗೆ ನೀರಿನ ಮಟ್ಟ ಇಳಿಕೆ ಆಗಿರುವುದನ್ನು ಪ್ರಾಧಿಕಾರದ ಮುಂದಿಟ್ಟಿದೆ. ಹೀಗಾಗಿ, ನೀರು ಹಂಚಿಕೆ ಪ್ರಮಾಣವನ್ನು 12 ಸಾವಿರದಿಂದ 9 ಸಾವಿರಕ್ಕೆ ಇಳಿಕೆ ಮಾಡಲಾಗಿದೆ.

ರೈತರ ಕುರಿತು ಕಾಳಜಿ ಇಲ್ಲದ ರಿಯಲ್ ಎಸ್ಟೇಟ್ ಸರ್ಕಾರ: ಬಿಜೆಪಿ

ರೈತರ ಕುರಿತು ಕಾಳಜಿ ಇಲ್ಲದ ರಿಯಲ್ ಎಸ್ಟೇಟ್ ಸರ್ಕಾರ ಎಂದು ಕರ್ನಾಟಕ ಬಿಜೆಪಿ ಟೀಕೆ ಮಾಡಿದೆ. ಕಬಿನಿ ಜಲಾಶಯ ನಿರ್ಮಿಸಿರುವುದೇ ತಮಿಳುನಾಡಿಗೆ ನೀರು ಬಿಡಲು ಎಂದು ಕಾಂಗ್ರೆಸ್‌ ಸರ್ಕಾರ ಅಂದಾಜಿಸಿರುವಂತಿದೆ. ಕರ್ನಾಟಕದ ಹಿತಾಸಕ್ತಿಯನ್ನು ಬಲಿಕೊಟ್ಟು, ರಾಜಕೀಯ ಬೇಳೆ ಬೇಯಿಸಿ ಕೊಳ್ಳುತ್ತಿರುವುದರ ವಿರುದ್ಧ ರೈತ ಸಮುದಾಯ ಬೀದಿಗಿಳಿದಿದೆ. ನಾಡಿನ ರೈತರ ಕಣ್ಣೀರೊರೆಸುವ ಬದಲು, ನೆರೆ ರಾಜ್ಯದ ರಾಜಕೀಯ ಒತ್ತಡಕ್ಕೆ ಮಣಿದಿರುವ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕರ್ನಾಟಕ ಬಿಜೆಪಿಯು ಟೀಕೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+